ವಿಜಯವಾಡ:ಮಾಜಿ ಸಂಸದೆ ಜೆ ಶಾಂತಾ ಅವರು ಆಂದ್ರ ಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿಯವರ ವೈಎಸ್ ಆರ್ ಪಕ್ಷಕ್ಕೆ ಸೇರ್ಪಡೆಯಾದರು.
ಅವರು ಮಾಜಿ ಸಚಿವ ಶ್ರೀರಾಮುಲು ಅವರ ಸಹೋದರಿಯಾಗಿದ್ದಾರೆ. ಮಾಜಿ ಸಂಸದೆ ಜೆ.ಶಾಂತಾಅವರು ವಿಜಯವಾಡದಲ್ಲಿ ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ಮೋಹನ್ರೆಡ್ಡಿ ಸಮ್ಮುಖದಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷ ಸೇರ್ಪಡೆಯಾದರು.
ಹಿಂದೂಪುರ ಕ್ಷೇತ್ರದಲ್ಲಿ ವಾಲ್ಮೀಕಿ ಸಮುದಾಯದ 4.5 ಲಕ್ಷ ಮತದಾರರಿದ್ದು , ಲೋಕಸಭಾ ಚುನಾವಣೆಯಲ್ಲಿ ಹಿಂದೂಪುರ ಲೋಕಸಭಾ ಕ್ಷೇತ್ರದಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧೆ ಮಾಡುವ ಸಾಧ್ಯತೆ ಇದೆ. ಶಾಂತಾ ಅವರು ವಾಲ್ಮೀಕಿ ಸಮುದಾಯದವರಾಗಿದ್ದಾರೆ.