Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ಸಾಲಗಾರರಲ್ಲದಿದ್ದರೂ `ಸಿಬಿಲ್ ಸ್ಕೋರ್’ ಕುಸಿದ ಪ್ರಕರಣದಲ್ಲಿ ಸುಪ್ರೀಂ ಮಹತ್ವದ ತೀರ್ಪು!

07/04/2026 5:45 AM

ಉದ್ಯೋಗಿಗಳಿಗೆ `EPFO’ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ನಿಮಿಷಗಳಲ್ಲಿ ಸಿಗಲಿದೆ ₹5 ಲಕ್ಷದವರೆಗೆ ಆಟೋ ಸೆಟಲ್‌ಮೆಂಟ್, `PF’ ಹಣ!

07/04/2026 5:40 AM

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಇಂದು `ವಿಶೇಷ ಸಾಂದರ್ಭಿಕ ರಜೆ’ ಮಂಜೂರು

07/04/2026 5:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ, ಶಿಕ್ಷಣ ಸಚಿವರು ಮತ್ತು ಗಣ್ಯರು
KARNATAKA

ನಾಳೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ, ಶಿಕ್ಷಣ ಸಚಿವರು ಮತ್ತು ಗಣ್ಯರು

By kannadanewsnow0917/03/2026 3:28 PM

ಬೆಂಗಳೂರು: ನಾಳೆಯಿಂದ (ಮಾರ್ಚ್ 18) ರಿಂದ ಏಪ್ರಿಲ್ 2ರವರೆಗೆ ರಾಜ್ಯಾದ್ಯಂತ ನಡೆಯಲಿರುವ ಎಸ್‌ಎಸ್‌ಎಲ್‌ಸಿ (SSLC) ವಾರ್ಷಿಕ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ವಿಧಾನಸಭೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು, ವಿರೋಧ ಪಕ್ಷದ ನಾಯಕರು ಹಾಗೂ ಸಭಾಪತಿಗಳು ಒಕ್ಕೊರಲಿನಿಂದ ಶುಭ ಹಾರೈಸಿದರು.

ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಅವರ ಭರವಸೆಯ ನುಡಿಗಳು:

“ನಾಳೆಯಿಂದ ಆರಂಭವಾಗುತ್ತಿರುವ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿರುವ ಒಟ್ಟು 8,65,988 ವಿದ್ಯಾರ್ಥಿಗಳಿಗೆ ಸರ್ಕಾರದ ವತಿಯಿಂದ ಹಾಗೂ ನನ್ನ ವೈಯಕ್ತಿಕವಾಗಿ ಶುಭ ಹಾರೈಸುತ್ತೇನೆ. ವಿದ್ಯಾರ್ಥಿಗಳು ಯಾವುದೇ ಆತಂಕ, ಭಯವಿಲ್ಲದೆ ಪರೀಕ್ಷೆ ಎದುರಿಸಬೇಕು. ವಿದ್ಯಾರ್ಥಿಗಳಿಗೆ ಮೂರು ಪರೀಕ್ಷೆಗಳ (ಪರೀಕ್ಷೆ 1, 2, 3) ಅವಕಾಶ ಕಲ್ಪಿಸಲಾಗಿದೆ. ಒಂದು ವೇಳೆ ಕಡಿಮೆ ಅಂಕ ಬಂದರೆ ಅಥವಾ ಅನುತ್ತೀರ್ಣರಾದರೆ ಮತ್ತೆ ಪರೀಕ್ಷೆ ಬರೆಯಲು ಅವಕಾಶವಿರುವುದರಿಂದ ಯಾರೂ ಧೃತಿಗೆಡಬಾರದು ಹಾಗೂ ಆತಂಕಪಡುವ ಅಗತ್ಯವಿಲ್ಲ” ಎಂದು ವಿದ್ಯಾರ್ಥಿಗಳಿಗೆ ಧೈರ್ಯ ತುಂಬಿದರು.

ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಶ್ರೀ ಮಧು ಬಂಗಾರಪ್ಪ ಅವರ ನುಡಿಗಳು:

ವಿಧಾನ ಪರಿಷತ್‌ ಹಾಗೂ ವಿಧಾನಸಭೆಯಲ್ಲಿ ಮಾತನಾಡಿದ ಸಚಿವರು, “ದ್ವಿತೀಯ ಪಿಯುಸಿ ಪರೀಕ್ಷೆಗಳು ಯಾವುದೇ ಅಡೆತಡೆಯಿಲ್ಲದೆ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದು, ನಾಳೆಯಿಂದ ಏಪ್ರಿಲ್ 2ರವರೆಗೆ ಸುಮಾರು 8.66 ಲಕ್ಷ ವಿದ್ಯಾರ್ಥಿಗಳು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದಾರೆ. ಮಕ್ಕಳಿಗೆ ಪರೀಕ್ಷೆಯ ಭಯ ನಿವಾರಿಸಲು ನಮ್ಮ ಸರ್ಕಾರ ವರ್ಷದಲ್ಲಿ 3 ಪರೀಕ್ಷೆಗಳ ಅವಕಾಶ (Exam 1, 2 & 3) ನೀಡಿದೆ. ಬಡ ವಿದ್ಯಾರ್ಥಿಗಳಿಗೆ ಹೊರೆಯಾಗದಿರಲಿ ಹಾಗೂ ಪೋಷಕರ ಬಳಿ ಮತ್ತೆ ಹಣ ಕೇಳಲು ಹಿಂಜರಿಕೆಯಾಗದಿರಲಿ ಎಂಬ ಸದುದ್ದೇಶದಿಂದ, ಅನುತ್ತೀರ್ಣರಾದವರಿಗೆ ಮರುಪರೀಕ್ಷೆ ಬರೆಯಲು ಇದ್ದ ಶುಲ್ಕವನ್ನು ನಮ್ಮ ಸರ್ಕಾರ ರದ್ದುಪಡಿಸಿದೆ. ಅಲ್ಲದೆ, ಖಾಸಗಿ ಶಾಲೆಗಳ ಮಾದರಿಯಲ್ಲಿ ಸರ್ಕಾರಿ ಶಾಲೆಗಳಲ್ಲೂ ಯಶಸ್ವಿಯಾಗಿ ಪೋಷಕರು-ಶಿಕ್ಷಕರ ಸಭೆ (PTM) ನಡೆಸಲಾಗಿದೆ. ಪರೀಕ್ಷಾ ಪ್ರಕ್ರಿಯೆಗೆ ಸಹಕರಿಸುತ್ತಿರುವ ಗೃಹ ಇಲಾಖೆ, ಶಿಕ್ಷಕರು ಹಾಗೂ ಪೋಷಕರಿಗೆ ಧನ್ಯವಾದಗಳು. ಪರೀಕ್ಷೆ ಬರೆಯುವ ಎಲ್ಲರಿಗೂ ಈ ಸದನದ ಮೂಲಕ ಒಳಿತಾಗಲಿ ಎಂದು ಆಶಿಸುತ್ತೇನೆ” ಎಂದರು.

ವಿರೋಧ ಪಕ್ಷದ ನಾಯಕ ಶ್ರೀ ಆರ್. ಅಶೋಕ್ ಅವರ ಕಿವಿಮಾತು:

“ಎಸ್‌ಎಸ್‌ಎಲ್‌ಸಿ ಎಂಬುದು ವಿದ್ಯಾರ್ಥಿಗಳ ಜೀವನದ ಪ್ರಮುಖ ಘಟ್ಟ. ಪೋಷಕರು ಕೊನೆಯ ಕ್ಷಣದಲ್ಲಿ ಮಕ್ಕಳ ಮೇಲೆ ಅನಗತ್ಯವಾಗಿ ಅಂಕಗಳಿಗಾಗಿ ಒತ್ತಡ ಹೇರಿ ಅವರಿಗೆ ಮಾನಸಿಕ ಹಿಂಸೆ ನೀಡಬಾರದು. ಇದೇ ವೇಳೆ, ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಪ್ರಶ್ನೆಪತ್ರಿಕೆ ಹರಿಬಿಟ್ಟು ವಿದ್ಯಾರ್ಥಿಗಳಲ್ಲಿ ಗೊಂದಲ ಸೃಷ್ಟಿಸುವ ಕಿಡಿಗೇಡಿಗಳ ವಿರುದ್ಧ ಸರ್ಕಾರ ಮುಲಾಜಿಲ್ಲದೆ ಕಠಿಣ ಕ್ರಮ ಕೈಗೊಂಡು ಜೈಲಿಗೆ ಕಳುಹಿಸಬೇಕು. ನಾಡಿನ ಎಲ್ಲಾ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ ಉತ್ತಮ ಯಶಸ್ಸು ಸಿಗಲಿ” ಎಂದು ಹಾರೈಸಿದರು.

ವಿಧಾನ ಪರಿಷತ್ ಉಪಸಭಾಪತಿಗಳ ಕಿವಿಮಾತು:

ವಿಧಾನ ಪರಿಷತ್‌ನಲ್ಲಿ ಮಾತನಾಡಿದ ಉಪಸಭಾಪತಿಗಳು, “ಪರೀಕ್ಷೆ ಎಂದರೆ ಯುದ್ಧವಲ್ಲ, ವಿದ್ಯಾರ್ಥಿಗಳು ತಾವು ಓದಿದ್ದನ್ನು ಬರೆಯುವ ಒಂದು ವೇದಿಕೆ. ಯಾವುದೇ ಭಯವಿಲ್ಲದೆ, ಆತ್ಮವಿಶ್ವಾಸದಿಂದ ಪರೀಕ್ಷೆ ಎದುರಿಸಿ” ಎಂದು ಇಡೀ ಸದನದ ಪರವಾಗಿ ಶುಭಕೋರಿದರು.

ಪ್ರಸ್ತುತ ಅಧಿವೇಶನದಲ್ಲೇ 𝗞𝗔𝗢𝗠𝗔 𝟮𝟬𝟮𝟱 ಕಾಯ್ದೆ ಜಾರಿಗೊಳಿಸಿ: ರಾಜ್ಯ ಸರ್ಕಾರಕ್ಕೆ 𝗕𝗔𝗙 ಆಗ್ರಹ

ಮಂಡ್ಯದಲ್ಲಿ ಗೃಹಬಳಕೆ ಅನಿಲ ಸಿಲಿಂಡರ್ ಕೊರತೆ ಇಲ್ಲ: ಡಿಸಿ ಡಾ.ಕುಮಾರ್ ಮಾಹಿತಿ

Share. Facebook Twitter LinkedIn WhatsApp Email

Related Posts

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಇಂದು `ವಿಶೇಷ ಸಾಂದರ್ಭಿಕ ರಜೆ’ ಮಂಜೂರು

07/04/2026 5:35 AM1 Min Read

ಕರ್ನಾಟಕದ PU ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಸಿಗುವ ಗೌರವಧನವೆಷ್ಟು.? ಇಲ್ಲಿದೆ ಸಂಪೂರ್ಣ ಮಾಹಿತಿ

07/04/2026 5:25 AM1 Min Read

ಜಸ್ಟ್ ಹೀಗೆ ಮಾಡಿ, ನಿಮ್ಮ ‘ಸ್ವಯಂ ಗಣತಿ’ ಪೂರ್ಣಗೊಳಿಸಿ: ಏ.15 ಲಾಸ್ಟ್ ಡೇಟ್

06/04/2026 9:46 PM2 Mins Read
Recent News

BIG NEWS : ಸಾಲಗಾರರಲ್ಲದಿದ್ದರೂ `ಸಿಬಿಲ್ ಸ್ಕೋರ್’ ಕುಸಿದ ಪ್ರಕರಣದಲ್ಲಿ ಸುಪ್ರೀಂ ಮಹತ್ವದ ತೀರ್ಪು!

07/04/2026 5:45 AM

ಉದ್ಯೋಗಿಗಳಿಗೆ `EPFO’ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ನಿಮಿಷಗಳಲ್ಲಿ ಸಿಗಲಿದೆ ₹5 ಲಕ್ಷದವರೆಗೆ ಆಟೋ ಸೆಟಲ್‌ಮೆಂಟ್, `PF’ ಹಣ!

07/04/2026 5:40 AM

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಇಂದು `ವಿಶೇಷ ಸಾಂದರ್ಭಿಕ ರಜೆ’ ಮಂಜೂರು

07/04/2026 5:35 AM

ಇನ್ನುಂದೆ `ಮೆಡಿಕಲ್ ಶಾಪ್‌’ಗಳಲ್ಲಿ `CCTV’ ಅಳವಡಿಕೆ ಕಡ್ಡಾಯ: ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮ!

07/04/2026 5:30 AM
State News
KARNATAKA

ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಇಂದು `ವಿಶೇಷ ಸಾಂದರ್ಭಿಕ ರಜೆ’ ಮಂಜೂರು

By kannadanewsnow5707/04/2026 5:35 AM KARNATAKA 1 Min Read

ಬೆಂಗಳೂರು: ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಗಿರುವ ವಿಶೇಷ ಕಾರ್ಯಾಗಾರದಲ್ಲಿ ಭಾಗವಹಿಸುವ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಕರ್ನಾಟಕ ಸರ್ಕಾರವು…

ಕರ್ನಾಟಕದ PU ಕಾಲೇಜಿನ ಅತಿಥಿ ಉಪನ್ಯಾಸಕರಿಗೆ ಸಿಗುವ ಗೌರವಧನವೆಷ್ಟು.? ಇಲ್ಲಿದೆ ಸಂಪೂರ್ಣ ಮಾಹಿತಿ

07/04/2026 5:25 AM

ಜಸ್ಟ್ ಹೀಗೆ ಮಾಡಿ, ನಿಮ್ಮ ‘ಸ್ವಯಂ ಗಣತಿ’ ಪೂರ್ಣಗೊಳಿಸಿ: ಏ.15 ಲಾಸ್ಟ್ ಡೇಟ್

06/04/2026 9:46 PM

ನಾನು ಯಾರಿಗೆ ವಿಶ್ವಾಸದ್ರೋಹ ಮಾಡಿದ್ದೇನೆ: ಅರಳು ಮರಳು ಯಡಿಯೂರಪ್ಪ ಉತ್ತರ ಹೇಳಲಿ- ಸಿಎಂ ಸಿದ್ಧರಾಮಯ್ಯ

06/04/2026 9:38 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.