ಬೆಂಗಳೂರು : ಪ್ರಸಕ್ತ ಸಾಲಿನ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಯು ಮಾರ್ಚ್ 25 ರಿಂದ ಆರಂಭವಾಗುತ್ತಿದ್ದು ಜಿಲ್ಲೆಯಲ್ಲಿ 82 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಕೇಂದ್ರಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಕಲ್ಪಿಸುವುದರೊಂದಿಗೆ ಪರೀಕ್ಷೆಯನ್ನು ಸುಗಮವಾಗಿ ನಡೆಸಿಕೊಡಲು ಎಲ್ಲಾ ಸಿದ್ದತೆ ಕೈಗೊಳ್ಳಲು ಸೂಚನೆ ನೀಡಲಾಗಿದೆ.
ಸುಗಮ ಪರೀಕ್ಷೆ ನಡೆಸಲು ಸೂಚನೆ; ಪರೀಕ್ಷೆಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಮಾಡದೆ ವಿದ್ಯಾರ್ಥಿಗಳು ಯಾವುದೇ ಭಯದ ವಾತಾವರಣದಲ್ಲಿ ಪರೀಕ್ಷೆ ಬರೆಯದಂತೆ ಪ್ರಶಾಂತ ವಾತಾವರಣ ಕಲ್ಪಿಸಲು ಪರೀಕ್ಷಾ ಕೇಂದ್ರದ ಅಧೀಕ್ಷಕರು ಕ್ರಮ ಕೈಗೊಳ್ಳಬೇಕು. ವಿದ್ಯಾರ್ಥಿಗಳಿಗೆ ಪರೀಕ್ಷಾ ಮಾರ್ಗಸೂಚಿಗಳ ಬಗ್ಗೆ ಮಾಹಿತಿ ನೀಡಿ ಇಲ್ಲಿ ಯಾವುದೇ ಪರೀಕ್ಷಾ ಅವ್ಯವಹಾರ ನಡೆಯದಂತೆ ನೋಡಿಕೊಂಡು ಸುಗಮವಾಗಿ ಪರೀಕ್ಷೆ ನಡೆಸಬೇಕೆಂದು ಸೂಚನೆ ನೀಡಿ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸುವ ಮೂಲಕ ನಿಷೇಧಾಜ್ಞೆ ಜಾರಿಗೊಳಿಸಲಾಗುತ್ತದೆ.
ಮಾರ್ಚ್ 25 ರಂದು ಬೆಳಗ್ಗೆ 10.15 ರಿಂದ ಮ.1.30 ರ ವರೆಗೆ ಪ್ರಥಮ ಭಾಷೆ ಪರೀಕ್ಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್ ಎನ್.ಸಿ.ಇ.ಆರ್.ಟಿ, ಸಂಸ್ಕøತ, ಮಾ.27 ರಂದು ಸಮಾಜ ವಿಜ್ಞಾನ, ಮಾ.30 ರಂದು ವಿಜ್ಞಾನ, ರಾಜ್ಯಶಾಸ್ತ್ರ, ಮಧ್ಯಾಹ್ನ 2 ರಿಂದ ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಏ.2 ರಂದು ಗಣಿತ, ಸಮಾಜಶಾಸ್ತ್ರ, ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಏ.3 ರಂದು ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಮೆಕಾನಿಕಲ್ ಮತ್ತು ಎಲೆಕ್ಟ್ರಿಕಲ್ ಇಂಜಿನಿಯರಿಂಗ್, ಏ.4 ರಂದು ತೃತೀಯ ಭಾಷೆ ಹಿಂದಿ, ಕನ್ನಡ, ಇಂಗ್ಲೀಷ್, ಉರ್ದು, ತುಳು, ಅರೆಬಿಕ್, ಸಂಸ್ಕøತ, ಮತ್ತು ಏಪ್ರಿಲ್ 6 ರಂದು ದ್ವಿತೀಯ ಭಾಷೆ ಇಂಗ್ಲೀಷ್, ಕನ್ನಡ ವಿಷಯಗಳ ಪರೀಕ್ಷೆ ನಡೆಯಲಿದೆ.