ಬೆಂಗಳೂರು : ರಾಜ್ಯಾದ್ಯಂತ ಶನಿವಾರ ನಡೆದ ಎಸ್ ಎಸ್ ಎಲ್ ಸಿ ವಿಜ್ಞಾನ ಪರೀಕ್ಷೆಗೆ ಶೇ. 98.2 ರಷ್ಟು ವಿದ್ಯಾರ್ಥಿಗಳು ಹಾಜರಾಗಿದ್ದು, ಬಾಗಲಕೋಟೆ ಜಿಲ್ಲೆಯಲ್ಲಿ ಪರೀಕ್ಷಾ ಅಕ್ರಮದಲ್ಲಿ ಭಾಗಿಯಾದ ಒಬ್ಬ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ.
ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಿದ್ದು ಬೆಂಗಳೂರು ಉತ್ತರದಿಂದ 47498, ಬೆಂಗಳೂರು ದಕ್ಷಿಣದಿಂದ 60548, ರಾಮನಗರ ಜಿಲ್ಲೆಯಲ್ಲಿ 12899, ಬೆಂಗಳೂರು ಗ್ರಾಮಾಂತರದಲ್ಲಿ 14162, ಚಿಕ್ಕಬಳ್ಳಾಪುರ 15675 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿರೋದಾಗಿ ತಿಳಿಸಿದೆ.
ಇಂದಿನ ವಿಜ್ಞಾನ ವಿಷಯದ ಎಸ್ ಎಸ್ ಎಲ್ ಸಿ ಪರೀಕ್ಷೆಗೆ 8,56,750 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 8,41,439 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದಾರೆ. ಬಾಗಲಕೋಟೆಯ ಬಿಳಗಿಯಲ್ಲಿನ ಆದರ್ಶ ವಿದ್ಯಾಲಯ ಪರೀಕ್ಷಾ ಕೇಂದ್ರದಲ್ಲಿ ನಕಲಿಗೆ ಯತ್ನಿಸಿದಂತ ಓರ್ವ ವಿದ್ಯಾರ್ಥಿಯನ್ನು ಡಿಬಾರ್ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ.
ಒಟ್ಟಾರೆಯಾಗಿ 8,56,750 ಮಂದಿಯಲ್ಲಿ 8,41,439 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. 15,311 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದಾರೆ. ಶೇಕಡವಾರು ಹಾಜರಾತಿ ಪ್ರಮಾಣ ಶೇ.98.2ರಷ್ಟು ಆಗಿದೆ ಎಂದು ತಿಳಿಸಿದೆ.
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ನಕಲು ಮಾಡೋದಕ್ಕೆ ಅವಕಾಶ ಮಾಡಿಕೊಟ್ಟಂತ ನಾಲ್ವರು ಶಿಕ್ಷಕರನ್ನು ಡಿಡಿಪಿಐ ರವಿಶಂಕರರೆಡ್ಡಿ ಆದೇಶಿಸಿದ್ದಾರೆ.
ಚಳ್ಳಕೆರೆಯ ಮಜರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ರೇವಣ್ಣ, ಚಳ್ಳಕೆರೆಯ ಗೋಸಿಕೆರೆ ಶಾಲೆಯ ರಾಘವೇಂದ್ರ, ಪಿ.ಓಬನಹಳ್ಳಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಚಂದ್ರಶೇಖರ್ ಹಾಗೂ ಕೊರ್ಲಕುಂಟೆಯ ಹಿರಿಯ ಪ್ರಾಥಮಿಕ ಶಾಲೆಯ ಪ್ರಕಾಶ್ ಎಂಬುವರನ್ನು ಅಮಾನತುಗೊಳಿಸಲಾಗಿದೆ.
ವಿದ್ಯಾರ್ಥಿಗಳು ನಕಲು ಮಾಡುವುದನ್ನು ತಡೆಯದೇ ಅದಕ್ಕೆ ಸಹಕಾರ ನೀಡಿದಂತ ಆರೋಪ ಈ ನಾಲ್ವರು ಶಿಕ್ಷಕರ ವಿರುದ್ಧ ಕೇಳಿ ಬಂದಿದೆ. ಈ ಕಾರಣದಿಂದಾಗಿ ಡಿಡಿಪಿಐ ರವಿಶಂಕರರೆಡ್ಡಿ ಅವರು ಕರ್ತವ್ಯ ಲೋಪ, ಬೇಜವಾಬ್ದಾರಿ, ನಿರ್ಲಕ್ಷ್ಯದ ಹಿನ್ನಲೆಯಲ್ಲಿ ನಾಲ್ವರು ಶಿಕ್ಷಕರನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ.