Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM

Gas Booking Rules Change : ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು!

07/03/2026 10:06 PM

ಹೊರಗಡೆ ಊಟ ಮಾಡಿದ ಮೇಲೆ ನಿದ್ರೆ ಆವರಿಸುತ್ತಿದೆಯೇ? ‘ಫುಡ್ ಕೋಮಾ’ ತಪ್ಪಿಸಲು ಇಲ್ಲಿವೆ 5 ಸರಳ ಸೂತ್ರಗಳು!

07/03/2026 9:55 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » `SSLC’ ಪರೀಕ್ಷೆ-2 : ಪರೀಕ್ಷಾ ಕೇಂದ್ರಗಳಲ್ಲಿ ‘CCTV’ ಕ್ಯಾಮರಾ ಅಳವಡಿಕೆ ಕಡ್ಡಾಯ
KARNATAKA

`SSLC’ ಪರೀಕ್ಷೆ-2 : ಪರೀಕ್ಷಾ ಕೇಂದ್ರಗಳಲ್ಲಿ ‘CCTV’ ಕ್ಯಾಮರಾ ಅಳವಡಿಕೆ ಕಡ್ಡಾಯ

By kannadanewsnow5716/05/2024 7:13 AM

ಬೆಂಗಳೂರು : 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ಕ್ಕೆ ಪರೀಕ್ಷಾ ಕೇಂದ್ರಗಳನ್ನು ರಚಿಸಿ ಪ್ರಸ್ತಾವನೆಯನ್ನು ಮಂಡಲಿಗೆ ಸಲ್ಲಿಸುವಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಆದೇಶ ಹೊರಡಿಸಿದೆ.

2024ರ ಪರೀಕ್ಷೆ-2ಕ್ಕೆ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು ಅತ್ಯಂತ ಪ್ರಮುಖ ಕಾರ್ಯವಾಗಿದೆ. ಪರೀಕ್ಷಾ ಕೇಂದ್ರ ರಚನೆಯ ನಂತರವೇ ಪ್ರವೇಶಪತ್ರ, ಕೇಂದ್ರ ನಾಮಯಾದಿ, ಶಾಲಾವಾರು ನಾಮಯಾದಿ, ಹಾಜರಾತಿ ಸಹಿತ ಅಂಕಪಟ್ಟಿ (ಎ.ಎಂ.ಎಲ್), ಪ್ರಶ್ನೆಪತ್ರಿಕೆ ಬೇಡಿಕೆ ಹಾಗೂ ಪರೀಕ್ಷಾ ಕೇಂದ್ರದ ಸಾದಿಲ್ವಾರು ಹಂಚಿಕೆಯ ಪ್ರಕ್ರಿಯೆ ಕೈಗೊಳ್ಳಬೇಕಾಗಿದೆ. ಆಯಾ ಭೌಗೋಳಿಕ ಪ್ರದೇಶದಲ್ಲಿನ ನಗರ/ಗ್ರಾಮೀಣ ಪ್ರದೇಶದ ಶಾಲೆಗಳ ಮೂಲಭೂತ ಸೌಕರ್ಯಗಳನ್ನು ಪರಿಗಣಿಸಿ ಕ್ಲಸ್ಟರ್‌ಸಹಿತ ಹಾಗೂ ಕ್ಲಸ್ಟರಹಿತ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು.

ಪರೀಕ್ಷಾ ಕೇಂದ್ರಗಳನ್ನು ರಚಿಸುವ ಪೂರ್ವದಲ್ಲಿ ಪರೀಕ್ಷಾ ಕೇಂದ್ರದ ರಚನೆಗೆ ಸಂಬಂಧಿಸಿದಂತೆ ಜಿಲ್ಲಾ ಉಪನಿರ್ದೇಶಕರು ತಮ್ಮ ವ್ಯಾಪ್ತಿಯ ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ಪರೀಕ್ಷಾ ಕೇಂದ್ರಗಳನ್ನು ರಚಿಸಿದ ಪ್ರಸ್ತಾವನೆಯನ್ನು ಪಡೆದು ಕೆಳಕಂಡ ನಿಯಮಗಳನ್ನು ಪಾಲಿಸಿರುವ ಬಗ್ಗೆ ಖುದ್ದಾಗಿ ಪರಿಶೀಲಿಸಿ ಪ್ರಸ್ತಾವನೆಯನ್ನು ಮಂಡಲಿಗೆ ಸಲ್ಲಿಸಲು ಹಾಗೂ ಸಾಫ್ಟ್‌ ಕಾಪಿಯನ್ನು ಇ-ಮೇಲ್ ಮೂಲಕ ದಿನಾಂಕ:17-05-2024ರೊಳಗೆ ಮಂಡಲಿಗೆ ಸಲ್ಲಿಸಲು ತಿಳಿಸಿದೆ.

1. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ಕ್ಕೆ ಮೂಲಭೂತ ಸೌಲಭ್ಯಗಳನ್ನು ಹೊಂದಿರುವ ಹಾಗೂ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗುವಂತೆ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು.

2. ಎಸ್.ಎಸ್.ಎಲ್.ಸಿ ಪರೀಕ್ಷೆ-2ಕ್ಕೆ ಸಾಧ್ಯವಾದಷ್ಟು ತಾಲ್ಲೂಕು ಕೇಂದ್ರಗಳಲ್ಲಿ ಪರೀಕ್ಷಾ ಕೇಂದ್ರಗಳನ್ನು ರಚಿಸುವುದು ಕಡ್ಡಾಯ.

3. ಕ್ಷೇತ್ರ ಶಿಕ್ಷಣಾಧಿಕಾರಿಗಳು ಸಲ್ಲಿಸಿರುವ ಪರೀಕ್ಷಾ ಕೇಂದ್ರಗಳಲ್ಲಿ ಎಲ್ಲಾ ಮೂಲಭೂತ ಸೌಕರ್ಯಗಳು ಇರುವ ಬಗ್ಗೆ ಖಾತರಿಪಡಿಸಿಕೊಳ್ಳುವುದು ಕಡ್ಡಾಯ. ಪರೀಕ್ಷಾ ಕೇಂದ್ರಗಳಲ್ಲಿ ಅಗತ್ಯ ಸಂಖ್ಯೆಯ ಕೊಠಡಿಗಳ ಆಸನದ ವ್ಯವಸ್ಥೆಗಾಗಿ ಪೀಠೋಪಕರಣಗಳು, ಶಾಲೆಯ ಸುತ್ತಾ ಕಾಂಪೌಂಡ್, ಶೌಚಾಲಯ, ಕುಡಿಯುವ ನೀರು, ಸಿಸಿಟಿವಿ ಕ್ಯಾಮರಾ ಅಳವಡಿಸಿರುವಿಕೆ, ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲು ಸಾರಿಗೆ ವ್ಯವಸ್ಥೆ, ಪರೀಕ್ಷಾ ಕೇಂದ್ರಕ್ಕೆ ನಿಗದಿತ ಸಮಯದಲ್ಲಿ ಸುರಕ್ಷಿತವಾಗಿ ಪ್ರಶ್ನೆಪತ್ರಿಕೆಗಳನ್ನು ವಿತರಿಸಲು ರಸ್ತೆ ಮಾರ್ಗ, ಮುಂತಾದ ಎಲ್ಲಾ ಸೌಲಭ್ಯಗಳು ಇರುವ ಬಗ್ಗೆ ಪರಿಶೀಲಿಸುವುದು ಅತ್ಯವಶ್ಯಕವಾಗಿದೆ.

4. ಪರೀಕ್ಷಾ ಕೇಂದ್ರದ ಪ್ರತಿ ಕೊಠಡಿಗೆ 24 ವಿದ್ಯಾರ್ಥಿಗಳಂತೆ ಆಸನ ವ್ಯವಸ್ಥೆ ಮಾಡಿ ಪರೀಕ್ಷಾ ಕೇಂದ್ರ ರಚಿಸುವುದು.

5. ಶಾಲಾ/ಕಾಲೇಜಿನಲ್ಲಿರುವ ಮೂಲಭೂತ ಸೌಕರ್ಯ ಹಾಗೂ ಕೊಠಡಿ ಸಂಖ್ಯೆಗಳನ್ನು ಆಧರಿಸಿ ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಕನಿಷ್ಠ 250 ಅಭ್ಯರ್ಥಿಗಳು ಗರಿಷ್ಠ 750 ಅಭ್ಯರ್ಥಿಗಳವರೆಗೂ ಆಸನದ ವ್ಯವಸ್ಥೆ ಇರುವ ಸಾಮರ್ಥ್ಯವನ್ನು ಪರಿಗಣಿಸಿ ಬರುವ ಶಾಲೆಗಳ ಕ್ಲಸ್ಟರ್‌ಸಹಿತ ಪರೀಕ್ಷಾ ಕೇಂದ್ರಗಳನ್ನಾಗಿ ರಚಿಸುವುದು.

6. ಎಸ್.ಎಸ್.ಎಲ್.ಸಿ ಪರೀಕ್ಷೆ-2ಕ್ಕೂ ವೆಬ್ ಕ್ಯಾಸ್ಟಿಂಗ್ ಇರುವುದರಿಂದ ಸರ್ಕಾರಿ/ಅನುದಾನಿತ/ಅನುದಾನರಹಿತ

ಶಾಲೆಗಳ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರ ಕಡ್ಡಾಯವಾಗಿ ಅಳವಡಿಸುವ ಕುರಿತು ಅಗತ್ಯ

ಕ್ರಮವಹಿಸುವುದು.

7. ಸಿಸಿಟಿವಿ ಕ್ಯಾಮೆರಗಳು ಪರೀಕ್ಷಾ ದಿನಗಳಲ್ಲಿ 24 ಗಂಟೆಯಲ್ಲೂ ಕೆಲಸ ನಿರ್ವಹಿಸುವಂತಿರಬೇಕು.

8. ಪ್ರತಿ ಪರೀಕ್ಷಾ ಕೇಂದ್ರಕ್ಕೆ ಸೇರ್ಪಡೆ ಮಾಡಿರುವ ಶಾಲೆಯ ಶಾಲಾ ಸಂಕೇತ, ಶಾಲೆಯ ಹೆಸರು ಮತ್ತು ಸಂಪೂರ್ಣ ಅಂಚೆ ವಿಳಾಸವನ್ನು ಸ್ಪಷ್ಟವಾಗಿ ನಮೂದಿಸುವುದು ಕಡ್ಡಾಯ.

9. ಪರೀಕ್ಷಾ ಅವ್ಯವಹಾರವನ್ನು ತಡೆಗಟ್ಟುವ ನಿಟ್ಟಿನಲ್ಲಿ, ಬಹುಮಹಡಿ ಕಟ್ಟಡವಿರುವ ಪರೀಕ್ಷಾ ಕೇಂದ್ರಗಳಲ್ಲಿ ಸಾಧ್ಯವಾದಷ್ಟು ಪರೀಕ್ಷೆಗೆ ನೆಲಮಹಡಿಯಲ್ಲಿ ಆಸನ ವ್ಯವಸ್ಥೆ ಮಾಡದೇ ಮೊದಲನೇ ಮಹಡಿಯಿಂದ ವಿದ್ಯಾರ್ಥಿಗಳಿಗೆ ಆಸನ ವ್ಯವಸ್ಥೆ ಮಾಡುವುದು. ಪರೀಕ್ಷಾ ಕೇಂದ್ರದಲ್ಲಿ ವಿಕಲಚೇತನ ವಿದ್ಯಾರ್ಥಿಗಳಿದ್ದಲ್ಲಿ ಅಂತಹ ವಿದ್ಯಾರ್ಥಿಗಳಿಗೆ ಮಾತ್ರ ನೆಲಮಹಡಿಯಲ್ಲಿ ಆಸನ ವ್ಯವಸ್ಥೆ ಮಾಡುವುದು.

10. ಈಗಾಗಲೇ ನಿಮ್ಮ ಜಿಲ್ಲೆಯಲ್ಲಿ ಅತಿಸೂಕ್ಷ್ಮ, ಸೂಕ್ಷ್ಮ ಹಾಗೂ ಸಾಮಾನ್ಯ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ಅವ್ಯವಹಾರ ಪ್ರಕರಣಗಳಿದ್ದಲ್ಲಿ, ಅಂತಹ ಕೇಂದ್ರಗಳನ್ನು ರದ್ದುಪಡಿಸುವುದು.

11. ಪರೀಕ್ಷಾ ಕೇಂದ್ರಗಳ ರಚನೆಯ ಸಂಪೂರ್ಣ ಜವಾಬ್ದಾರಿಯನ್ನು ಜಿಲ್ಲಾ ಉಪನಿರ್ದೇಶಕರು(ಆಡಳಿತ), ಜಿಲ್ಲಾ ನೋಡಲ್ ಅಧಿಕಾರಿಗಳು ಹಾಗೂ ತಾಲ್ಲೂಕು ಕ್ಷೇತ್ರ ಶಿಕ್ಷಾಣಾಧಿಕಾರಿಗಳಿಗೆ ವಹಿಸಲಾಗಿದ್ದು, ಯಾವುದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಅಕ್ರಮಗಳು ನಡೆದಲ್ಲಿ, ಆಯಾ ಜಿಲ್ಲಾ ಉಪನಿರ್ದೇಶಕರು(ಆಡಳಿತ) ರವರನ್ನೇ ಸಂಪೂರ್ಣ ಹೊಣೆಗಾರರನ್ನಾಗಿ ಮಾಡಲಾಗುವುದು.

ಈ ಮೇಲಿನ ಎಲ್ಲಾ ಅಂಶಗಳನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೂಕ್ಷ್ಮವಾಗಿ ಗಮನಿಸಿ, ಪರೀಕ್ಷಾ ಕೇಂದ್ರಗಳನ್ನು ರಚಿಸಿ, ಪ್ರಸ್ತಾವನೆಯನ್ನು ಈ ಪತ್ರದೊಂದಿಗೆ ಲಗತ್ತಿಸಿರುವ ನಮೂನೆಯಲ್ಲಿ ತಯಾರಿಸಿ ಜಿಲ್ಲಾ ಉಪನಿರ್ದೇಶಕರಿಗೆ ನೀಡುವಂತೆ ಸೂಚನೆ ನೀಡಲಾಗಿದೆ.

SSLC Exam-2: CCTV cameras to be installed in examination centres `SSLC' ಪರೀಕ್ಷೆ-2 : ಪರೀಕ್ಷಾ ಕೇಂದ್ರಗಳಲ್ಲಿ ‘CCTV’ ಕಡ್ಡಾಯ ಅಳವಡಿಕೆಗೆ ಆದೇಶ
Share. Facebook Twitter LinkedIn WhatsApp Email

Related Posts

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM1 Min Read

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM1 Min Read

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM2 Mins Read
Recent News

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

07/03/2026 11:03 PM

Gas Booking Rules Change : ಗ್ಯಾಸ್ ಸಿಲಿಂಡರ್ ಬುಕಿಂಗ್ ನಿಯಮ ಬದಲಾವಣೆ ; ಇನ್ನು 21 ದಿನ ಕಾಯಲೇಬೇಕು!

07/03/2026 10:06 PM

ಹೊರಗಡೆ ಊಟ ಮಾಡಿದ ಮೇಲೆ ನಿದ್ರೆ ಆವರಿಸುತ್ತಿದೆಯೇ? ‘ಫುಡ್ ಕೋಮಾ’ ತಪ್ಪಿಸಲು ಇಲ್ಲಿವೆ 5 ಸರಳ ಸೂತ್ರಗಳು!

07/03/2026 9:55 PM

ದುಬೈ-ಅಬುಧಾಬಿ ವಿಮಾನ ನಿಲ್ದಾಣದ ಮೇಲೆ ಇರಾನ್ ದಾಳಿ ; ಪರಿಣಾಮವೇನು.? ಎಷ್ಟು ಹಾನಿ? ಎಷ್ಟು ವಿಮಾನಗಳು ರದ್ದಾಗಿವೆ?

07/03/2026 9:45 PM
State News
KARNATAKA

ಬೆಂಗಳೂರಿನ ಸರ್ವಜ್ಞನಗರದ ‘ಸ್ವಚ್ಛತಾ ಯೋಧರಿಗೆ’ ಗೌರವ: ನಾಳೆ ಪೌರಕಾರ್ಮಿಕರಿಗೆ ವಿಶೇಷ ಅಭಿನಂದನಾ ಸಮಾರಂಭ

By kannadanewsnow0907/03/2026 11:03 PM KARNATAKA 1 Min Read

ಬೆಂಗಳೂರು: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರವನ್ನು ಸುಂದರ ಮತ್ತು ಸ್ವಚ್ಛವಾಗಿಡಲು ಹಗಲಿರುಳು ಶ್ರಮಿಸುತ್ತಿರುವ ಪೌರಕಾರ್ಮಿಕರನ್ನು ಗೌರವಿಸಲು ವಿಶೇಷ ಅಭಿನಂದನಾ ಸಮಾರಂಭವನ್ನು ಆಯೋಜಿಸಲಾಗಿದೆ.…

ಚಿತ್ರದುರ್ಗ: ಚಳ್ಳಕೆರೆಯ ಪ್ರಗತಿ ವಿದ್ಯಾಲಯದಲ್ಲಿ ಶಾಲಾ ಸ್ಮರಣ ಸಂಚಿಕೆ ಬಿಡುಗಡೆ ಮಾಡಿದ ಸಂಸದ ಗೋವಿಂದ ಕಾರಜೋಳ

07/03/2026 9:37 PM

ಸೀ ಬರ್ಡ್ ಸಂತ್ರಸ್ಥರಿಗೆ ರೂ.27.70 ಕೋಟಿ ಹೆಚ್ಚುವರಿ ಪರಿಹಾರ ವಿತರಿಸಿದ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ

07/03/2026 9:27 PM

ನನಗೆ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಳ್ಳುವಲ್ಲಿ ನಂಬಿಕೆ ಇಲ್ಲ- ಮಾಜಿ ಸಚಿವ ಹರತಾಳು ಹಾಲಪ್ಪ

07/03/2026 8:26 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.