`SSLC’ ವಿದ್ಯಾರ್ಥಿಗಳ ಗಮನಕ್ಕೆ : ಪರೀಕ್ಷಾ ಕೇಂದ್ರ ಬದಲಾವಣೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ – Kannada News Now


State

`SSLC’ ವಿದ್ಯಾರ್ಥಿಗಳ ಗಮನಕ್ಕೆ : ಪರೀಕ್ಷಾ ಕೇಂದ್ರ ಬದಲಾವಣೆ ಕುರಿತಂತೆ ಇಲ್ಲಿದೆ ಮಹತ್ವದ ಮಾಹಿತಿ

ಬೆಂಗಳೂರು : ಎಸ್ಎಸ್ಎಲ್ ಸಿ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಬಹುಮುಖ್ಯ ಮಾಹಿತಿ ನೀಡಿದ್ದು, ಲಾಕ್ ಡೌನ್ ಹಿನ್ನೆಲೆಯಲ್ಲಿ ಬೇರೆ ಪ್ರದೇಶಗಳಿಗೆ ತೆರಳಿರುವ ವಿದ್ಯಾರ್ಥಿಗಳಿಗೆ ತಾವು ನೆಲೆಸಿರುವಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದ್ದು, ಮೇ. 29 ರೊಳಗೆ ಪರಿಕ್ಷಾ ಕೇಂದ್ರ ಬದಲಾವಣೆ ಮಾಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ, ಬೇರೆ ಪ್ರದೇಶಗಳಿಗೆ ತೆರಳಿರುವ ವಿದ್ಯಾರ್ಥಿಗಳಿಗೆ ತಾವು ನೆಲೆಸಿರುವಲ್ಲಿಯೇ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿದ್ದು, ಮೇ. 29 ರೊಳಗೆ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಳ್ಳಬೇಕು. ಇಲ್ಲವಾದರೆ ಈಗಾಗಲೇ ನಿಗದಿಯಾಗಿರುವ ಮೂಲ ಪರೀಕ್ಷಾ ಕೇಂದ್ರದಲ್ಲಿಯೇ ಪರೀಕ್ಷೆಗೆ ಹಾಜರಾಗಬೇಕು. ಒಂದೇ ತಾಲೂಕಿನ ಒಳಗಡೆ ಇದ್ದರೆ ಬದಲಾವಣೆ ಮಾಡಿಕೊಳ್ಳಲು ಅವಕಾಶವಿಲ್ಲ ಎಂದು ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಸ್ಪಷ್ಪಪಡಿಸಿದೆ.

ಜೂ. 25 ರಂದು ಎಸ್ಎಸ್ಎಲ್ ಸಿ ಪರೀಕ್ಷೆ ಆರಂಭವಾಗಲಿದ್ದು, ಮೇ. 29 ರೊಳಗೆ ಪರೀಕ್ಷಾ ಕೇಂದ್ರ ಬದಲಾವಣೆ ಮಾಡಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂ.080-23310075 ಅಥವಾ 9739131393 ಸಂಖ್ಯೆಗೆ ಸಂಪರ್ಕಿಸಬಹುದು ಎಂದು ಮಾಹಿತಿ ನೀಡಿದೆ.