ಬೆಂಗಳೂರು: ಕಳೆದ ಜೂನ್ ನಲ್ಲಿ ನಡೆದಿದ್ದಂತ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ( SSLC Supplementary Exam Result 2022 ) ನಾಳೆ ಪ್ರಕಟಗೊಳ್ಳಲಿದೆ. ವಿದ್ಯಾರ್ಥಿಗಳಿಗೆ ನಾಳೆ ಮಧ್ಯಾಹ್ನ 12 ಗಂಟೆಗೆ ಅಧಿಕೃತ ವೆಬ್ ಸೈಟ್ https://karresults.nic.in/ ನಲ್ಲಿ ಫಲಿತಾಂಶ ಲಭ್ಯ ವೀಕ್ಷಿಸಬಹುದಾಗಿದೆ.
‘500 ರೂಪಾಯಿ ನೋಟಿ’ನ ಮೇಲೆ ಈ ಗುರುತು ಇದ್ಯಾ? ಎಚ್ಚರ, ಅದು ‘ನಕಲಿ ನೋಟು’, ಪರಿಶೀಲಿಸದೇ ಮೋಸ ಹೋಗ್ಬೇಡಿ
ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ( Minister BC Nagesh ) ಮಾಹಿತಿ ಬಿಡುಗಡೆ ಮಾಡಿದ್ದು, 2022ರ ಜೂನ್ 27ರಿಂದ ಜುಲೈ 4ರ ವರೆಗೆ ನಡೆದ ಎಸ್ಎಸ್ಎಲ್ಸಿ ಪೂರಕ ಪರೀಕ್ಷೆ ಫಲಿತಾಂಶ ನಾಳೆ ಪ್ರಕಟಲಾಗಲಿದೆ. ಪೂರಕ ಪರೀಕ್ಷೆಯಲ್ಲಿ 37,479 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ ಎಂದು ತಿಳಿಸಿದ್ದಾರೆ.
BREAKING NEWS: ಉಡುಪಿಯಲ್ಲಿ ಟೋಲ್ ಕಂಬಕ್ಕೆ ಆ್ಯಂಬುಲೆನ್ಸ್ ಡಿಕ್ಕಿಯಾಗಿ ಭೀಕರ ಅಪಘಾತ: ಮೂವರು ಸಾವು, ಓರ್ವನಿಗೆ ಗಾಯ
ಪೂರಕ ಪರೀಕ್ಷೆಗೆ 94,669 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಉತ್ತೀರ್ಣ ಪ್ರಮಾಣ ಶೇ.39.59 ಇದೆ ಎಂದು ಸಚಿವರು ಮಾಹಿತಿ ನೀಡಿದರು.
ನಾಳೆ ಮಧ್ಯಾಹ್ನ 12 ಗಂಟೆ ನಂತರ ಈ ವೆಬ್ಸೈಟ್ನಲ್ಲಿ https://karresults.nic.in/ ಫಲಿತಾಂಶ ವೀಕ್ಷಿಸಬಹುದು. ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿರುವ ಫೋನ್ ನಂಬರ್ಗಳಿಗೆ ಎಸ್ಎಂಎಸ್ ಮೂಲಕವೂ ಫಲಿತಾಂಶ ಕಳುಹಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ವರದಿ : ವಸಂತ ಬಿ ಈಶ್ವರಗೆರೆ
BIGG NEWS: ಶೀಘ್ರವೇ ಸಿಎಂ ಬೊಮ್ಮಾಯಿ ಸಚಿವ ಸಂಪುಟ ಮಿನಿ ವಿಸ್ತರಣೆ: ಯಾರೆಲ್ಲಾ ಸಂಪುಟಕ್ಕೆ ಸೇರ್ಪಡೆ ಗೊತ್ತಾ.?