ಬೆಂಗಳೂರು : ಎಸ್ ಎಸ್ ಎಲ್ ಸಿ ಪರೀಕ್ಷೆ-2 ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಜೂನ್ 14ರಿಂದ ಆರಂಭವಾಗಲಿದೆ.

ಮೇ 15ರಿಂದ ಜೂನ್‌ 5ರವರೆಗೆ ವಿಶೇಷ ಪರಿಹಾರ ಬೋಧನೆ ತರಗತಿ ನಡೆಸಲು ಸರ್ಕಾರ ಸುತ್ತೋಲೆ ಹೊರಡಿಸಿತ್ತು. ಆದರೆ, ಈಗ ಸರ್ಕಾರದ ಸೂಚನೆ ಮೇರೆಗೆ ದಿನಾಂಕವನ್ನು ಮುಂದೂಡಿರುವ ಪ್ರೌಢ ಶಿಕ್ಷಣ ಇಲಾಖೆ, ವಿಶೇಷ ತರಗತಿಗಳನ್ನು ಮೇ 29 ರಿಂದ ಜೂನ್‌ 13ರವರೆಗೆ ನಡೆಸಲು ಆದೇಶ ನೀಡಲಾಗಿದೆ. ಇನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ಜೂನ್ 14ರಿಂದ ಆರಂಭವಾಗಲಿದ್ದು, ಪರಿಷ್ಕೃತ ವೇಳಾಪಟ್ಟಿಯನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಬಿಡುಗಡೆ ಮಾಡಲಿದೆ.

ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖದಲ್ಲಿ 2024ರ ಮಾರ್ಚ್-ಏಪ್ರಿಲ್ ರಲ್ಲಿ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರಲ್ಲಿ ಅನುತ್ತೀರ್ಣರಾದ ಹಾಗೂ C ಮತ್ತು C+ ಪಡೆದ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗಾಗಿ 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-2ರಲ್ಲಿ ಉತ್ತೀರ್ಣರಾಗಲು ತಯಾರಿಗೊಳಿಸಲು ಆಯಾ ಶಾಲೆಯ ವಿಷಯ ಬೋಧನಾ ಶಿಕ್ಷಕರಿಂದ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ದಿನಾಂಕ 15.05.2024 ರಿಂದ ದಿನಾಂಕ:05.06.2024ರವರೆಗೆ ನಡೆಸಲು ಸುತ್ತೋಲೆ ಹೊರಡಿಸಲಾಗಿತ್ತು.

ಸದರಿ ವಿಶೇಷ ಪರಿಹಾರ ಬೋಧನಾ ತರಗತಿಗಳನ್ನು ಸರ್ಕಾರದ ಸೂಚನೆಗಳನ್ನಯ ಮುಂದೂಡಲಾಗಿದ್ದು, ಇವುಗಳನ್ನು ದಿನಾಂಕ: 29/05/2024 ರಿಂದ ದಿನಾಂಕ: 13/06/2024 ರವರೆಗೆ ನಡೆಸಲು ತಿಳಿಸಿದೆ. 2024ರ ಎಸ್.ಎಸ್.ಎಲ್.ಸಿ. ಪರೀಕ್ಷೆ-02ನ್ನು ದಿನಾಂಕ: 14/06/2024 ರಿಂದ ಪ್ರಾರಂಭಿಸಲಾಗುವುದು. ಸದರಿ ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿಯನ್ನು ಅಧ್ಯಕ್ಷರು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, ಇವರು ಪ್ರತ್ಯೇಕವಾಗಿ ಹೊರಡಿಸುತ್ತಾರೆ.

 

Share.
Exit mobile version