ಬೆಂಗಳೂರು: ರಾಜ್ಯದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ಪರೀಕ್ಷೆ ಸಿದ್ಧತೆಗಾಗಿ ಮಾದರಿ ಪ್ರಶ್ನೆಪತ್ರಿಕೆ ಪ್ರಕಟಿಸಿದೆ.
ಎಸ್ ಎಸ್ ಎಲ್ ಸಿ ಪರೀಕ್ಷೆಯ ಸಿದ್ಧತೆಗಾಗಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪ್ರಕಟಿಸಲಾಗಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ವತಿಯಿಂದ 2025ರ ಎಸ್ಎಸ್ಎಲ್ಸಿ ಪರೀಕ್ಷೆ-1ರ ಸಿದ್ಧತೆಗಾಗಿ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಮಂಡಳಿಯ ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಲಾಗಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಪ್ರೌಢ ಶಿಕ್ಷಣ ನಿರ್ಣಯ ಮಂಡಳಿಯು ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ -2025ರ ಮಾದರಿ ಪ್ರಶ್ನೆಪತ್ರಿಕೆಯನ್ನು ಬಿಡುಗಡೆ ಮಾಡಿದೆ. ಎಲ್ಲ ವಿಷಯಗಳ ಪ್ರಶ್ನೆಪತ್ರಿಕೆಗಳನ್ನು https://kseeb.karnataka. gov.in/sslc2025modelqp/ವೆಬ್‌ಸೈಟ್‌ನಲ್ಲಿ ಮಾಡಿದ್ದು, ಸುಲಭವಾಗಿ ವಿದ್ಯಾರ್ಥಿಗಳು ಡೌನ್‌ಲೋಡ್ ಮಾಡಿಕೊಳ್ಳಬಹುದಾಗಿದೆ. ಇದು ಮಾದರಿ ಪ್ರಶ್ನೆಪತ್ರಿಕೆಯಾಗಿದ್ದು, ಸಂಪೂರ್ಣವಾಗಿ ವಾರ್ಷಿಕ ಪರೀಕ್ಷೆಯ ಮಾದರಿಯಲ್ಲೇ ಇದೆ. ಇದರಿಂದ ಪ್ರಶ್ನೆಗಳು ಯಾವ ರೀತಿಯಲ್ಲಿರಲಿವೆ ಎಂಬುದನ್ನು ವಿದ್ಯಾರ್ಥಿಗಳು ನೋಡಿ ಕೊಂಡು ಪರೀಕ್ಷೆಗೆ ಅಭ್ಯಾಸ ನಡೆಸಬಹುದಾಗಿದೆ.