`SSLC’ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ – Kannada News Now


State

`SSLC’ ಪೂರಕ ಪರೀಕ್ಷೆ : ವಿದ್ಯಾರ್ಥಿಗಳಿಗೆ ಇಲ್ಲಿದೆ ಮುಖ್ಯ ಮಾಹಿತಿ

ಬೆಂಗಳೂರು : ಎಸ್‌ಎಸ್‌ಎಲ್ ಸಿ ಪೂರಕ ಪರೀಕ್ಷೆಗೆ ಹಾಜರಾಗುತ್ತಿರುವ ವಿದ್ಯಾರ್ಥಿಗಳಿಗೆ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮಹತ್ವದ ಮಾಹಿತಿಯೊಂದನ್ನು ನೀಡಿದ್ದು, ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದಲ್ಲಿ ಅಪ್ ಲೋಡ್ ಮಾಡಲಾಗಿದ್ದು, ಆಯಾ ಶಾಲೆಗೆ ಸಂಬಂಧಪಟ್ಟ ಅಭ್ಯರ್ಥಿಗಳ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ನಲ್ಲಿ ಡೌನ್ ಲೋಡ್ ಮಾಡಿಕೊಳ್ಳಲು ಸೂಚನೆ ನೀಡಿದೆ.

ಶಾಲೆಯಿಂದ ಕಳುಹಿಸಿದ CCERR/CCEPR/NSR/NSPR ವಿದ್ಯಾರ್ಥಿಗಳ ಸಂಖ್ಯೆಗೆ ಅನುಸಾರ ಶಾಲೆಗೆ ಸಂಬಂಧಪಟ್ಟಂತೆ ಮಂಡಳಿ ಜಾಲತಾಣದ ಶಾಲಾ ಲಾಗಿನ್ ನಲ್ಲಿ ಮುದ್ರಿಸಕೊಂಡಿರುವ ಪ್ರವೇಶ ಪತ್ರಗಳ ಸಂಖ್ಯೆಗಳು ಸರಿ ಹೊಂದುತ್ತಿವೆಯೇ?ಒಒಂದು ವೇಳೆ ಸರಿ ಹೊಂದದಿದ್ದಲ್ಲಿ ಯಾವ ಅಭ್ಯರ್ಥಿಯ ಪ್ರವೇಶ ಪತ್ರ ಬಂದಿಲ್ಲವೆಂಬುದನ್ನು ಖಚಿತ ಪಡಿಸಿಕೊಂಡು ಅಗತ್ಯ ಕ್ರಮಕ್ಕಾಗಿ ಸಮರ್ಥನೆಯೊಂದಿಗೆ/ದಾಖಲೆಗಳನ್ನು ದಿನಾಂಕ 16-09-2020 ರೊಳಗೆ ಕಳುಹಿಸಲು ಸೂಚನೆ ನೀಡಿದೆ.

ಇನ್ನು ಪ್ರವೇಶ ಪತ್ರದಲ್ಲಿ ಹಾಗೂ ಕೇಂದ್ರ ನಾಮಪಟ್ಟಿಯಲ್ಲಿ ಭಾವಚಿತ್ರ ಇಲ್ಲದೇ ಇರುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದಿಲ್ಲ. ಇದರಿಂದ ವಿದ್ಯಾರ್ಥಿಗೆ ಆಗುವ ತೊಂದರೆಗೆ ಸಂಬಂಧಿಸಿದ ಶಾಲಾ ಮುಖ್ಯಸ್ಥರೇ ಜವಾಬ್ದಾರರಾಗಿದ್ದು, ಮಂಡಳಿಯು ಇದರ ಜವಾಬ್ದಾರಿ ಹೊಂದುವುದಿಲ್ಲ ಎಂದು ಸ್ಪಷ್ಟಪಡಿಸಿದೆ.