ಬೆಂಗಳೂರು: ಸಿಎಂ ಸಿದ್ಧರಾಮಯ್ಯ ಅವರು ರಾಜ್ಯ ಬಜೆಟ್ 2025-26ಕ್ಕೆ ಮಂಡನೆಗೆ ಪೂರ್ವದಲ್ಲಿ ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆ ನಡೆಸಿದರು. ಈ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ರಾಜ್ಯ ಬಜೆಟ್ 2025-26ಕ್ಕೆ ಅನುಮೋದನೆ ಪಡೆದರು.
ಇಂದು ಬಜೆಟ್ ಮಂಡನೆಗೂ ಮುನ್ನ ಸಿಎಂ ಸಿದ್ಧರಾಮಯ್ಯ ಅವರು ವಿಧಾನಸೌಧದಲ್ಲಿ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯನ್ನು ನಡೆಸಿದರು. ಈ ಸಭೆಯಲ್ಲಿ ರಾಜ್ಯ ಬಜೆಟ್ 2025-26 ಅನ್ನು ಮಂಡನೆ ಮಾಡುವುದಕ್ಕೆ ಅನುಮತಿ ಕೋರಿದರು. ಇಂದಿನ ವಿಶೇಷ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆಗೆ ಅನುಮೋದನೆ ನೀಡಲಾಗಿದೆ.
ಅಂದಹಾಗೇ ಇಂದು ಸಿಎಂ ಸಿದ್ಧರಾಮಯ್ಯ ಮಂಡಿಸುತ್ತಿರುವಂತ ರಾಜ್ಯ ಬಜೆಟ್ ಗಾತ್ರ 4.09 ಲಕ್ಷ ಕೋಟಿ ಆಗಿದೆ ಎನ್ನಲಾಗುತ್ತಿದೆ. ವಿಧಾನಸಭೆಯಲ್ಲಿ ಕೆಲವೇ ಕ್ಷಣಗಳಲ್ಲಿ ಸಿಎಂ ಸಿದ್ಧರಾಮಯ್ಯ ಅವರು ಬಜೆಟ್ ಮಂಡನೆ ಮಾಡಲಿದ್ದಾರೆ.
ರಾಜ್ಯದಲ್ಲಿ ಗಲಭೆ ಸೃಷ್ಟಿಸಿದರೇ ಸ್ವಯಂಪ್ರೇರಿತ ಕೇಸ್ ದಾಖಲು: ಗೃಹ ಸಚಿವ ಡಾ.ಜಿ ಪರಮೇಶ್ವರ್ ಎಚ್ಚರಿಕೆ