ಬೆಂಗಳೂರು: ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಆಷಾಢ ಶುಕ್ರವಾರಕ್ಕೆ ಸಕಲ ಸಿದ್ಧತೆ ಕೈಗೊಳ್ಳಲಾಗಿದೆ. ಇದರ ಜೊತೆ ಜೊತೆಗೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಆಷಾಢ ಶುಕ್ರವಾರದಂದು ದರ್ಶನಕ್ಕೆ ತೆರಳೋರಿಗೆ ವಿಶೇಷ ಕೆ ಎಸ್ ಆರ್ ಟಿಸಿ ಬಸ್ ವ್ಯವಸ್ಥೆಯನ್ನು ಮಾಡಲಾಗಿದೆ.
ಕೆ ಎಸ್ ಆರ್ ಟಿಸಿಯಿಂದ ಮಾಹಿತಿ ಹಂಚಿಕೊಂಡಿದ್ದು, ಮೈಸೂರು ಚಾಮುಂಡಿಬೆಟ್ಟದಲ್ಲಿ ಆಷಾಢ ಮಾಸದ ಪ್ರಯುಕ್ತ ಹಲವಾರು ಅನುಕೂಲಗಳನ್ನು ಕಲ್ಪಿಸಲಾಗಿದ್ದು, ಈ ಬಾರಿಯೂ ಪಾಸ್ ವ್ಯವಸ್ಥೆ ಇರುವುದಿಲ್ಲ. ದರ್ಶನಕ್ಕೆ ವಿಶೇಷ ಟಿಕೆಟ್ ವ್ಯವಸ್ಥೆ ಇದೆ ಅಂತ ತಿಳಿಸಿದೆ.
ಆಷಾಢ ಶುಕ್ರವಾರಗಳಾದ ಜುಲೈ 12,19,26, ಆಗಸ್ಟ್ 26 ಮತ್ತು ಚಾಮುಂಡೇಶ್ವರಿ ವರ್ಧಂತಿ ದಿನವಾದ 27 ರಂದು ದೇವಾಲಯದ ವತಿಯಿಂದ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಉಚಿತವಾಗಿ ಬೆಟ್ಟಕ್ಕೆ ಪ್ರಯಾಣಿಸಲು ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಅಂತ ಮಾಹಿತಿ ನೀಡಿದೆ.
BREAKING: 18,000 ಲಂಚಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ‘KSRP ಇನ್ಸ್ ಪೆಕ್ಟರ್’
ಹುಬ್ಬಳ್ಳಿ ನೇಹಾ ಕೊಲೆ ಕೇಸ್ : ಹತ್ಯೆಗೆ ‘ಲವ್ ಜಿಹಾದ್’ ಕಾರಣವಲ್ಲ : ಚಾರ್ಜ್ ಶೀಟ್ ನಲ್ಲಿ ಉಲ್ಲೇಖ!