ಬೆಂಗಳೂರು : ಕರ್ನಾಟಕ ಗಡಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಸಿಎಂ ಬೊಮ್ಮಾಯಿ ಘೋಷಿಸಿದರು.
ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಬೊಮ್ಮಾಯಿ ಮಹಾರಾಷ್ಟ್ರದಲ್ಲಿರುವ ಕನ್ನಡ ಶಾಲೆಯ ಅಭಿವೃದ್ಧಿಗೆ ವಿಶೇಷ ಅನುದಾನವನ್ನು ರಾಜ್ಯ ಸರ್ಕಾರ ನೀಡಲಿದೆ, ಕರ್ನಾಟಕ ಏಕೀಕರಣ ಹಾಗೂ ಸ್ವಾತಂತ್ರ್ಯ ಹೋರಾಟದಲ್ಲಿ ಪಾಲ್ಗೊಂಡಿದ್ದ ಮತ್ತು ಗೋವಾ ವಿಮೋಚನೆಗೆ ಕೆಲಸ ಮಾಡಿದ ಮಹಾರಾಷ್ಟ್ರದಲ್ಲಿರುವ ಕನ್ನಡಿಗರಿಗೆ ಪಿಂಚಣಿ ನೀಡಲಾಗುತ್ತದೆ, ಈ ಸಂಬಂಧ ಸರ್ಕಾರ ಅಗತ್ಯ ದಾಖಲೆಗಳನ್ನು ತರಿಸಿಕೊಳ್ಳಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.
ಮಂಗಳೂರಿನಲ್ಲಿ ಕುಕ್ಕರ್ ಸ್ಫೋಟ ಪ್ರಕರಣದ ಕುರಿತು ಬೊಮ್ಮಾಯಿ ಹೇಳಿದ್ದೇನು..?
ಮಂಗಳೂರಿನಲ್ಲಿ ಕುಕ್ಕರ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಚಿತ್ರದುರ್ಗದಲ್ಲಿ ಹೇಳಿದರು.ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ವಾಣಿ ವಿಲಾಸ ಜಲಾಶಯದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ರಾಜ್ಯದ ಹಿಂದುಗಳನ್ನು ಭಯೋತ್ಪಾದಕರು ಟಾರ್ಗೆಟ್ ಮಾಡಿದ್ದಾರೆ. ಹಾಗಾಗಿ ಈ ಕುಕ್ಕರ್ ಸ್ಫೋಟ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಲಾಗಿದೆ,” ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಈಗಾಗಲೇ ಕರ್ನಾಟಕ ಪೋಲಿಸ್ 18 ಸ್ಲಿಪರ್ ಸೇಲ್ ಹಿಡಿದು ತಿಹಾರ್ ಜೈಲಿಗೆ ಕಳಿಸಿದ್ದಾರೆ. ಆದರೂ ಕೂಡ ಇದು ನಿರಂತರವಾಗಿ ನಡೆಯುತ್ತಿದೆ ಎಂದರು. ಭಯೋತ್ಪಾದಕರು ಹೊರ ರಾಜ್ಯಗಳ ಸಂಪರ್ಕ ಇಟ್ಟುಕೊಂಡು ರಾಜ್ಯಕ್ಕೆ ನುಸುಳುತಿದ್ದಾರೆ.ಅಂತಹವರನ್ನು ನಿಯಂತ್ರಣ ಮಾಡಲಾಗಿದೆ. ದೇಶದ ಸುರಕ್ಷತೆ ಇಟ್ಟುಕೊಂಡು ಗಂಭೀರವಾಗಿ ಪರಿಗಣಿಸಲಾಗಿದೆ ಎಂದರು. ಕುಕ್ಕರ್ ಸ್ಫೋಟ ಪ್ರಕರಣಕ್ಕೆ ಬಂಧಿಸಿದ ಆರೋಪಿಯ ಬಗ್ಗೆ 24 ಗಂಟೆಯೊಳಗೆ ನಿಜವಾದ ಮಾಹಿತಿ ತಿಳಿದುಬರಲಿದೆ. ಇದರ ಹಿಂದೆ ರಾಷ್ಟ್ರ ಅಥವಾ ಅಂತಾರಾಷ್ಟ್ರೀಯ ಮಟ್ಟದ್ದು ಯಾವುದೇ ಆಗಿದ್ದರೂ ಅದನ್ನು ಭೇದಿಸಲು ಎನ್ಐಎ ಎಲ್ಲ ಕ್ರಮಗಳನ್ನು ಕೈಗೊಂಡಿದೆ ಎಂದು ತಿಳಿಸಿದರು.
BIGG NEWS : ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದ : ಇಂದು ಸುಪ್ರೀಂಕೋರ್ಟ್ ತೀರ್ಪು ಪ್ರಕಟ
ಅಭ್ಯರ್ಥಿಗಳೇ ಗಮನಿಸಿ : ಶಿಕ್ಷಕರ ನೇಮಕ ಆಯ್ಕೆ ಪಟ್ಟಿಗೆ ಆಕ್ಷೇಪಣೆ ಸಲ್ಲಿಸಲು ದಿನಾಂಕ ವಿಸ್ತರಣೆ