ಗದಗ: ಹೃದಯಾಘಾತದಿಂದ ಕಾಂಗ್ರೆಸ್ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು(60) ಅವರು ನಿನ್ನೆ ಮೃತಪಟ್ಟಿದ್ದಾರೆ. ಇಂದು ಅವರ ಸ್ವಗ್ರಾಮದಲ್ಲಿ ಶ್ರೀಶೈಲಪ್ಪ ಬಿದರೂರು ಅಂತ್ಯಕ್ರಿಯೆ ನಡೆಯಲಿದೆ.
ಇನ್ನೂ, ಇಂದು ಬಿದರೂರು ಪಾರ್ಥಿವ ಶರೀರವನ್ನು ಗಣ್ಯರು, ಸಾರ್ವಜನಿಕರ ಅಂತಿಮ ದರ್ಶನಕ್ಕೆ ಇಡಲಾಗುತ್ತದೆ. ನಂತರ ಗ್ರಾಮದ ತೋಟದ ಮನೆಯಲ್ಲಿ ಮಧ್ಯಾಹ್ನ 3 ಗಂಟೆಗೆ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತ್ಯಸಂಸ್ಕಾರ ನಡೆಸಲಾಗುತ್ತದೆ ಎಂದು ಲೋಕೋಪಯೋಗಿ ಸಚಿವ ಸಿಸಿ ಪಾಟೀಲ್ ಮಾಹಿತಿ ನೀಡಿದ್ದಾರೆ.
ಹೃದಯಾಘಾತದಿಂದ ಕುಸಿದು ಬಿದ್ದಿದ್ದಂತ ಮಾಜಿ ಶಾಸಕ ಶ್ರೀಶೈಲಪ್ಪ ಬಿದರೂರು ಅವರನ್ನು ಕೂಡಲೇ ಕುಟುಂಬಸ್ಥರು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದರು. ಆದ್ರೇ ಚಿಕಿತ್ಸೆ ಫಲಿಸದೇ ಅವರು ನಿಧನರಾಗಿದ್ದಾರೆ.
2019ರಲ್ಲಿ ಕಾಂಗ್ರೆಸ್ ಸೇರ್ಪಡೆಯಾಗಿದ್ದಂತ ಅವರು, ಗದಗ, ರೋಣ ಕ್ಷೇತ್ರದ ಶಾಸಕರಾಗಿದ್ದರು. ಇಂತಹ ಅವರು ಇಂದು ಹೃದಯಾಘಾತದಿಂದ ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.ರೋಣ ಕ್ಷೇತ್ರದ ಶಾಸಕರಾಗಿದ್ದ ಶ್ರೀಶೈಲಪ್ಪ ಬಿದರೂರು ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಕರ್ನಾಟಕ ಉಸ್ತುವಾರಿ ರಣದೀಪ್ ಸುರ್ಜೇವಾಲ ಅವರು ಸಂತಾಪ ಸೂಚಿಸಿದ್ದಾರೆ.
BIGG NEWS : ಮಂಗಳೂರಿನಲ್ಲಿ ಕುಕ್ಕರ್ ಬಾಂಬ್ ಸ್ಪೋಟ ಪ್ರಕರಣ : ಇಂದಿನಿಂದ `NIA’ ತನಿಖೆ ಆರಂಭ
BIGG NEWS : ಒಂದೇ ದಿನಗಳೊಳಗೆ ‘ಮಹಿಳಾ ಆಯೋಗ’ದ ದೂರುಗಳ ತನಿಖೆಗೆ ‘ಸಿಎಂ ಬೊಮ್ಮಾಯಿ’ ಸೂಚನೆ