ಬೆಂಗಳೂರು: ಕ್ರಿಸ್ಮಸ್ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ಹೆಚ್ಚಿದ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಕಾರವಾರ ನಡುವೆ ಪ್ರತಿಯೊಂದು ದಿಕ್ಕಿನಲ್ಲಿ ಎರಡು ಟ್ರಿಪ್’ಗಳೊಂದಿಗೆ ವಿಶೇಷ ರೈಲುಗಳನ್ನು ಕಾರ್ಯಾಚರಣೆ ಮಾಡಲಿದೆ.
ರೈಲು ಸಂಖ್ಯೆ 06267 ಯಶವಂತಪುರ–ಕಾರವಾರ ವಿಶೇಷ ಎಕ್ಸ್’ಪ್ರೆಸ್ ರೈಲು ಡಿಸೆಂಬರ್ 24 ಮತ್ತು 27, 2025 ರಂದು ಮಧ್ಯಾಹ್ನ 12 ಗಂಟೆಗೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 6.10 ಗಂಟೆಗೆ ಕಾರವಾರವನ್ನು ತಲುಪಲಿದೆ. ಮರಳಿ ಬರುವ ರೈಲು ಸಂಖ್ಯೆ 06268 ಕಾರವಾರ–ಯಶವಂತಪುರ ವಿಶೇಷ ಎಕ್ಸ್’ಪ್ರೆಸ್ ರೈಲು ಡಿಸೆಂಬರ್ 25 ಮತ್ತು 28, 2025 ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ ಹೊರಟು, ಮರುದಿನ ಬೆಳಗಿನ ಜಾವ 4.30 ಗಂಟೆಗೆ ಯಶವಂತಪುರವನ್ನು ತಲುಪಲಿದೆ.
ಈ ರೈಲುಗಳು ಮಾರ್ಗಮಧ್ಯೆ ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟವಾಳ, ಸುರತ್ಕಲ್, ಮುಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳಲ್ಲಿ ನಿಲ್ಲಲಿವೆ.
ರೈಲು ಒಂದು ಎಸಿ 2-ಟೈರ್, ಮೂರು ಎಸಿ 3-ಟೈರ್, ಹನ್ನೆರಡು ಸ್ಲೀಪರ್ ಕ್ಲಾಸ್, ಮೂರೂ ಸಾಮಾನ್ಯ ದ್ವಿತೀಯ ದರ್ಜೆ ಮತ್ತು ಎರಡು ದ್ವಿತೀಯ ದರ್ಜೆ-ಕಮ್-ಲಗೇಜ್ ಬ್ರೇಕ್ ವ್ಯಾನ್/ವಿಕಲಚೇತನರ ಸಂಯೋಜನೆಯೊಂದಿಗೆ ಕಾರ್ಯನಿರ್ವಹಿಸಲಿದೆ.
ಶೀಘ್ರದಲ್ಲೇ ಭಾರತವು ರಷ್ಯಾ ಪ್ರವಾಸಿಗರಿಗೆ 30 ದಿನಗಳ ಉಚಿತ ಇ-ವೀಸಾ ನೀಡಲಿದೆ: ಪ್ರಧಾನಿ ಮೋದಿ








