ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಮೈಸೂರು-ಕಾರೈಕುಡಿ ನಡುವೆ ವಿಶೇಷ ರೈಲು ಸೇವೆಯನ್ನು ಆರಂಭಿಸಲಾಗುತ್ತಿದೆ.
ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ ಸಾಂಸ್ಕೃತಿಕ ನಗರಿ ಮೈಸೂರು ಮತ್ತು ತಮಿಳುನಾಡಿನ ಕಾರೈಕುಡಿ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸುತ್ತಿದೆ.
ರೈಲು ಸಂಖ್ಯೆ 06295 ಆಗಸ್ಟ್ 14 ಮತ್ತು 17 ರಂದು ರಾತ್ರಿ 9:30 ಕ್ಕೆ ಮೈಸೂರಿನಿಂದ ಹೊರಟು ಮರುದಿನ ಮಧ್ಯಾಹ್ನ 12:45 ಕ್ಕೆ ಕಾರೈಕುಡಿಯನ್ನು ತಲುಪಲಿದೆ.
ರೈಲು ಸಂಖ್ಯೆ 06296 ಆಗಸ್ಟ್ 15 ಮತ್ತು 18ರಂದು ಸಂಜೆ 7 ಗಂಟೆಗೆ ಕಾರೈಕುಡಿಯಿಂದ ಹೊರಟು ಮರುದಿನ ಬೆಳಗ್ಗೆ 9.10ಕ್ಕೆ ಮೈಸೂರು ತಲುಪಲಿದೆ.
ಈ ವಿಶೇಷ ರೈಲುಗಳು ಮಂಡ್ಯ, ಮದ್ದೂರು, ರಾಮನಗರ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಕೃಷ್ಣರಾಜಪುರಂ, ಬಂಗಾರಪೇಟೆ, ಕುಪ್ಪಂ, ಸೇಲಂ, ನಾಮಕ್ಕಲ್, ಕರೂರ್, ತಿರುಚಿರಾಪಳ್ಳಿ ಮತ್ತು ಪುದುಕೊಟ್ಟೈ ನಿಲ್ದಾಣಗಳಲ್ಲಿ ನಿಲ್ಲಲಿವೆ.
ವಿಶೇಷ ರೈಲಿನಲ್ಲಿ ಎರಡು ಎಸಿ-2 ಶ್ರೇಣಿ, ಎರಡು ಎಸಿ-3 ಶ್ರೇಣಿ, ಆರು ಸ್ಲೀಪರ್ ಕ್ಲಾಸ್, ಆರು ಸಾಮಾನ್ಯ ದ್ವಿತೀಯ ದರ್ಜೆ ಮತ್ತು ಎರಡು ಎಸ್ಎಲ್ಆರ್ / ಡಿ ಸೇರಿದಂತೆ 18 ಬೋಗಿಗಳು ಇರಲಿವೆ ಎಂದು ಹೇಳಿದೆ.
BIG NEWS: ತುಂಗಭದ್ರಾ ಅಣೆಕಟ್ಟು ಗೇಟ್ ದುರಸ್ತಿ ಕಾರ್ಯ ಆರಂಭ: ಡಿಸಿಎಂ ಡಿ.ಕೆ.ಶಿವಕುಮಾರ್