ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಕ್ಕಳು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಆರಂಭಿಸಲಾಗಿರುವ ಓದುವ ಬೆಳಕು ಕಾರ್ಯಕ್ರಮದಡಿ ಸೆಪ್ಟೆಂಬರ್ ತಿಂಗಳಿನಲ್ಲಿ ಶಿಕ್ಷಕರ ದಿನ, ಅಜ್ಜಿ ತಾತಂದಿರ ದಿನ, ಪ್ರಜಾಪ್ರಭುತ್ವ ದಿನ ಸೇರಿದಂತೆ ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
ಗ್ರಾಮೀಣ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ಮರಳಿ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿಯನ್ನು ಹೊಂದಲಾಗಿದ್ದು, ಗ್ರಾಮ ಪಂಚಾಯತಿಗಳ ಅರಿವು ಕೇಂದ್ರಗಳನ್ನು ಗ್ರಾಮೀಣ ಜ್ಞಾನ ಕೇಂದ್ರಗಳನ್ನಾಗಿಸಲು ಕ್ರಮ ಕೈಗೊಳ್ಳಲಾಗಿದೆಯಲ್ಲದೆ ಓದುವ ಬೆಳಕು ಕಾರ್ಯಕ್ರಮದಡಿ ಅರಿವು ಕೇಂದ್ರಗಳಲ್ಲಿ ಹಲವಾರು ಅಭಿಯಾನಗಳ ಮೂಲಕ ಪ್ರತಿ ತಿಂಗಳು ಉಪಯುಕ್ತ ಚಟುವಟಿಕೆಯನ್ನು ಆಯೋಜಿಸಲಾಗುತ್ತಿದೆ ಎಂದೂ ಸಚಿವರು ಹೇಳಿದ್ದಾರೆ.
ತಮ್ಮ ಜೀವನದಲ್ಲಿ ಸ್ಫೂರ್ತಿ ತುಂಬಿದ ವಿವಿಧ ಶಿಕ್ಷಕರ ಕುರಿತು ಪ್ರಬಂಧ ಬರೆಯುವುದು ಸೇರಿದಂತೆ ಸೆ.5ರಂದು ಶಿಕ್ಷಕರ ದಿನದ ಅಂಗವಾಗಿ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ, ಸೆಪ್ಟೆಂಬರ್ 8ರಂದು ಅಂತರ ರಾಷ್ಟ್ರೀಯ ಅಜ್ಜಿ-ತಾತಂದಿರ ದಿನವಾಗಿದ್ದು ಅಂದು ಊರಿನ ಹಿರಿಯರನ್ನು ಅರಿವು ಕೇಂದ್ರಗಳಿಗೆ ಆಹ್ವಾನಿಸಿ ಅವರಿಂದ ಕಥೆ ಹೇಳಿಸುವುದು ಅಥವಾ ಅನುಭವ ಹಂಚಿಕೊಳ್ಳಲು ವ್ಯವಸ್ಥೆ ಮಾಡಲಾಗುವುದು, ಸೆಪ್ಟೆಂಬರ್ 8ರಂದು ಅಂತರ ರಾಷ್ಟ್ರೀಯ ಸಾಕ್ಷರತಾ ದಿನದ ಸಲುವಾಗಿ ‘ಗಟ್ಟಿ ಓದುʼ ಚಟುವಟಿಕೆ ಮೂಲಕ ಪ್ರತಿದಿನವೂ ಒಂದು ಕಥೆಯನ್ನು ಮಕ್ಕಳಿಂದ ಓದಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಸೆ. 15ರಂದು ಅಂತಾರಾಷ್ಟೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಗ್ರಾಮ ಪಂಚಾಯತಿ ಅರಿವು ಕೇಂದ್ರಗಳಿಗೆ ಬರುವ ವಿದ್ಯಾರ್ಥಿಗಳಿಂದ ಭಾರತ ಸಂವಿಧಾನದ ಪೀಠಿಕೆಯನ್ನು ಸಾಮೂಹಿಕವಾಗಿ ವಾಚನ ಮಾಡಿಸಲಾಗುವುದು, ಸೆ. 15ರಂದು ರಾಷ್ಟ್ರೀಯ ಇಂಜಿನಿಯರ್‌ಗಳ ದಿನದಂದು ಸರ್ ಎಂ.ವಿಶ್ವೇಶ್ವರಯ್ಯನವರು ವಿವಿಧ ವಲಯಗಳಿಗೆ ನೀಡಿದ ಕೊಡುಗೆಯನ್ನು ಸ್ಮರಿಸಲಾಗುವುದು ಎಂದು ಸಚಿವರು ತಿಳಿಸಿದ್ದಾರೆ.
BREAKING: ಉತ್ತರ ಕನ್ನಡದಲ್ಲಿ ಮನಕಲಕುವ ಘಟನೆ: 1 ದಿನದ ನವಜಾತ ಶಿಶುವನ್ನು ಪೊದೆಯಲ್ಲಿ ಬಿಸಾಡಿದ ದುಷ್ಕರ್ಮಿಗಳು
BREAKING : ಕುಸ್ತಿಪಟು ವಿನೇಶ್ ಪೋಗಾಟ್, ಭಜರಂಗ್ ಪೂನಿಯಾ ಕಾಂಗ್ರೆಸ್ ಸೇರ್ಪಡೆ | Joining Congress
BIG NEWS : 19 ವರ್ಷಗಳ ನಂತರ ಈ ದೇಶದಲ್ಲಿ ಮುಸ್ಲಿಂ ಆಳ್ವಿಕೆ, ಮಹಾಯುದ್ಧ : `ಬಾಬಾ ವಂಗಾ’ ಶಾಕಿಂಗ್ ಭವಿಷ್ಯ!