ಬೆಂಗಳೂರೂ: : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ, 2024-25ನೇ ಸಾಲಿನ ಮಾರ್ಚ್ / ಏಪ್ರಿಲ್ 2024ರ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮಾರ್ಚ್ / ಏಪ್ರಿಲ್ 2024ರಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ವಾರ್ಷಿಕ ಪರೀಕ್ಷೆಯನ್ನು ದಿನಾಂಕ 25-03-2024 ರಿಂದ 06-04-2024 ರವರೆಗೆ ನಡೆಸಲು ತೀರ್ಮಾನಿಸಿದೆ.
ಈ ಕುರಿತು ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಸದರಿ ವೇಳಾಪಟ್ಟಿಯನ್ನು ಎಲ್ಲ ಸರ್ಕಾರಿ/ ಅನುದಾನಿತ/ ಅನುದಾನರಹಿತ ಪ್ರೌಢಶಾಲೆಗಳ ಮುಖ್ಯ ಶಿಕ್ಷಕರು ಸೂಚನಾ ಫಲಕದಲ್ಲಿ ಕಡ್ಡಾಯವಾಗಿ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿ ವಿದ್ಯಾರ್ಥಿಗಳಿಗೆ ಖುದ್ದಾಗಿ ಗಮನಿಸಲು ಸೂಚಿಸಿದೆ.
ಪ್ರಥಮ ಭಾಷೆಗೆ 100 ಗರಿಷ್ಠ ಅಂಕಗಳು , ಉಳಿದ ವಿಷಯಗಳಿಗೆ ಪ್ರತಿ ವಿಷಯಕ್ಕೆ 80 ಅಂಕಗಳಂತೆ ಪರೀಕ್ಷೆ ನಿಗದಿಪಡಿಸಲಾಗಿದೆ. ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳ ಪರೀಕ್ಷೆ ಬರೆಯಲು 3 ಗಂಟೆ ಮತ್ತು ಪ್ರಶ್ನೆ ಪತ್ರಿಕೆ ಓದಲು 15 ನಿಮಿಷ ಹಾಗೂ ದ್ವಿತೀಯ ಭಾಷೆ ಮತ್ತು ತೃತೀಯ ಭಾಷೆ ಗಳಿಗೆ ಪರೀಕ್ಷೆ ಬರೆಯಲು 2 ಗಂಟೆ 45 ನಿಮಿಷ ಹಾಗು ಪ್ರಶ್ನೆಪತ್ರಿಕೆ ಓದಲು 15 ನಿಮಿಷ ನಿಗದಿಪಡಿಸಲಾಗಿದೆ.
ಪ್ರಥಮ ಭಾಷೆ ಮತ್ತು ಐಚ್ಛಿಕ ವಿಷಯಗಳಿಗೆ ಬೆಳಗ್ಗೆ 10.30 ರಿಂದ ಮಧ್ಯಾಹ್ನ1.45ರವರೆಗೆ ಮತ್ತು ದ್ವಿತೀಯ, ತೃತೀಯ ಬಾಷೆ ಬೆಳಿಗ್ಗೆ10.30 ರಿಂದ ಮಧ್ಯಾಹ್ನ 1.30 ರವರೆಗೆ ಅವಧಿ ನಿಗದಿಪಡಿಸಲಾಗಿದೆ.