ಬೆಂಗಳೂರು : ಇಂದು ಕರ್ನಾಟಕಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸಿದ್ದು ಇಂದಿನಿಂದ ಒಂದು ವಾರದ ವರೆಗೆ ರಾಜ್ಯದಲ್ಲಿ ಭಾರಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ನೈಋತ್ಯ ಮಾನ್ಸೂನ್ ಹಿನ್ನೆಲೆ ಇವತ್ತು ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಯಚೂರು, ಕೊಪ್ಪಳ ಮಂಡ್ಯ, ಮೈಸೂರು ಸೇರಿದಂತೆ ಗುಡುಗು ಸಹಿತ ಭಾರೀ ಮಳೆ ಮೂನ್ಸುಚನೆ ನೀಡಲಾಗಿದೆ.
40-50 ಕಿಮೀ ವೇಗದ ಗಾಳಿಯೊಂದಿಗೆ ಮಳೆ ಸಾಧ್ಯತೆ ಇದೆ. ಹಾಗಾಗಿ ಕರ್ನಾಟಕದಲ್ಲಿ ನೈರುತ್ಯ ಮಾನ್ಸೂನ್ ಪ್ರವೇಶಿಸಿದ್ದರಿಂದ 1 ವಾರದವರೆಗೆ ಮುಂಗಾರು ಮಳೆ ಚುರುಕುಗೊಂಡಿದೆ. ಇಂದಿನಿಂದ ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಒಂದು ವಾರ ಭಾರೀ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆಯ ಮುನ್ಸೂಚನೆ ನೀಡಿದೆ.
ಇನ್ನೂ ನಿನ್ನೆ ಆನೇಕಲ್, ಎಲೆಕ್ಟ್ರಾನಿಕ್ ಸುತ್ತಮುತ್ತ ಮಳೆ ಸುರಿದಿದ್ದು, ಜನ ಪರದಾಡಿದ್ದರು. ಹೊಸೂರು ಹೈವೇಯಲ್ಲಿ ಸುಮಾರು ನಾಲ್ಕು ಕಿಲೋ ಮೀಟರ್ವರೆಗೆ ಟ್ರಾಫಿಕ್ ಜಾಮ್ ಉಂಟಾಗಿತ್ತು. ಅತ್ತ, ನೆಲಮಂಗಲದಲ್ಲಿ ಸುರಿದ ಜೋರು ಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಸವಾರರು ಪರದಾಡಿದ್ದರು.ಇವತ್ತು ಸಾಯಂಕಾಲ ಬೆಂಗಳೂರಿನಲ್ಲಿ ಮಳೆ ಸಾಧ್ಯತೆ ಎಂದು ಹವಾಮಾನ ಇಲಾಖೆ ಮೂನ್ಸುಚನೆ ನೀಡಿದ್ದು, ನಿನ್ನೆ ಕೂಡ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆರಾಯ ಅಬ್ಬರಿಸಿದ್ದ.