ಬೆಂಗಳೂರು: ಕ್ರಿಸ್ ಮಸ್ ಹಬ್ಬದ ಪ್ರಯುಕ್ತ ಯಶವಂತಪುರ-ಮಂಗಳೂರು ಜಂಕ್ಷನ್ ನಡುವೆ ಪ್ರತಿ ದಿಕ್ಕಿನಲ್ಲಿ ಎರಡು ಟ್ರಿಪ್ ವಿಶೇಷ ರೈಲುಗಳನ್ನು ನೈಋತ್ಯ ರೈಲ್ವೆಯು ಓಡಿಸಲಿದೆ.
ರೈಲು ಸಂಖ್ಯೆ 06505/06506 ಯಶವಂತಪುರ-ಮಂಗಳೂರು ಜಂಕ್ಷನ್-ಯಶವಂತಪುರ ವಿಶೇಷ ಎಕ್ಸ್ ಪ್ರೆಸ್
ರೈಲು ಸಂಖ್ಯೆ 06505 ಯಶವಂತಪುರ-ಮಂಗಳೂರು ಜಂಕ್ಷನ್ ವಿಶೇಷ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 23 ಮತ್ತು 27 ರಂದು ರಾತ್ರಿ 11.55ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.
ಮರಳಿ, ಇದೇ ರೈಲು (06506) ಡಿಸೆಂಬರ್ 24 ಮತ್ತು 28ರಂದು ಮಂಗಳೂರು ಜಂಕ್ಷನ್ ನಿಲ್ದಾಣದಿಂದ ಮಧ್ಯಾಹ್ನ 1:00 ಗಂಟೆಗೆ ಹೊರಟು, ಅದೇ ದಿನ ರಾತ್ರಿ 10.30ಕ್ಕೆ ಯಶವಂತಪುರ ತಲುಪಲಿದೆ.
ಈ ರೈಲು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು ಮತ್ತು ಬಂಟ್ವಾಳ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್: ಶೀಘ್ರವೇ 5,977 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ- ಸಚಿವ ಡಿ.ಸುಧಾಕರ್
ಮಲೆನಾಡಲ್ಲಿ ‘ಹೊಸ ವರ್ಷ ಆಚರಣೆ’ ಆಸೆ ಇದೆಯೇ? ಇಲ್ಲಿದೆ ಸುವರ್ಣಾವಕಾಶ | Malnad Karnival New Year Celebration
ಓದಿ ಉತ್ತಮ ಸಾಧನೆ ಮಾಡಬೇಕಿದ್ದ ಬಾಲಕಿಗೆ ಅನಾರೋಗ್ಯ: ನಿಮ್ಮ ನೆರವು, ಸಹಕಾರಕ್ಕೆ ಮನವಿ