ಬಳ್ಳಾರಿ : ನ.20ರಂದು ಎಸ್ಟಿ ಮೋರ್ಚಾದ ರಾಜ್ಯ ಮಟ್ಟದ ಸಮಾವೇಶವನ್ನು ಬಳ್ಳಾರಿಯಲ್ಲಿ ಅದ್ಧೂರಿಯಾಗಿ ನಡೆಸಲು ನಿರ್ಧರಿಸಲಾಗಿದೆ ಎಂದು ಸಚಿವ ಶ್ರೀರಾಮುಲು ಹೇಳಿದರು.
ಕಲ್ಯಾಣ ಕರ್ನಾಟಕದಲ್ಲಿ ಎಸ್ಟಿ ಸಮುದಾಯದ ಜನರು ಹೆಚ್ಚಿನ ಸಂಖ್ಯೆಯಲ್ಲಿದ್ದು ಹೀಗಾಗಿ ಬಳ್ಳಾರಿಯಲ್ಲಿ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ. ಸಮಾವೇಶದಿಂದ ರಾಜಕೀಯವಾಗಿ ಪಕ್ಷಕ್ಕೆ ಲಾಭವಾಗಲಿದೆ. ಮುಖ್ಯಮಂತ್ರಿ ಸೇರಿದಂತೆ ರಾಷ್ಟ್ರೀಯ ನಾಯಕರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಚಿವ ಬಿ.ಶ್ರೀರಾಮುಲು ತಿಳಿಸಿದರು.
ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಮುದಾಯದ ಮೀಸಲಾತಿ ಹೆಚ್ಚಿಸುವ ನಿರ್ಧಾರವನ್ನು ಕೈಗೊಂಡಿರುವ ರಾಜ್ಯ ಬಿಜೆಪಿ ಸರ್ಕಾರ ಅದರ ರಾಜಕೀಯ ಲಾಭ ಪಡೆಯಲು ಮುಂದಾಗಿದ್ದು, ಈ ನಿಟ್ಟಿನಲ್ಲಿ ಬಳ್ಳಾರಿಯಲ್ಲಿ ಬೃಹತ್ ಸಮಾವೇಶಕ್ಕೆ ಸರ್ಕಾರ ಸಿದ್ದತೆ ನಡೆಸಿದೆ. ಮೀಸಲಾತಿ ಹೆಚ್ಚಳಕ್ಕೆ ತೀರ್ಮಾನ ಕೈಗೊಂಡ ಸರ್ಕಾರಕ್ಕೆ ನಿರ್ಧಾರಕ್ಕೆ ರಾಜ್ಯದಲ್ಲಿ ಭಾರೀ ಮೆಚ್ಚುಗೆದಾಯಕ ಮಾತುಗಳು ಕೇಳಿಬರುತ್ತಿದೆ.
ರಾಷ್ಟ್ರಗೀತೆಯ ವೇಳೆ ಭಾವುಕರಾದ ರೋಹಿತ್ ಶರ್ಮಾ, ಕಣ್ಣೀರು, ವಿಡಿಯೋ ವೈರಲ್ | Rohit Sharma Emotional Ind Vs Pak
‘ಕುಕ್ಕೆ ಸುಬ್ರಹ್ಮಣ್ಯ’ಕ್ಕೆ ತೆರಳುವ ಭಕ್ತರ ಗಮನಕ್ಕೆ: ಅ.25ರಂದು ಯಾವುದೇ ಸೇವೆಯಿಲ್ಲ, ದೇವರ ದರ್ಶನಕ್ಕೆ ಮಾತ್ರ ಅವಕಾಶ
BREAKING NEWS : ಕೊಡಗಿನಲ್ಲಿ 700 ವರ್ಷದ ಹಳೆಯ ಪುರಾತನ ಶಿವನ ದೇವಾಲಯ ಪತ್ತೆ