ಬೆಂಗಳೂರು: ಆಗಸ್ಟ್.26ರಂದು ಶ್ರೀಕೃಷ್ಣ ಜನ್ಮಾಷ್ಟಮಿಯ ಹಿನ್ನಲೆಯಲ್ಲಿ ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಪ್ರಾಣಿವಧೆ ಮತ್ತು ಮಾಂಸ ಮಾರಾಟವನ್ನು ನಿಷೇಧಿಸಿ ಬಿಬಿಎಂಪಿ ಆದೇಶಿಸಿದೆ.
ಈ ಕುರಿತಂತೆ ಬಿಬಿಎಂಪಿಯ ಜಂಟಿ ನಿರ್ದೇಶಕರು(ಪಶುಪಾಲನೆ) ಅವರು ಆದೇಶ ಹೊರಡಿಸಿದ್ದು, ದಿನಾಂಕ: 26-08-2024 ಸೋಮವಾರದಂದು “ಶ್ರೀ ಕೃಷ್ಣಾ ಜನ್ಮಾಷ್ಟಮಿ ” ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರಿಗರೇ ಗಮನಿಸಿ: ‘ಗಣೇಶ ಪ್ರತಿಷ್ಠಾಪನೆ’ಗೆ ಅನುಮತಿ ನೀಡಲು ’63 ಏಕಗವಾಕ್ಷಿ ಕೇಂದ್ರ’ ಓಪನ್
ಬಿಬಿಎಂಪಿ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿ ಆಚರಣೆ ಸಂಬಂಧ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಚತುರ್ಥಿಯ ವೇಳೆ ಎಲ್ಲಾ ರೀತಿಯ ಸಿದ್ದತೆಗಳ ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಬಿಬಿಎಂಪಿಯ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಸೂಚಿಸಿದ್ದಾರೆ.
ಪಾಲಿಕೆ ವ್ಯಾಪ್ತಿಯಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ಅನುಮತಿ ನೀಡುವ ಸಲುವಾಗಿ 63 ಉಪ ವಿಭಾಗ ಕಛೇರಿಗಳಲ್ಲಿ ಏಕಗವಾಕ್ಷಿ ಕೇಂದ್ರಗಳನ್ನು ಕೂಡಲೆ ತೆರದು, ಪಾಲಿಕೆ, ಪೊಲೀಸ್, ಬೆಸ್ಕಾಂ ಹಾಗೂ ಅಗ್ನಿಶಾಮಕ ಅಧಿಕಾರಿಗಳನ್ನು ತ್ವರಿತವಾಗಿ ನಿಯೋಜಿಸಬೇಕು. ನಿಯೋಜಿಸಿದ ಬಳಿಕ ಅಧಿಕಾರಿಗಳ ಮಾಹಿತಿಯುಳ್ಳ ಪಟ್ಟಿಯನ್ನು ಪಾಲಿಕೆ ವೆಬ್‌ಸೈಟ್ ನಲ್ಲಿ ಅಪ್ಲೋಡ್ ಮಾಡಬೇಕು. ಅನುಮತಿ ಕೋರಿ ಬರುವವರಿಗೆ ಕಾಲಮಿತಿಯೊಳಗಾಗಿ ಅನುಮತಿ ಸಿಗುವಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸೂಚಿಸಲಾಯಿತು.
ಕೆರೆಗಳ ಬಳಿಯಿರುವ ಕಲ್ಯಾಣಿಗಳನ್ನು ಸಂಪೂರ್ಣ ಸ್ವಚ್ಚತೆ ಮಾಡಬೇಕು, ಗಣೇಶ ವಿಸರ್ಜನೆಗಾಗಿ ಅಗತ್ಯ ಸಿಬ್ಬಂದಿಯನ್ನು ನಿಯೋಜನೆ ಮಾಡುವುದರ ಜೊತೆಗೆ ಬ್ಯಾರಿಕೇಡಿಂಗ್, ಸಿಸಿ ಟಿವಿ, ವಿದ್ಯುತ್ ದ್ವೀಪ, ನುರಿತ ಈಜುಗಾರರ ವ್ಯವಸ್ಥೆ, ಕ್ರೇನ್ ಗಳ ಸೌಲಭ್ಯವನ್ನು ಕಲ್ಪಿಸಬೇಕೆಂದು ಸೂಚಿಸಿದರು.
ಕೇಂದ್ರದ ‘OBC ಪಟ್ಟಿ’ಗೆ ‘ವೀರಶೈವ ಲಿಂಗಾಯತ ಸಮುದಾಯ’ ಸೇರ್ಪಡೆಗೆ ಪ್ರಯತ್ನ: ಸಂಸದ ಬೊಮಾಯಿ