ಬಳ್ಳಾರಿ : ವಾಲ್ಮೀಕಿ ನಿಗಮದ ಅಧಿಕಾರಿ ಚಂದ್ರಶೇಖರ್ ಆತ್ಮಹತ್ಯೆಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಮುದಾಯದ ಹಣ ಕೊಳ್ಳೆ ಹೊಡೆಯುವ ಕೆಲಸ ಆಗಿದೆ ಹಾಗಾಗಿ ಈ ಪ್ರಕರಣ CBI ಗೆ ವಹಿಸಿ ಎಂದು ಬಳ್ಳಾರಿಯಲ್ಲಿ ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು.
ಬಳ್ಳಾರಿಯಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವ್ಯಾಪಕ ಭ್ರಷ್ಟಾಚಾರಕ್ಕೆ ಅಮಾಯಕ ಚಂದ್ರಶೇಖರನ್ ಬಲಿಯಾಗಿದ್ದಾರೆ. ಇದು ಆತ್ಮಹತ್ಯೆ ಅಲ್ಲ ಅಮಾಯಕನ ಬಲಿ ಅಂತ ಹೇಳಬಹುದು. ಎಸ್ಐಟಿ ಪ್ರಕರಣದ ತನಿಖೆ ಮಾಡುತ್ತಿದ್ದರು ಸಚಿವರು ರಾಜೀನಾಮೆ ಕೊಟ್ಟಿಲ್ಲ ಎಂದರು.
ಶೀಘ್ರದಲ್ಲಿ ನೈತಿಕ ಹೊಣೆ ಹೊತ್ತು ಸಚಿವರು ರಾಜೀನಾಮೆ ನೀಡಬೇಕು. ರಾಜಿನಾಮೆ ಪಡಿಯಬೇಕೆಂದು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ನಾನು ಒತ್ತಾಯ ಮಾಡುತ್ತೇನೆ. ಚಂದ್ರಶೇಖರ್ ಆತ್ಮಹತ್ಯೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿ ಸಚಿವರು ರಾಜೀನಾಮೆ ಕೊಡುವವರೆಗೂ ಬಿಜೆಪಿ ಹೋರಾಟ ಮಾಡುತ್ತದೆ ಎಂದು ಬಳ್ಳಾರಿಯಲ್ಲಿ ಕಾಂಗ್ರೆಸ್ ವಿರುದ್ಧ ಮಾಜಿ ಸಚಿವ ಶ್ರೀರಾಮುಲು ವಾಗ್ದಾಳಿ ನಡೆಸಿದರು.