ಬೆಂಗಳೂರು: ಪೊಂಗಲ್/ಸಂಕ್ರಾಂತಿ ಮತ್ತು ಗಣರಾಜ್ಯೋತ್ಸವ/ರಜಾದಿನಗಳ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ಮಡಗಾಂವ್ ನಡುವೆ ಪ್ರತಿ ದಿಕ್ಕಿನಲ್ಲಿ ತಲಾ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸಲಿದೆ.
ರೈಲು ಸಂಖ್ಯೆ 06287 ಯಶವಂತಪುರ-ಮಡಗಾಂವ್ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 13 ಮತ್ತು 23 ರಂದು ಬೆಳಿಗ್ಗೆ 11:50ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಿಗ್ಗೆ 06:45ಕ್ಕೆ ಮಡಗಾಂವ್ ತಲುಪಲಿದೆ. ಹಾಗೆಯೇ ಮರು ಪ್ರಯಾಣದ ಹಾದಿಯಲ್ಲಿ, ರೈಲು ಸಂಖ್ಯೆ 06288 ಮಡಗಾಂವ್-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಜನವರಿ 18 ಮತ್ತು 26 ರಂದು ಬೆಳಿಗ್ಗೆ 11:00 ಗಂಟೆಗೆ ಮಡಗಾಂವ್’ನಿಂದ ನಿರ್ಗಮಿಸಿ, ಮರುದಿನ ಬೆಳಿಗ್ಗೆ 04:45ಕ್ಕೆ ಯಶವಂತಪುರವನ್ನು ತಲುಪಲಿದೆ.
ಈ ವಿಶೇಷ ರೈಲು ತನ್ನ ಸಂಚಾರದ ಅವಧಿಯಲ್ಲಿ ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕ ಪುತ್ತೂರು, ಬಂಟವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಮೂಕಾಂಬಿಕಾ ರೋಡ್ (ಬೈಂದೂರು), ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್, ಅಂಕೋಲಾ ಮತ್ತು ಕಾರವಾರ ನಿಲ್ದಾಣಗಳಲ್ಲಿ ನಿಲುಗಡೆ ನೀಡಲಿದೆ.
ಈ ರೈಲು 22 ಬೋಗಿಗಳನ್ನು ಒಳಗೊಂಡಿರುತ್ತದೆ, ಇದರಲ್ಲಿ ಪ್ರಥಮ ದರ್ಜೆ ಮತ್ತು ಎಸಿ 2-ಟೈರ್ (1), ಎಸಿ 2-ಟೈರ್ (2), ಎಸಿ 3-ಟೈರ್ (1), ಸ್ಲೀಪರ್ ಕ್ಲಾಸ್ (10), ಸಾಮಾನ್ಯ ಎರಡನೇ ದರ್ಜೆ (6) ಮತ್ತು ಎಸ್ಎಲ್ಆರ್/ಡಿ (2) ಸೇರಿವೆ.
ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್‌ನ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ದಾದಾಪೀರ್ ನೇಮಕ
ಇನ್ಮುಂದೆ ಆಸ್ಪತ್ರೆ ಕಟ್ಟಡ, ಕ್ಲಿನಿಕ್ ಗಳಲ್ಲಿ ‘ಅಗ್ನಿಶಮನ ಉಪಕರಣ’ ಅಳವಡಿಕೆ ಕಡ್ಡಾಯ: ರಾಜ್ಯ ಸರ್ಕಾರ ಆದೇಶ








