ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಜೂನ್.14ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ-2 ನಡೆಯಲಿದ್ದು, ವಿದ್ಯಾರ್ಥಿಗಳು ಪರೀಕ್ಷೆ ಸಮಯದಲ್ಲಿ ಪ್ರಮುಖ ನಿಯಮ ಪಾಲಿಸುವಂತೆ ಸೂಚನೆ ನೀಡಲಾಗಿದೆ.
ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಸಿಸಿ ಟಿವಿ ಅಳವಡಿಸುವುದು ಕಡ್ಡಾಯವಾಗಿರುತ್ತದೆ. ಸಿಸಿಟಿವಿ ಗಳು ಪರೀಕ್ಷಾ ಅವಧಿಯಲ್ಲಿ ಕಾರ್ಯ ನಿರ್ವಹಿಸುತ್ತಿರಬೇಕು. ಹಾಗೂ ಜಿಲ್ಲಾ ಪಂಚಾಯ್ತಿಯ ಸಿಇಓ ಕಚೇರಿಯಲ್ಲಿ ಸಿಸಿಟಿವಿ ವ್ಯವಸ್ಥೆಯನ್ನು ಮಾನಿಟರ್ ಮಾಡಲಾಗುತ್ತದೆ
ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ
ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ
ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ
ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ.
ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ
ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ
ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.
ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-2ರ ಪರಿಷ್ಕೃತ ವೇಳಾಪಟ್ಟಿ
-ದಿನಾಂಕ 14-06-2024ರ ಶುಕ್ರವಾರ – ಪ್ರಥಮ ಭಾಷೆ – ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲೀಷ್, ಇಂಗ್ಲೀಷ್(ಎನ್ ಸಿಇಆರ್ ಟಿ), ಸಂಸ್ಕೃತ.
-ದಿನಾಂಕ 15-06-2024ರ ಶನಿವಾರ- ತೃತೀಯ ಭಾಷೆ – ಹಿಂದಿ( ಎನ್ ಸಿ ಇ ಆರ್ ಟಿ), ಹಿಂದಿ, ಕನ್ನಡ, ಇಂಗ್ಲೀಷ್, ಅರೇಬಿಕ್, ಉರ್ದು, ಸಂಸ್ಕೃತ, ಕೊಂಕಣಿ, ತುಳು.ಎನ್ ಎಸ್ ಕ್ಯೂ ಎಫ್ ಪರೀಕ್ಷಾ ವಿಷಯಗಳು- ಮಾಹಿತಿ ತಂತ್ರಜ್ಞಾನ, ರೀಟೇಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್, ಆಪರೆಲ್ ಮೇಡ್ ಆಪ್ಸ್ ಅಂಡ್ ಹೋಮ್ ಫರ್ನಿಷಿಂಗ್, ಎಲೆಕ್ಟ್ರಾನಿಕ್ಸ್ ಅಂಡ್ ಹಾರ್ಡ್ ವೇರ್
ದಿನಾಂಕ 18-06-2024 : ಗಣಿತ, ಸಮಾಜಶಾಸ್ತ್ರ
-ದಿನಾಂಕ 19-06-2024ರ ಬುಧವಾರ – ಕೋರ್ ಸಬ್ಜೆಕ್ಟ್ – ಎಲಿಮೆಂಟ್ಸ್ ಆಫ್ ಎಲೆಕ್ಟ್ರಿಕಲ್ ಇಂಜಿನಿರಯರಿಂಗ್-IV, ಎಲಿಮೆಂಟ್ಸ್ ಆಫ್ ಮೆಕಾನಿಕಲ್ ಅಂಡ್ ಎಲೆಕ್ಟ್ರಿಕಲ್ ಇಂಜಿನಿಯರಿಂಗ್-2, ಎಲಿಮೆಂಟ್ಸ್ ಆಫ್ ಮೆಕ್ಯಾನಿಕಲ್ ಇಂಜಿನಿಯರಿಂಗ್-IV, ಇಂಜಿನಿಯರಿಂಗ್ ಗ್ರಾಫಿಕ್ಸ್-2, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್-IV, ಎಲಿಮೆಂಟ್ಸ್ ಆಫ್ ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್, ಪ್ರೋಗ್ರಾಮಿಂಗ್ ಇನ್ ANSI C, ಎಲಿಮೆಂಟ್ಸ್ ಆಫ್ ಕಂಪ್ಯೂಟರ್ ಸೈನ್ಸ್, ಅರ್ಥ ಶಾಸ್ತ್ರ.
-ದಿನಾಂಕ 20-06-2024ರ ಗುರುವಾರ- ಕೋರ್ ಸಬ್ಜೆಕ್ಟ್ – ವಿಜ್ಞಾನ, ರಾಜ್ಯಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ, ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ.
-ದಿನಾಂಕ 21-06-2024ರ ಶುಕ್ರವಾರ – ದ್ವಿತೀಯ ಭಾಷೆ – ಇಂಗ್ಲೀಷ್, ಕನ್ನಡ
-ದಿನಾಂಕ 22-06-2024ರ ಶನಿವಾರ – ಕೋರ್ ಸಬ್ಜೆಕ್ಟ್ – ಸಮಾಜ ವಿಜ್ಞಾನ