ಬೆಂಗಳೂರು: ಕೇಂದ್ರ ಸಚಿವರಾದ ನಂತ್ರ ಹೆಚ್.ಡಿ ಕುಮಾರಸ್ವಾಮಿ, ಸಂಸದರಾದ ಬಳಿಕ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಇ.ತುಕಾರಾಂ ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಈ ರಾಜೀನಾಮೆಗಳನ್ನು ಸ್ಪೀಕರ್ ಯು.ಟಿ ಖಾದರ್ ಅಂಗೀಕರಿಸಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಹೆಚ್.ಡಿ ಕುಮಾರಸ್ವಾಮಿ, ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕ ಬಸವರಾಜ ಬೊಮ್ಮಾಯಿ ಹಾಗೂ ಸಂಚೂರು ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಕ್ಕೆ ಇ.ತುಕಾರಾಂ ರಾಜೀನಾಮೆ ಸಲ್ಲಿಸಿದ್ದರು ಎಂದಿದ್ದಾರೆ.
ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಬಸವರಾಜ ಬೊಮ್ಮಾಯಿ ಹಾಗೂ ಇ.ತುಕಾರಾಂ ಅವರು ಶಾಸಕ ಸ್ಥಾನಕ್ಕೆ ಸಲ್ಲಿಸಿದ್ದಂತ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ. ಹೀಗಾಗಿ ಚನ್ನಪಟ್ಟಣ, ಶಿಗ್ಗಾಂವಿ ಹಾಗೂ ಸಂಡೂರು ವಿಧಾನಸಭಾ ಕ್ಷೇತ್ರದ ಶಾಸಕ ಸ್ಥಾನಗಳು ಖಾಲಿ ಉಳಿದಿರುವುದಾಗಿ ತಿಳಿಸಿದ್ದಾರೆ.
ರಾಜ್ಯ ಸರ್ಕಾರದಿಂದ ಪೆಟ್ರೋಲ್, ಡೀಸೆಲ್ ಮೇಲಿನ ತೆರಿಗೆ ಹೆಚ್ಚಳ: ಶೀಘ್ರವೇ ಹೆಚ್ಚಾಗಲಿದೆ ರೇಟ್