ಬೆಂಗಳೂರು: ಮಾರ್ಚ್ 25 ರಿಂದ ಏಪ್ರಿಲ್ 26ರವರೆಗೂ ನಡೆದ ಎಸ್.ಎಲ್.ಎಲ್‌.ಸಿ ಪರೀಕ್ಷಾ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಇಂದು ಪ್ರಕಟಿಸಿದೆ. ಉಡುಪಿ ಮೊದಲ ಸ್ಥಾನ ಪಡೆದರೆ, ಯಾದಗಿರಿ ಕೊನೆಯ ಸ್ಥಾನದಲ್ಲಿದೆ. ಕಳೆದ ಬಾರಿಗೆ ಹೋಲಿಸಿದರೆ ಶೇ.10ರಷ್ಟು ಫಲಿತಾಂಶ ಇಳಿಕೆಯಾಗಿದೆ.

ಈ ನಡುವೆ ಒಟ್ಟು 4.36.138 ವಿದ್ಯಾರ್ಥಿಗಳಲ್ಲಿ (ಗಂಡು) 2.87.416 ಮಂದಿ ಉತ್ತೀರ್ಣರಾಗಿದ್ದಾರೆ. (ಶೇಕಡಾ 65.90%) ಒಟ್ಟು 4.23.829 ವಿದ್ಯಾರ್ಥಿನಿಯರಲ್ಲಿ 3.41.778 ಮಂದಿ ಉತ್ತೀರ್ಣರಾಗಿದ್ದಾರೆ. (ಶೇಕಡಾ 81.11) ನಗರ ಪ್ರದೇಶದಲ್ಲಿ 4.93.900 ವಿದ್ಯಾರ್ಥಿಗಳಲ್ಲಿ 35.97.703 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. (72.83%) ಗ್ರಾಮೀಣ ಪ್ರದೇಶಗಳಲ್ಲಿ ಒಟ್ಟು 3.66.067 ಮಂದಿ ಉತ್ತೀರ್ಣರಾಗಿದ್ದಾರೆ. (74.17%) ಒಟ್ಟು 5.906 ಸರ್ಕಾರಿ ಶಾಲೆಗಳಲ್ಲಿ 72.46% , 3.666 ಅನುದಾನ ಶಾಲೆಗಳಲ್ಲಿ 72.22%, 6.144 ಅನುದಾನ ರಹಿತ ಶಾಲೆಗಳು ಫಲಿತಾಂಶವಾಗಿದೆ.

625 ಕ್ಕೆ 625 ಅಂಕಿತಾ ಬಸಪ್ಪಾ ಕನ್ನೂರ ಬಾಗಲಕೋಟೆ ಜಿಲ್ಲೆಯ ಮುರಾರ್ಜಿ ದೇಸಾಯಿ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ಪ್ರಥಮ‌ ಸ್ಥಾನ ಪಡೆದಿದ್ದಾರೆ. 7 ಮಂದಿ ವಿದ್ಯಾರ್ಥಿಗಳು 624 ಅಂಕಗಳೊಂದಿಗೆ ಎರಡನೇ ಸ್ಥಾನ ಪಡೆದಿದ್ದಾರೆ. ಒಟ್ಟು ಪರೀಕ್ಷೆ ಬರೆದ ವಿಧ್ಯಾರ್ಥಿಗಳು: 8.59,967 ಲಕ್ಷ ವಿಧ್ಯಾರ್ಥಿಗಳು, ತೇರ್ಗಡೆಯಾದ ವಿಧ್ಯಾರ್ಥಿಗಳು:- 6,31,204, ಲಿಂಗವಾರು ಒಟ್ಟಾರೆ ಫಲಿತಾಂಶ, ಬಾಲಕರು:2,87,416(65.90%), ಬಾಲಕಿಯರು’-3,43,788(81.11%), SSLC ಪರೀಕ್ಷೆಯಲ್ಲಿ ಬಾಲಕಿಯರ ಮೇಲುಗೈ

SSLC Exam-2 2024 Schedule Announced, Here's How
SSLC Exam-2 2024 Schedule

ಸೂಚನೆಗಳು:
ವಿ.ಸೂ: ಪ್ರತಿ ವಿಷಯಕ್ಕೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷಗಳನ್ನು ಪರೀಕ್ಷೆಯ ಪ್ರಾರಂಭದಲ್ಲಿ ನೀಡಲಾಗುವುದು
1. 15.06.2024 (ಶನಿವಾರ) ರಂದು ಜೆ.ಟಿ.ಎಸ್. (56, 57, 58, 59 & 75, 76, 77 ವಿಷಯಗಳು) ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಹಾಗೂ ಮೌಖಿಕ ಪರೀಕ್ಷೆಗಳನ್ನು ಆಯಾ ಶಾಲೆಗಳಲ್ಲಿ ನಡೆಸಲಾಗುವುದು.
2. ವಿಷಯ ಸಂಕೇತ 15 ಮತ್ತು 60ರ ವಿಷಯಗಳು ಆದರ್ಶ ವಿದ್ಯಾಲಯಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾತ್ರ ಅನ್ವಯವಾಗುತ್ತವೆ.
3. ಹಿಂದೂಸ್ತಾನಿ ಸಂಗೀತ ಮತ್ತು ಕರ್ನಾಟಕ ಸಂಗೀತ ವಿಷಯದ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಸಾಯಂಕಾಲ 5.15 ರವರೆಗೆ ನಿಗದಿಪಡಿಸಿದೆ. ಸದರಿ ವಿಷಯಗಳ ತಾತ್ವಿಕ ಪರೀಕ್ಷೆಯನ್ನು ಮಧ್ಯಾಹ್ನ 2.00 ಗಂಟೆಯಿಂದ ಮಧ್ಯಾಹ್ನ 3.45 ಗಂಟೆಯವರೆಗೆ ಮತ್ತು ಪ್ರಾಯೋಗಿಕ ಪರೀಕ್ಷೆಯನ್ನು ಮಧ್ಯಾಹ್ನ 3.45 ರಿಂದ ಸಾಯಂಕಾಲ 5.15 ಗಂಟೆಯವರೆಗೆ ನಡೆಸಲಾಗುವುದು.
4. ವಿಶೇಷ ಚೇತನರ ಹಕ್ಕುಗಳ ಅಧಿನಿಯಮ 2016ರನ್ವಯ ವಿವಿಧ ಪ್ರಕಾರದ ವಿಭಿನ್ನ ಸಾಮರ್ಥ್ಯವುಳ್ಳ ವಿದ್ಯಾರ್ಥಿಗಳಿಗೆ ಬರಹಗಾರರ ಸೌಲಭ್ಯ ಅಥವಾ ಹೆಚ್ಚುವರಿ ಸಮಯದ ಅಥವಾ ಎರಡನ್ನೂ ಪಡೆಯುವ ಅವಕಾಶವಿದೆ. ಸದರಿ ವಿದ್ಯಾರ್ಥಿಗಳು ಮೂರು ಗಂಟೆಯ ಪ್ರಶ್ನೆಪತ್ರಿಕೆಗೆ ಉತ್ತರಿಸಲು ಹೆಚ್ಚುವರಿಯಾಗಿ 60 ನಿಮಿಷಗಳು, ಎರಡೂವರೆ ಗಂಟೆಯ ಪ್ರಶ್ನೆಪತ್ರಿಕೆಗೆ 50 ನಿಮಿಷಗಳು, ಎರಡು ಗಂಟೆಯ ಪ್ರಶ್ನೆಪತ್ರಿಕೆಗೆ 40 ನಿಮಿಷಗಳು, ಒಂದೂವರೆ ಗಂಟೆಯ ಪ್ರಶ್ನೆ ಪತ್ರಿಕೆಗೆ ಹೆಚ್ಚುವರಿಯಾಗಿ 30 ನಿಮಿಷಗಳನ್ನು
ನೀಡಲಾಗುವುದು.
5. ಪ್ರಥಮ ಭಾಷಾ ವಿಷಯಗಳು ಮತ್ತು ಐಚ್ಛಿಕ ವಿಷಯಗಳಿಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ದ್ವಿತೀಯ ಭಾಷಾ ವಿಷಯಗಳು ಹಾಗೂ ತೃತೀಯ ಭಾಷಾ ವಿಷಯಗಳಿಗೆ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.15ರವರೆಗೆ ಅವಧಿ ನಿಗದಿಪಡಿಸಿದೆ.
6. ಪ್ರಥಮ ಭಾಷಾ ವಿಷಯಗಳು ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬರೆಯಲು 3.00 ಗಂಟೆ ಮತ್ತು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಮತ್ತು ತೃತೀಯ ಭಾಷಾ ವಿಷಯಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.
7. ಎನ್.ಎಸ್.ಕ್ಯೂ.ಎಫ್. ವಿಷಯಗಳ ಪರೀಕ್ಷೆ ಬೆಳಗ್ಗೆ 10.15 ರಿಂದ 12.30ರವರೆಗೆ ನಡೆಯಲಿದೆ.
8. ಎನ್.ಎಸ್.ಕ್ಯೂ.ಎಫ್. ಪರೀಕ್ಷಾ ವಿಷಯಗಳ ಪರೀಕ್ಷೆ ಬರೆಯಲು 2.00 ಗಂಟೆ ಹಾಗೂ ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.

Share.
Exit mobile version