ಬೆಂಗಳೂರು : ರಾಜ್ಯಾದ್ಯಂತ ಮಾ.25 ರಿಂದ ಏ.06 ರವರೆಗೆ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಶಾಂತಿ-ಸುವ್ಯವಸ್ಥೆ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶವನ್ನು ದಂಡ ಪ್ರಕ್ರಿಯಾ ಸಂಹಿತೆ 1973ರ ಕಲಂ 144 ಅನ್ವಯ ನಿರ್ಭಂದಿತ ಪ್ರದೇಶವೆಂದು ಘೋಷಿಸಲಾಗಿದೆ.
ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್, ಕಂಪ್ಯೂಟರ್, ಸೈಬರ್ ಸೆಂಟರ್‍ಗಳುಕಾರ್ಯನಿರ್ವಹಿಸುವಂತಿಲ್ಲ ಮತ್ತು ಅನಧೀಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಿದೆ. ಈ ಆದೇಶವು ಎಸ್‍ಎಸ್‍ಎಲ್‍ಸಿ ಪರೀಕ್ಷೆಯ ಮೇಲ್ವಿಚಾರಣೆ ಕಾರ್ಯ ನಿರ್ವಹಿಸುವ ಸಿಬ್ಬಂದಿಯವರಿಗೆ ಅನ್ವಯಿಸುವುದಿಲ್ಲ ಎಂದು ಅವರು ಹೊರಡಿಸಿರುವ ಆದೇಶದಲ್ಲಿ ತಿಳಿಸಲಾಗಿದೆ.
KSRTC ಬಸ್ ಗಳಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ
ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ವಾರ್ಷಿಕ ಪರೀಕ್ಷೆಯಂದು ಕೆಎಸ್‌ಆರ್ ಟಿಸಿ ಬಸ್ಸಿನಲ್ಲಿ ಉಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರಯಾಣಿಸಲು ಅವಕಾಶ ಮಾಡಿಕೊಡಲಾಗಿದೆ.
ಕ.ರಾ.ರ.ಸಾ.ನಿಗಮವು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ದಿನಾಂಕಗಳಂದು ಅಂದರೆ, ದಿನಾಂಕ 25.03.2024 ರಿಂದ 06.04.2024 ರವರೆಗೆ, ಪರೀಕ್ಷೆಗೆ ಹಾಜರಾಗುವ ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ “ಎಸ್‌ಎಸ್‌ಎಲ್‌ಸಿ ಪರೀಕ್ಷಾ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ.
ವಿದ್ಯಾರ್ಥಿಗಳಿಗೆ ಈ ನಿಯಮಗಳ ಪಾಲನೆ ಕಡ್ಡಾಯ
ವಿದ್ಯಾರ್ಥಿಗಳು, ಸರಳ ಕ್ಯಾಲ್ಕುಲೇಟರ್ಗಳನ್ನು ಮಾತ್ರ ಬಳಸಲು ಅವಕಾಶ
ಸ್ಟ್ರಾಟಿಸ್ಟಿಕ್ಸ್ ವಿಷಯದಲ್ಲಿ ಮಾತ್ರ ಸೈಂಟಿಫಿಕ್ ಕ್ಯಾಲ್ಕುಲೇಟರ್ ಬಳಸಲು ಅನುಮತಿ
ಪರೀಕ್ಷೆಯ ಅಂತಿಮ ಬೆಲ್ ಹೊಡೆಯುವ ಮುನ್ನ ಪರೀಕ್ಷಾ ಕೊಠಡಿಯಿಂದ ಹೊರಡುವ ವಿದ್ಯಾರ್ಥಿಗಳಿಂದ ಉತ್ತರ ಪತ್ರಿಕೆ ಮತ್ತು ಪ್ರಶ್ನೆ ಪತ್ರಿಕೆಗಳನ್ನು ಕಡ್ಡಾಯವಾಗಿ ಪಡೆಯಲಾಗುತ್ತದೆ.
ಗುರುತಿನ ಚೀಟಿ ಹಾಗೂ ಹಾಲ್ ಟಿಕೆಟ್ ಕಡ್ಡಾಯ
ಮೊಬೈಲ್ ಫೋನ್ , ಎಲೆಕ್ಟ್ರಿಕಲ್ ಉಪಕರಣಗಳ ಬಳಕೆ ನಿಷೇಧ
ಪರೀಕ್ಷಾ ಅವಧಿಗಿಂತ ಮುಂಚೆ ಹೊರಕ್ಕೆ ಹೋಗುವ ವಿದ್ಯಾರ್ಥಿಗಳಿಗೆ ಪ್ರಶ್ನೆ ಪತ್ರಿಕೆ ನೀಡಲಾಗುವುದಿಲ್ಲ.
ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ಯಾವುದೇ ರೀತಿಯ ಎಸ್.ಟಿ.ಡಿ., ಮೊಬೈಲ್ ಪೇಜರ್, ಝರಾಕ್ಸ್, ಟೈಪಿಂಗ್ ಮುಂತಾದವುಗಳನ್ನು ನಿಷೇಧಿಸಲಾಗಿದೆ.
ಎಸ್‌ಎಸ್‌ಎಲ್‌ಸಿ ಅಂತಿಮಾ ಪರೀಕ್ಷಾ ವೇಳಾಪಟ್ಟಿ
25-03-2024 ರಂದು ಪ್ರಥಮ ಭಾಷೆ ಕನ್ನಡ,ಇಂಗ್ಲಿಷ್, ಹಿಂದಿ, ಮರಾಠಿ,ತಮಿಳು, ಉರ್ದು,ಸಂಸ್ಕೃತ
27-03-2024 ರಂದು ಸಮಾಜ ವಿಜ್ಞಾನ
30-03-2024ರಂದು ವಿಜ್ಞಾನ, ರಾಜ್ಯ ಶಾಸ್ತ್ರ, ಹಿಂದೂಸ್ತಾನಿ ಸಂಗೀತ, ಕರ್ನಾಟಕ ಸಂಗೀತ
03-04-2024 ರಂದು ಅರ್ಥಶಾಸ್ತ್ರ
04-04-2024- ತೃತೀಯ ಭಾಷೆ ಕನ್ನಡ,ಇಂಗ್ಲಿಷ್, ಹಿಂದಿ, ಉರ್ದು,ಸಂಸ್ಕೃತ, ಪರ್ಶಿಯನ್, ತುಳು
06-04-2024- ದ್ವೀತಿಯ ಭಾಷೆ ಇಂಗ್ಲಿಷ್, ಕನ್ನಡ