ಬೆಂಗಳೂರು: ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಪರೀಕ್ಷೆಗೆ ಹಾಜರಾದಂಧ 2,23,293 ವಿದ್ಯಾರ್ಥಿಗಳಲ್ಲಿ 69,275 ಮಂದಿ ಉತ್ತೀರ್ಣರಾಗಿದ್ದಾರೆ.
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, ದಿನಾಂಕ 14-06-2024ರಿಂದ 22-06-2024ರವರೆಗೆ 724 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾಧ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಸಲಾಯಿತು ಅಂತ ತಿಳಿಸಿದೆ.
ಈ ಪರೀಕ್ಷೆಗೆ ಒಟ್ಟು 2,23,292 ಮಂದಿ ನೋಂದಾಯಿಸಿಕೊಂಡಿದ್ದರು, ಇವರಲ್ಲಿ 69,275 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಸರ್ಕಾರಿ ಶಾಲೆಯ 32,570 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದರೇ, ಅನುದಾನಿತ ಶಾಲೆಯ 19,154, ಅನುದಾನ ರಹಿತ ಶಾಲೆಯ 17,551 ವಿದ್ಯಾರ್ಥಿಗಳು ಸೇರಿದಂತೆ 69,275 ವಿದ್ಯಾರ್ಥಿಗಳು ಎಸ್ ಎಸ್ ಎಲ್ ಸಿ ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಿದ್ದಾರೆ ಅಂತ ಮಾಹಿತಿ ನೀಡಿದೆ.
ಸ್ಕ್ಯಾನ್ ಪ್ರತಿ, ಮರುಎಣಿಕೆಗೆ ಮತ್ತು ಮರು ಮೌಲ್ಯ ಮಾಪನಕ್ಕೆ ಮಂಡಳಿಯಿಂದ ಮಹತ್ವದ ಮಾಹಿತಿ
ದಿನಾಂಕ 10-07-2024ರಿಂದ 15-07-2024ರವರೆಗೆ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ದಿನಾಂಕ 10-07-2024ರಿಂದ 16-07-2024ರವರೆಗೆ ಡೆಬಿಟ್, ಕ್ರೆಡಿಟ್ ಕಾರ್ಡ್, ಆನ್ ಲೈನ್ ಬ್ಯಾಂಕಿಂಗ್ ಮೂಲಕ ಉತ್ತರ ಪತ್ರಿಕೆಗಳ ಸ್ಕ್ಯಾನ್ ಪ್ರತಿಯನ್ನು ಪಡೆಯಲು ಅರ್ಜಿ ಸಲ್ಲಿಸಿದ ನಂತ್ರ ಆಫ್ ಲೈನ್ ಚಲನ್ ಡೌಲ್ ಲೋಡ್ ಮಾಡಿಕೊಂಡು ಶುಲ್ಕವನ್ನು ಬಿ1/ಕೆ1/ ಬ್ಯಾಂಕಿಗೆ ಪಾವತಿಸಬಹುದಾಗಿದೆ.
ದಿನಾಂಕ 13-07-2024ರಿಂದ 18-07-2024ರವರೆಗೆ ಉತ್ತರ ಪತ್ರಿಕೆಗಳ ಮರುಎಣಿಕೆಗೆ ಮತ್ತು ಮರು ಮೌಲ್ಯಮಾಪನಕ್ಕೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಲು ನಿಗದಿ ಪಡಿಸಲಾಗಿದೆ. ಇದಕ್ಕಾಗಿ ದಿನಾಂಕ 13-07-2024ರಿಂದ 19-07-2024ರವರೆಗೆ ನಿಗದಿ ಪಡಿಸಿದಂತ ಶುಲ್ಕವನ್ನು ಪಾವತಿಸಲು ಅವಕಾಶ ನೀಡಲಾಗಿದೆ.
ಇನ್ನೂ ಎಸ್ ಎಸ್ ಎಲ್ ಸಿ ಪರೀಕ್ಷೆ-3ಕ್ಕೆ ನೋಂದಾಯಿಸಿಕೊಳ್ಳೋದಕ್ಕೆ ದಿನಾಂಕ 10-07-2024ರಿಂದ 17-07-2024ರವರೆಗೆ ಅವಕಾಶ ನೀಡಲಾಗಿದೆ. ಎಸ್ ಎಸ್ ಎಲ್ ಸಿ ಪರೀಕ್ಷೆ-3ರ ಪರೀಕ್ಷೆಗಳು ದಿನಾಂಕ 02-08-2024ರಿಂದ 09-08-2024ರವರೆಗೆ ನಡೆಸಲಾಗುತ್ತದೆ ಅಂತ ಮಾಹಿತಿ ನೀಡಿದೆ.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING: ವಾಲ್ಮೀಕಿ ಅಭಿವೃದ್ಧಿ ನಿಗಮದ ಅವ್ಯವಹಾರ ಕೇಸ್: ನಾಗೇಂದ್ರ ನಿವಾಸದಲ್ಲಿ EDಗೆ ಮಹತ್ವದ ದಾಖಲೆಗಳು ಪತ್ತೆ
BREAKING : ವಾಲ್ಮೀಕಿ ಹಗರಣ ಕೇಸ್ : ಯಾವುದೇ ಕ್ಷಣದಲ್ಲಿ ಮಾಜಿ ಸಚಿವ ಬಿ.ನಾಗೇಂದ್ರ ಬಂಧನ ಸಾಧ್ಯತೆ!