ಬೆಂಗಳೂರು: ಶ್ರೀರಾಮಸೇನೆಯ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್ ಮುತಾಲಿಕ್ ( Sri Ram Sene founder president Pramod Muthalik ) ಅವರನ್ನು ಕೊಲೆ ಮಾಡುವುದಾಗಿ ಬೆದರಿಕೆ ಬಂದಿರುವುದಾಗಿ ತಿಳಿದು ಬಂದಿದೆ.
ನಮ್ಮ ಪಕ್ಷದ ಕಾರ್ಯಕರ್ತರಿಂದ ಹಣ ಸಂಗ್ರಹಿಸಿದರೆ ಬಿಜೆಪಿಯವರಿಗೇನು ನೋವು – ಡಿ.ಕೆ. ಶಿವಕುಮಾರ್ ಪ್ರಶ್ನೆ
ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನಿನ್ನೆ ರಾತ್ರಿ ನಾಲ್ಕು ನಂಬರ್ ಗಳಿಂದ ನನಗೆ ಜೀವ ಬೆದರಿಕೆ ಕರೆಗಳು ಬಂದಿವೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿಯಲ್ಲಿದ್ದಾಗ ಕೊಲೆ ಬೆದರಿಕೆ ಕರೆಗಳು ( Death threat call ) ಬಂದಿದ್ದಾವೆ ಎಂದು ತಿಳಿಸಿದ್ದಾರೆ.
ಕೊಲೆ ಬೆದರಿಕೆ ಹಾಕಿದಂತವರು ಉರ್ದು ಮಿಶ್ರಿತ ಮಂಗಳೂರು ಭಾಷೆಯಲ್ಲಿ ಮಾತನಾಡುತ್ತಿದ್ದರು. ಇಂದು ಬೆಳಿಗ್ಗೆಯೂ ಕೊಲೆ ಬೆದರಿಕೆ ಕರೆ ಬಂದಿವೆ. ಈ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲೆಯ ಹುಕ್ಕೇರಿಯ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ ಎಂದರು.
ಈ ತರದ ಕೊಲೆ ಬೆದರಿಕೆ ಎಷ್ಟೋ ಬಂದಿದ್ದಾವೆ. ನಾನು ಕೊಲೆ ಬೆದರಿಕೆಗೆ ಹೆದರೋದಿಲ್ಲ. ಪೊಲೀಸರಿಗೆ ದೂರು ನೀಡಿದ್ದು, ತನಿಖೆ ನಡೆಸಿ ಬೆದರಿಕೆ ಹಾಕಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದ್ದಾರೆ ಎಂದು ಹೇಳಿದರು.