ಬೆಂಗಳೂರು: ಎಸ್.ಎಸ್.ಎಲ್.ಸಿ ಪರೀಕ್ಷೆ ಮಾರ್ಚ್ 25 ರಿಂದ ಏಪ್ರಿಲ್ 6 ರವರೆಗೆ ನಡೆಯಲಿದ್ದು ಪರೀಕ್ಷೆಯನ್ನು ಸುಗಮವಾಗಿ ಮತ್ತು ಪರೀಕ್ಷಾ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 144 ಸೆಕ್ಷನ್ ಜಾರಿಗೊಳಿಸಿ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಕೇಂದ್ರಗಳ ಸುತ್ತಮುತ್ತ ಇರುವ ಜೆರಾಕ್ಸ್ ಅಂಗಡಿ, ಇಂಟರ್ ನೆಟ್ ಕೇಂದ್ರ ಮುಚ್ಚುವಂತೆ ಆದೇಶಿಸಲಾಗಿದೆ.
KSRTC ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ : ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ವಾರ್ಷಿಕ ಪರೀಕ್ಷೆಯಂದು ಕೆಎಸ್ಆರ್ ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ.
ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 25.03.2024 ರಿಂದ 06.04.2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಅಂತಿಮಾ ಪರೀಕ್ಷಾ ವೇಳಾಪಟ್ಟಿ
25-03-2024 ರಂದು ಪ್ರಥಮ ಭಾಷೆ ಕನ್ನಡ,ಇಂಗ್ಲಿಷ್, ಹಿಂದಿ, ಮರಾಠಿ,ತಮಿಳು, ಉರ್ದು,ಸಂಸ್ಕೃತ
27-03-2024 ರಂದು ಸಮಾಜ ವಿಜ್ಞಾನ
30-03-2024ರಂದು ವಿಜ್ಞಾನ, ರಾಜ್ಯ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
03-04-2024 ರಂದು ಅರ್ಥಶಾಸ್ತ್ರ
04-04-2024- ತೃತೀಯ ಭಾಷೆ ಕನ್ನಡ,ಇಂಗ್ಲಿಷ್, ಹಿಂದಿ, ಉರ್ದು,ಸಂಸ್ಕೃತ, ಪರ್ಶಿಯನ್, ತುಳು
06-04-2024- ದ್ವೀತಿಯ ಭಾಷೆ ಇಂಗ್ಲಿಷ್, ಕನ್ನಡ