ಬೆಂಗಳೂರು: ಇಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ ಅಧ್ಯಕ್ಷತೆಯಲ್ಲಿ ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆ ಕುರಿತು ಸಂವಾದ ಕಾರ್ಯಕ್ರಮ ನಡೆಯಿತು. ಈ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ.
ಇಂದು ಬೆಂಗಳೂರಿನ “ರಾಜ್ಯ ಶಿಕ್ಷಣ ಸಂಶೋಧನೆ ಮತ್ತು ತರಬೇತಿ ಇಲಾಖೆ” (D.S.E.R.T) ಕಚೇರಿಯಲ್ಲಿ “ಎಸ್.ಎಸ್.ಎಲ್.ಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ, ಮಾರ್ಗದರ್ಶನ ಮತ್ತು ಫಲಿತಾಂಶ ಸುಧಾರಣೆ ಕುರಿತು ಸಂವಾದ ಕಾರ್ಯಕ್ರಮ ನಡೆಸಲಾಯಿತು.
♦️ವಿವಿಧ ಜಿಲ್ಲೆಗಳ ಜಿಲ್ಲಾ ಪಂಚಾಯತ್ ಸಿಇಒ ಹಾಗೂ ಜಿಲ್ಲಾ ಉಪನಿರ್ದೇಶಕರೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಶೈಕ್ಷಣಿಕ ಕಾರ್ಯಕ್ರಮಗಳ ಪ್ರಗತಿ ಕುರಿತು ಮಾಹಿತಿ ಪಡೆದು ಸಮಗ್ರವಾಗಿ ಚರ್ಚಿಸಲಾಯಿತು.
♦️ಮಕ್ಕಳು ಶೈಕ್ಷಣಿಕವಾಗಿ ಹಿಂದುಳಿಯದಂತೆ ಅವರಿಗೆ ಪ್ರೋತ್ಸಾಹ ಹಾಗೂ ಮಾರ್ಗದರ್ಶನ ನೀಡುವುದು ನಮ್ಮ ಆದ್ಯ ಕರ್ತವ್ಯವಾಗಿದ್ದು, ಮಕ್ಕಳಿಗೆ ಆತ್ಮವಿಶ್ವಾಸ ತುಂಬುವ ಅನೇಕ ವಿನೂತನ ಪ್ರಯತ್ನಗಳನ್ನು ನಮ್ಮ ಶಿಕ್ಷಣ ಇಲಾಖೆ ಹಾಗೂ ಸರ್ಕಾರ ಮಾಡುತ್ತಿದೆ.
♦️SSLC ಮತ್ತು PUC ಫಲಿತಾಂಶ ವೃದ್ಧಿಗೆ ವಿದ್ಯಾರ್ಥಿಗಳಿಗೆ ಸಹಕಾರಿಯಾಗಲೆಂದು 20 ಅಂಶಗಳ ಕಾರ್ಯಕ್ರಮ ಅನುಷ್ಠಾನ ಮಾಡಲಾಗಿದೆ. ಇದರಿಂದಾಗಿ ವಿದ್ಯಾರ್ಥಿಗಳಲ್ಲಿ ಪರೀಕ್ಷಾ ಭಯ ಮತ್ತು ಒತ್ತಡ ನಿವಾರಣೆಗೆ ವಿಶೇಷ ಒತ್ತು ನೀಡಿಲಾಗಿದೆ.
♦️ಸರ್ಕಾರಿ ಶಾಲೆಗಳಲ್ಲಿ ಗುಣಾತ್ಮಕ ಶಿಕ್ಷಣ ನೀಡಲು ಮಧ್ಯಾಹ್ನದ ಬಿಸಿಯೂಟ, ಹಾಲು, ಉಚಿತ ಸಮವಸ್ತ್ರ, ಪುಸ್ತಕ, ಶೂ, ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ, ರಾಗಿಮಾಲ್ಟ್, ಮತ್ತಿತರ ಸೌಲಭ್ಯಗಳನ್ನು ನೀಡಲಾಗುತ್ತಿದೆ.
♦️ರಾಜ್ಯದಲ್ಲಿ ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗಳ ಸರ್ವಾಂಗೀಣ ಅಭಿವೃದ್ಧಿಗೆ ಈಗಾಗಲೇ ಕ್ರಮ ಕೈಗೊಂಡಿದ್ದು ಈ ಬಾರಿ ಎಲ್ಲ ಜಿಲ್ಲೆಗಳಲ್ಲಿಯೂ ಉತ್ತಮ ಗುಣಮಟ್ಟದ ಫಲಿತಾಂಶ ಬರುವ ನಿರೀಕ್ಷೆಯಿದೆ ಎಂದು ತಿಳಿಸಿದೆನು.
♦️ಕೆಲ ವಿದ್ಯಾರ್ಥಿಗಳು ಸಂವಾದ ಕಾರ್ಯಕ್ರಮದಲ್ಲಿ ಭಾಗವಹಿಸಿ, ಶಿಕ್ಷಣ ಇಲಾಖೆಯ ವಿನೂತನ ಕಾರ್ಯಕ್ರಮಗಳ ಕುರಿತು ಚರ್ಚಿಸಿದರು. ಶಿಕ್ಷಣ ಇಲಾಖೆಯ ಮಹತ್ತರ ಕಾರ್ಯಕ್ರಮಗಳಾದ ಉಚಿತ ವಿದ್ಯುತ್, ಮೂರು ಪರೀಕ್ಷೆಗಳು, ವೆಬ್ ಕಾಸ್ಟಿಂಗ್, ಫೋನ್ ಇನ್, ವೇಕ್ ಅಪ್ ಕಾಲ್ ಹಾಗೂ ವಿಶೇಷ ತರಗತಿಯ ಬಗ್ಗೆ ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.
♦️ಸಂವಾದ ಕಾರ್ಯಕ್ರಮದಲ್ಲಿ SSLC ಫಲಿತಾಂಶ ಉತ್ತಮಪಡಿಸಲು ಎಲ್ಲಾ ಜಿಲ್ಲೆಗಳಲ್ಲಿ ಅನುಸರಿಸಿರುವ ಅತ್ಯುತ್ತಮ ಪದ್ಧತಿಗಳ ಬಗೆಗಿನ ವರದಿ ಪುಸ್ತಕ ಹಾಗೂ “ನಿಮ್ಮ ಯಶಸ್ಸು ನಮ್ಮ ಗುರಿ 2024-2025” ಮಾರ್ಗದರ್ಶಿ ಕೈಪಿಡಿಯನ್ನು ಬಿಡುಗಡೆಗೊಳಿಸಲಾಯಿತು.
♦️ರಾಜ್ಯದಾದ್ಯಂತ ಪರೀಕ್ಷೆಗೆ ಎದುರಿಸಲು ಸಜ್ಜಾಗಿರುವ ವಿದ್ಯಾರ್ಥಿಗಳು ಭಯದಿಂದ ಮುಕ್ತರಾಗಿ ಧೈರ್ಯ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆಗೆ ಹಾಜರಾಗುವಂತೆ ಮಕ್ಕಳಿಗೆ ಶುಭಹಾರೈಸಿದೆನು.
ಈ ವೇಳೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ವಿ.ರಶ್ಮಿ ಮಹೇಶ್, ಆಯುಕ್ತರಾದ ತ್ರಿಲೋಕಚಂದ್ರ ಕೆ.ವಿ, ರಾಜ್ಯ ಯೋಜನಾ ನಿರ್ದೇಶಕರಾದ ಎಂ.ಕೂರ್ಮರಾವ್, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಅಧ್ಯಕ್ಷರಾದ ಬಸವರಾಜೇಂದ್ರ, ಡಿ.ಎಸ್.ಇ.ಆರ್.ಟಿ ನಿರ್ದೇಶಕರಾದ ಹೆಚ್.ಎನ್ ಗೋಪಾಲಕೃಷ್ಣ, ಪ್ರೌಢ ಶಿಕ್ಷಣ ವಿಭಾಗದ ನಿರ್ದೇಶಕರಾದ ಕೃಷ್ಣಾಜೀ ಕರಿಚನ್ನಣ್ಣನವರ್ ಹಾಗೂ ಪ್ರಾಥಮಿಕ ಶಿಕ್ಷಣ ನಿರ್ದೇಶಕರಾದ ಡಾ. ಸಿಪ್ರಿಯಾನ್ ಮಾಂಟೆರೋ ಉಪಸ್ಥಿತರಿದ್ದರು.