ತುಮಕೂರು: ಜಿಲ್ಲೆಯಲ್ಲಿ ಲೋಕಸಭಾ ಚುನಾವಣಾ ಹಿನ್ನಲೆಯಲ್ಲಿ ಶಾಂತಿ, ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ತುಮಕೂರು ಜಿಲ್ಲೆಯಿಂದ 31 ಕುಖ್ಯಾತ ರೌಡಿಗಳನ್ನು ಗಡಿಪಾರು ಮಾಡಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಶೋಕ್ ಕೆ ವೆಂಕಟ್ ಆದೇಶಿಸಿದ್ದಾರೆ.
ಈ ಕುರಿತಂತೆ ಇಂದು ಪತ್ರಿಕಾ ಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಅವರು, ಲೋಕಸಭಾ ಚುನಾವಣೆಯ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಇದರ ಭಾಗವಾಗಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿರುವಂತ 31 ರೌಡಿ ಶೀಟರ್ ಗಳನ್ನು ಜಿಲ್ಲೆಯಿಂದ ಗಡಿಪಾರು ಮಾಡಲಾಗಿದೆ ಎಂದರು.
ಇತ್ತೀಚೆಗೆ ಬೆಂಗಳೂರು ಜೈಲಿನಿಂದ ಬಿಡುಗಡೆಯಾಗಿದ್ದಂತ ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಮೋದೂರು ಗ್ರಾಮದ ಕುಣಿಗಲ್ ಗಿರಿ ಸೇರಿದಂತೆ 31 ರೌಡಿ ಶೀಟರ್ ಗಳನ್ನು ಗಡಿಪಾರು ಮಾಡಲಾಗಿದೆ ಎಂದು ಹೇಳಿದರು.
ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ತುಮಕೂರಲ್ಲಿ ಬಿಗಿ ಬಂಧೋಬಸ್ತ್ ಕೈಗೊಳ್ಳಲಾಗಿದೆ. ಸಾರ್ವಜನಿಕ ವಲಯದಲ್ಲಿ ಅಶಾಂತಿ ಮೂಡಿಸುವಂತ 1200 ಮಂದಿಯ ಮೇಲೆ ಜಿಲ್ಲೆಯಲ್ಲಿ ವಿಶೇಷ ನಿಗಾ ವಹಿಸಲಾಗಿದೆ. ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಒಬ್ಬ ಪೊಲೀಸ್ ಅಧಿಕಾರಿಯನ್ನು ನೋಡಲ್ ಆಫೀಸರ್ ಆಗಿ ನೇಮಕ ಮಾಡಲಾಗಿದೆ ಎಂದರು.
‘ಕಾಂಗ್ರೆಸ್ ಪಕ್ಷ’ದವರು ರೈತರು, ವಿದ್ಯಾರ್ಥಿಗಳು, ದಲಿತರಿಗೆ ‘ಚಂಬು’ ಕೊಟ್ಟಿದ್ದಾರೆ: ಬೊಮ್ಮಾಯಿ ಕಿಡಿಕಿಡಿ
ಕರ್ನಾಟಕಕ್ಕೆ ಪ್ರಧಾನಿ ಮೋದಿ ಚೊಂಬು ಕೊಟ್ಟಿದ್ದಾರೆ: ಕೇಂದ್ರ ಸರ್ಕಾರದ ವಿರುದ್ದ ಸಿಎಂ ಸಿದ್ದರಾಮಯ್ಯ ವಾಗ್ದಾಳಿ!