ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆಗಳು ಮತ್ತು ಮೌಲ್ಯಮಾಪನ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ಸಿ ಫಲಿತಾಂಶವನ್ನು ನಾಳೆ ಬೆಳಗ್ಗೆ 10.30 ಗಂಟೆಗೆ ಪ್ರಕಟಿಸಲಿದೆ.

ರಾಜ್ಯಾದ್ಯಂತ 10 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾದ ಅಭ್ಯರ್ಥಿಗಳು ಕೆಎಸ್ಇಎಬಿ 10 ನೇ ತರಗತಿ ಫಲಿತಾಂಶಗಳನ್ನು ಕರ್ನಾಟಕ ಫಲಿತಾಂಶಗಳ ಅಧಿಕೃತ ವೆಬ್ಸೈಟ್ನಲ್ಲಿ karresults.nic.in ನಲ್ಲಿ ಪರಿಶೀಲಿಸಬಹುದು. ನೇರ ಲಿಂಕ್ ಅನ್ನು kseab.karnataka.gov.in ನಲ್ಲಿ ಪರಿಶೀಲಿಸಬಹುದು.ರಾಜ್ಯಾದ್ಯಂತ ಸುಮಾರು 8 ಲಕ್ಷ ಅಭ್ಯರ್ಥಿಗಳು ಕರ್ನಾಟಕ 10 ನೇ ತರಗತಿ ಬೋರ್ಡ್ ಪರೀಕ್ಷೆಗೆ ಹಾಜರಾಗಿದ್ದರು.

ಮಾರ್ಚ್/ಏಪ್ರಿಲ್ 2024ರ ಎಸ್.ಎಸ್.ಎಲ್.ಸಿ ಪರೀಕ್ಷೆ-1 ನ್ನು ದಿನಾಂಕ:25.03.2024 ರಿಂದ 06.04.2024 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ: 09.05.2024 ರಂದು ಬೆಳಗ್ಗೆ 10.30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, tonttech-560003. ಇಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ. ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ:09.05.2024ರ ಬೆಳಗ್ಗೆ 10.30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ.

ಈ ರೀತಿ ರಿಸಲ್ಟ್ ಚೆಕ್ ಮಾಡಿ
ಇಲಾಖೆಯ ಅಧಿಕೃತ ವೆಬ್​ಸೈಟ್​​ಗಳಾದ kseab.karnataka.gov.in ಮತ್ತು karresults.nic.in ಗಳಲ್ಲಿ ವೀಕ್ಷಿಸಲು ಮತ್ತು ಡೌನ್‌ಲೋಡ್ ಮಾಡಲು ಅವಕಾಶವಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ತಿಳಿಸಿದೆ.
ಫಲಿತಾಂಶ ನೋಡುವುದು, ಡೌನ್​ಲೋಡ್ ಮಾಡುವುದು ಹೇಗೆ?

ಅಧಿಕೃತ ವೆಬ್​ಸೈಟ್ karresults.nic.in ಗೆ ಭೇಟಿ ನೀಡಿ

ಮುಖಪುಟದಲ್ಲಿ SSLC Results 2024 ಲಿಂಕ್ ಅನ್ನು ಕ್ಲಿಕ್ ಮಾಡಿ

ಹೊಸ ಲಾಗಿನ್ ಪುಟವು ತೆರೆಯುತ್ತದೆ

ನಿಮ್ಮ ಅಪ್ಲಿಕೇಶನ್ ಸಂಖ್ಯೆ ಮತ್ತು ಜನ್ಮ ದಿನಾಂಕವನ್ನು ನಮೂದಿಸಿ

ಆಗ ಫಲಿತಾಂಶ ಕಾಣಿಸಿಕೊಳ್ಳುತ್ತದೆ, ಅಲ್ಲಿ ಡೌನ್​ಲೋಡ್ ಮಾಡಿ

Share.
Exit mobile version