ಬೆಂಗಳೂರು: ರಾಜ್ಯದಲ್ಲಿ ರಸ್ತೆ ಅಪಘಾತಗಳನ್ನು ತಪ್ಪಿಸೋ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಹತ್ವದ ಕ್ರಮವಹಿಸಿದೆ. ಇದಕ್ಕಾಗಿ ವಾಹನಗಳ ವೇಗಕ್ಕೆ ಮಿತಿ ನಿಗದಿ ಪಡಿಸಲಾಗಿದೆ. ಒಂದು ವೇಳೆ ಈ ಮಿತಿ ಮೀರಿದರೇ ಅಂತಹ ವಾಹನ ಸವಾರರ ವಿರುದ್ಧ ಎಫ್ಐಆರ್ ಹಾಗೂ ದಂಡ ಹಾಕಲಾಗುತ್ತದೆ.
ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು, ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು. ರಾಜ್ಯಾದ್ಯಂತ ಈ ಕ್ರಮ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.
ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನಲ್ ಸ್ಪೀಡ್ ಆಧಾರದಲ್ಲಿ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು. ಈ ರೀತಿಯ ಪ್ರಕರಣಗಳಲ್ಲಿ ರೂ. 2 ಸಾವಿರದವರೆಗೆ ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.
ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು. ರಾಜ್ಯಾದ್ಯಂತ ಈ ಕ್ರಮ ಜಾರಿಗೆ ಬರಲಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ ವಿಭಾಗ) ಅಲೋಕ್ ಕುಮಾರ್ ತಿಳಿಸಿದ್ದಾರೆ.
ಸ್ಪಾಟ್… pic.twitter.com/QV9s3dfjhR
— DIPR Karnataka (@KarnatakaVarthe) July 29, 2024
ಮಳೆಹಾನಿ ಸಂತ್ರಸ್ತರಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ ನೆರೆ ಪರಿಹಾರಕ್ಕೆ 777 ಕೋಟಿ ಬಿಡುಗಡೆ