ಬೆಂಗಳೂರು : ಯಲಹಂಕ ಶಾಸಕ ಎಸ್ ಆರ್ ವಿಶ್ವನಾಥ್ ಕೊಲೆ ಯತ್ನಕ್ಕೆ ಸಂಚು ರೂಪಿಸಿದ ಪ್ರಕರಣಕ್ಕೆ ಮರು ಜೀವ ಬಂದಿದ್ದು, ಆರೋಪಿಗಳಿಗೆ ಸಂಕಷ್ಟ ಎದುರಾಗಿದೆ.
2021 ರ ಡಿಸೆಂಬರ್ ನಲ್ಲಿ ದಾಖಲಾಗಿದ್ದ ಕೇಸ್ ನಂತರ ಮುಚ್ಚಿ ಹೋಗಿತ್ತು, ಇದೀಗ ಪ್ರಕರಣಕ್ಕೆ ಮರುಜೀವ ಬಂದಿದ್ದು,ರಾಜಾನುಕುಂಟೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಹಳೇ ಪ್ರಕರಣ ಮರು ತನಿಖೆಗೆ ಕೋರ್ಟ್ ಆದೇಶ ನೀಡಿದ್ದು, ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣ ಹಾಗೂ ಕುಳ್ಳ ದೇವರಾಜ್ ಗೆ ಸಂಕಷ್ಟ ಎದುರಾಗಿದೆ. ಮರು ತನಿಖೆಗೆ ಆಗ್ರಹಿಸಿ ಶಾಸಕ ಎಸ್ ಆರ್ ವಿಶ್ವನಾಥ್ ಪಿಎಸಿಆರ್ ಹಾಕಿದ್ದು, ಕೋರ್ಟ್ ಮರು ತನಿಖೆಗೆ ಆದೇಶಿಸಿದೆ. ಸದ್ಯ, ಕುಳ್ಳ ದೇವರಾಜ್ ನನ್ನು ಬಂಧಿಸಿರುವ ಪೊಲೀಸರು ನ್ಯಾಯಾಂಗ ಬಂಧನಕ್ಕೆ ನೀಡಿದ್ದಾರೆ. ಚುನಾವಣೆ ಹೊತ್ತಲ್ಲೇ ಕಾಂಗ್ರೆಸ್ ಮುಖಂಡ ಗೋಪಾಲಕೃಷ್ಣಗೆ ಸಂಕಷ್ಟ ಎದುರಾಗಿದೆ.
ಹವಾಮಾನ ವೈಪರೀತ್ಯ ನಿರೋಧಕ ರಾಜ್ಯವಾಗಿ ಕರ್ನಾಟಕ: ವಿಶ್ವಬ್ಯಾಂಕ್ ನೊಂದಿಗೆ ಸಿಎಂ ಬೊಮ್ಮಾಯಿ ಚರ್ಚೆ