ಚಿಕ್ಕಮಗಳೂರು: ನೈರುತ್ಯ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿರುವಂತ ಡಾ.ಕೆ ಕೆ ಮಂಜುನಾಥ್ ಕುಮಾರ್ ಅವರು ನಾಳೆ ಚಿಕ್ಕಮಗಳೂರಿಗೆ ಭೇಟಿ ನೀಡುತ್ತಿದ್ದಾರೆ. ನಾಳೆ ಕಾಫಿನಾಡಿನಲ್ಲಿ ಮತಬೇಟೆಯಲ್ಲಿ ತೊಡಗಲಿದ್ದಾರೆ.
ನಾಳೆ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿ ಡಾ. ಕೆ ಕೆ ಮಂಜುನಾಥ್ ಕುಮಾರ್ ರವರ ಚಿಕ್ಕಮಗಳೂರು ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ನಾಳೆ ಬೆಳಿಗ್ಗೆ 10 ಗಂಟೆಗೆ ಚಿಕ್ಕಮಗಳೂರಿಗೆ ಆಗಮಿಸಲಿರುವಂತ ಅವರು, ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾ ಘೋಷ್ಠಿಯನ್ನು ನೆಡೆಸಲಿದ್ದಾರೆ.
ನಾಳೆ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 12 ಗಂಟೆಯವರೆಗೆ ಚಿಕ್ಕಮಗಳೂರಲ್ಲಿ ನೈರುತ್ಯ ಶಿಕ್ಷಕರ ಕ್ಷೇತ್ರದ ಅಭ್ಯರ್ಥಿಯಾಗಿ ಡಾ.ಕೆ ಕೆ ಮಂಜುನಾಥ್ ಕುಮಾರ್ ಮತಯಾಚನೆಯ ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ.
ಚಿಕ್ಕಮಗಳೂರಿನ ನಾಳೆಯ ಪ್ರಚಾರ ಸಭೆಯ ಉದ್ಘಾಟನೆ ಕಾರ್ಯಕ್ರಮದಲ್ಲಿ ಇಂಧನ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದಂತ ಕೆ.ಜೆ ಜಾರ್ಜ್, ಶಿಕ್ಷಣ ಸಚಿವ ಮಧು ಬಂಗಾರಪ್ಪ, ಚಿಕ್ಕಮಗಳೂರು ಜಿಲ್ಲಾಧ್ಯಕ್ಷರು, ಶಾಸಕರು, ಜಿಲ್ಲಾ ಪದಾಧಿಕಾರಿಗಳು ಸೇರಿದಂತೆ ಇತರರು ಭಾಗಿಯಾಗಲಿದ್ದಾರೆ.