ಬೆಂಗಳೂರು: ರಾಜ್ಯ ಸರ್ಕಾರದಿಂದ 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಐವರು ಸಾಧಕರಿಗೆ ಘೋಷಣೆ ಮಾಡಿ ಆದೇಶಿಸಿದೆ.
ಇಂದು ರಾಜ್ಯ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದಲ್ಲಿ ಪ್ರತಿ ವರ್ಷ ಸೀಗೆಹುಣ್ಣಿಮೆ ದಿನದಂದು ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತದೆ. ಡಾ. ಬಿ.ಆರ್.ಅಂಬೇಡ್ಕರ್, ಡಾ. ಬಾಬು ಜಗಜೀವನರಾಂ ಹಾಗೂ ಶ್ರೀ ಡಿ.ದೇವರಾಜ ಅರಸು ಇವರ ಸ್ಮರಣಾರ್ಥ ಅರ್ಹ ವ್ಯಕ್ತಿಗಳಿಗೆ ಪ್ರಶಸ್ತಿ ನೀಡುತ್ತಿರುವ ಮಾದರಿಯಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯಂದು ಪರಿಶಿಷ್ಟ ವರ್ಗದ ಜನಾಂಗದ ಏಳಿಗೆಗಾಗಿ ಶ್ರಮಿಸಿದ ವ್ಯಕ್ತಿಗಳಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ನೀಡಿ ಗೌರವಿಸಲು ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ದಿನಾಂಕ:27-09-2019ರ ಆದೇಶದಲ್ಲಿ ಅನುಸರಿಸಬೇಕಾದ ಮಾರ್ಗಸೂಚಿಗಳನ್ನು ಹೊರಡಿಸಲಾಗಿದೆ.
ಶ್ರೀ ಮಹರ್ಷಿ ವಾಲ್ಮೀಕಿ ಪಶಸ್ತಿಯನ್ನು ಶೈಕ್ಷಣಿಕ, ಸಾಮಾಜಿಕ, ಸಾಹಿತ್ಯ ಹಾಗೂ ಇನ್ನಿತರ ಕ್ಷೇತ್ರಗಳಲ್ಲಿ ಅತ್ಯುತ್ತಮ ಸಾಧನೆ ಮಾಡಿರುವಂತಹ ಬೆಂಗಳೂರು, ಮೈಸೂರು, ಬೆಳಗಾವಿ, ಕಲಬುರಗಿ ಕಂದಾಯ ವಿಭಾಗಗಳು ಹಾಗೂ ಬೆಂಗಳೂರು ಕೇಂದ್ರ ಸ್ಥಾನದಿಂದ ತಲಾ ಒಬ್ಬರಂತೆ ಒಟ್ಟು ಐದು ಸಾಧಕರಿಗೆ ನಗದು ಮೊತ್ತ ಹಾಗೂ ಬಂಗಾರದ ಪದಕಗಳ ಮೌಲ್ಯವನ್ನು ಐದು ಪ್ರಶಸ್ತಿಗಳಿಗೆ ಮುಂದುವರೆಸಲು ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ದಿನಾಂಕ:28-10-2020ರ ಆದೇಶದಲ್ಲಿ ಸೂಚಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರ.ಸಂ (3)ರ ದಿನಾಂಕ:30-09-2024 ರ ಆದೇಶದಲ್ಲಿ 2024-25ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಇವರ ಸ್ಮರಣಾರ್ಥ ನೀಡುವ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧಕರನ್ನು ಆಯ್ಕೆ ಮಾಡುವ ಸಂಬಂಧ ಶ್ರೀ ಕೆ.ಹೆಚ್.ಮಲ್ಲೇಶಪ್ಪ,, ನಿವೃತ್ತ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ನಾಗರಬಾವಿ, ಬೆಂಗಳೂರು ಇವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚಿಸಲಾಗಿರುತ್ತದೆ.
ಮೇಲಿನ ಅಂಶಗಳನ್ನು ಸರ್ಕಾರವು ಪರಿಶೀಲಿಸಿ, 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ಆಯ್ಕೆ ಸಮಿತಿಯು ಆಯ್ಕೆ ಮಾಡಿರುವ ಒಟ್ಟು 05 ಸಾಧಕರಿಗೆ ಪ್ರಶಸ್ತಿಯನ್ನು ನೀಡಲು ನಿರ್ಣಯಿಸಿ, ಈ ಕೆಳಕಂಡಂತೆ ಆದೇಶಿಸಿದೆ.
ಪುಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 2024ನೇ ಸಾಲಿನ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಗೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಸಾಧಕರನ್ನು ಆಯ್ಕೆ ಮಾಡಲು ದಿನಾಂಕ:15-10-2024ರಂದು ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯಲ್ಲಿ ನಿರ್ಣಯಿಸಿರುವಂತೆ, 2024ನೇ ಸಾಲಿಗೆ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ಕ್ಷೇತ್ರವಾರು ಈ ಕೆಳಕಂಡ 05 ಸಾಧಕರಿಗೆ ರಾಜ್ಯ ಮಟ್ಟದ ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿಯನ್ನು ನೀಡಿ, ಗೌರವಿಸಲು ಮಂಜೂರಾತಿ ನೀಡಿ ಆದೇಶಿಸಿದೆ.
1. ಕಿಲಾರಿ ಜೋಗಯ್ಯ ಬಿನ್ ಕಿಲಾರಿ ಬೋರಯ್ಯ, ಗಡ್ಡದಾರ ಹಟ್ಟಿ, ನನ್ನಿವಾಳ ಅಂಚೆ ಚಳ್ಳಕೆರೆ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ – ಬುಡಕಟ್ಟು ಸಂಸ್ಕೃತಿ
2. ಡಾ. ರತ್ನಮ್ಮ.ಎಸ್., ಮದ್ದೂರು ಕಾಲೋನಿ, ಮದ್ದೂರು ಪೋಸ್ಟ್, ಹಂಗಳ ಹೋಬಳಿ, ಗುಂಡ್ಲುಪೇಟೆ, ಚಾಮರಾಜನಗರ ಜಿಲ್ಲೆ – ಸಮಾಜ ಸೇವೆ.
3. ರಾಜಶೇಖರ ತಳವಾರ, ಗಾಂಧಿನಗರ, ಬೆಳಗಾವಿ- ಸಾಮಾಜಿಕ ಕ್ಷೇತ್ರ
ನಂ.63/ಎ, 3ನೇ ಕ್ರಾಸ್, ದೀಪಕ ಗಲ್ಲಿ, ಗಾಂಧಿನಗರ, ಬೆಳಗಾವಿ
4. ಕೆ.ಎಸ್. ಮೃತ್ಯುಂಜಯ., ನಂ.14/10, ಮಾಗಡಿ ಮುಖ್ಯರಸ್ತೆ, ಬೆಂಗಳೂರು – ಸಾಮಾಜಿಕ ಕ್ಷೇತ್ರ
5. ರತ್ನಮ್ಮ ಬಿ. ಸೋಗಿ., ನಂ.921/1, ಟೀಚರ್ಸ್ ಕಾಲೋನಿ, ಹರಪನಹಳ್ಳಿ, ವಿಜಯನಗರ ಜಿಲ್ಲೆ – ರಂಗಭೂಮಿ ಕ್ಷೇತ್ರ.
ಆಯುಷ್ಮಾನ್ ವಿಮಾ ಯೋಜನೆಗೆ ಅನುದಾನ ಒದಗಿಸಿ: ಕೇಂದ್ರ ಸಚಿವರಿಗೆ ದಿನೇಶ್ ಗುಂಡೂರಾವ್ ಮನವಿ
BREAKING ; ದೇಶದ ರೈತರಿಗೆ ದೀಪಾವಳಿ ಗಿಫ್ಟ್ ; ಹಿಂಗಾರು ಬೆಳೆಗಳ ‘ಕನಿಷ್ಠ ಬೆಂಬಲ ಬೆಲೆ’ ಹೆಚ್ಚಳ |MSP Hike