ಬೆಂಗಳೂರು : ಪಾಕಿಸ್ತಾನದ ಪರವಾಗಿ ಯಾರೇ ಮಾತನಾಡಿದರೂ ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಮಾಧ್ಯಮದವರೊಂದಿಗೆ ಮಾತನಾಡಿದರು.
ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪದ ಮೇಲೆ ಗುಂಪು ಹತ್ಯೆ ಮಾಡಿದ ಪ್ರಕರಣದಲ್ಲಿ 15 ಮಂದಿ ವಿರುದ್ಧ ಪ್ರಕರಣ ದಾಖಲಾಗಿದೆ. ತನಿಖೆ ನಡೆಯುತ್ತಿದೆ. ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುವುದು. ಯಾರೇ ಪಾಕಿಸ್ತಾನದ ಪರವಾಗಿ ಮಾತನಾಡಿದರೆ ಅದು ತಪ್ಪು ಎಂದರು.
ಬಸವಣ್ಣನನ್ನು ಸ್ಮರಿಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ
ಅಂಥವರನ್ನು ನೆನೆಸುವುದು ಪ್ರತಿಯೊಬ್ಬ ಕನ್ನಡಿಗರ ಹಾಗೂ ಭಾರತೀಯನ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಅವರು ಇಂದು ಬಸವ ಸಮಿತಿ ಆಯೋಜಿಸಿದ್ದ ವಿಶ್ವ ಗುರು ಬಸವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ಸರ್ಕಾರ ಅವರಿಗೆ ಕೃತಜ್ಞತೆಯನ್ನು ಸಲ್ಲಿಸುವ ಸಲುವಾಗಿ ಸಾಂಸ್ಕೃತಿಕ ನಾಯಕ ಎಂದು ಗುರುತಿಸಿದೆ. ಬಸವಣ್ಣ ವಿಶ್ವ ಗುರುಗಳಾಗಿದ್ದು, ಅವರು ಕೇವಲ ಸಾಮಾಜಿಕ ಕ್ರಾಂತಿ ಮಾಡಿದವರಲ್ಲ, ಸಮಾಜದ ಪರಿವರ್ತನೆಗೆ ಇತಿಹಾಸದಲ್ಲಿ ಶಾಶ್ವತವಾಗಿ ನೆಲೆಸುವ, ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿಯುವ ಕೆಲಸವನ್ನು ಬಸವಣ್ಣ ತಮ್ಮ ಜೀವಿತ ಕಾಲದಲ್ಲಿ ಮಾಡಿದ್ದಾರೆ ಎಂದು ತಿಳಿಸಿದ ಮುಖ್ಯಮಂತ್ರಿಗಳು ಬಸವ ಜಯಂತಿಯ ಶುಭಾಶಯಗಳನ್ನು ತಿಳಿಸಿದರು.
BREAKING: ಸ್ವೀಡನ್ ನಲ್ಲಿ ಗುಂಡಿನ ದಾಳಿ: ಮೂವರ ಸಾವು, ಹಲವರಿಗೆ ಗಾಯ | Sweden shooting
BREAKING : ಭಯೋತ್ಪಾದಕ `ಹಫೀಜ್ ಸಯೀದ್’ ಅಡಗುತಾಣ ಪತ್ತೆ : ಉಪಗ್ರಹ ಚಿತ್ರಗಳ ಮೂಲಕ ಮನೆ ಬಹಿರಂಗ.!