ವಿಜಯನಗರ : ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ( ST Reservation )ಬೆಂಗಳೂರಿನಲ್ಲಿ ಅ.8 ರಂದು ಬಿಜೆಪಿ ಸರ್ವಪಕ್ಷಗಳ ಸಭೆ ಕರೆಯಲಾಗಿದೆ.
ಮೀಸಲಾತಿ ವಿಚಾರವನ್ನು ಇತ್ಯರ್ಥಪಡಿಸಲು ಸಿಎಂ ಬಸವರಾಜ ಬೊಮ್ಮಾಯಿ( CM Basavaraj Bommai ) ನೇತೃತ್ವದ ಸರ್ಕಾರ ಅಕ್ಟೋಬರ್ 8 ರಂದು ಸಭೆ ಕರೆದಿದೆ.
ವಿಜಯನಗರ ಜಿಲ್ಲೆ ಕೂಡ್ಲಿಗಿಯಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಾರಿಗೆ ಸಚಿವ ಶ್ರೀರಾಮುಲು ( Sriramulu) ಸಭೆಯಲ್ಲಿ ಮೀಸಲಾತಿ ಬಗ್ಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುತ್ತದೆ, ಮೀಸಲಾತಿ ವಿಚಾರದಲ್ಲಿ ನಮ್ಮ ಸರ್ಕಾರ ಬದ್ದವಾಗಿದೆ. ಕೊಟ್ಟ ಮಾತನ್ನು ಸರ್ಕಾರ ಉಳಿಸಿಕೊಳ್ಳಲಿದೆ. ಎಸ್ ಟಿ ಮೀಸಲಾತಿ ವಿಚಾರದಲ್ಲಿ ಯಾರೂ ರಾಜಕೀಯ ಮಾಡಬಾರದು ಎಂದು ಸಾರಿಗೆ ಸಚಿವ ಶ್ರೀರಾಮುಲು ಹೇಳಿದರು.
ಎಸ್ ಟಿ ಮೀಸಲಾತಿ ಹೆಚ್ಚಿಸುವಂತೆ ಸ್ವಾಮೀಜಿ ಧರಣಿ ಮಾಡುತ್ತಿದ್ದಾರೆ. ಬಿಜೆಪಿ ಸರ್ಕಾರ ಬಂದರೆ ಮೀಸಲಾತಿ ಕೊಡಿಸುವುದಾಗಿ ಮಾತು ನೀಡಿದ್ದೆ, ಎಸ್ ಟಿ ಸಮುದಾಯಕ್ಕೆ ಅವಮಾನವಾದರೆ ನಾನು ರಾಜೀನಾಮೆ ಕೊಡಲು ಸಿದ್ದನಿದ್ದೇನೆ, ಮೀಸಲಾತಿ ವಿಚಾರದಲ್ಲಿ ಕೊಟ್ಟ ಮಾತನ್ನು ನಾವು ತಪ್ಪೋದಿಲ್ಲ ಎಂದು ಸಚಿವ ಶ್ರೀರಾಮುಲು ಹೇಳಿದರು.
Crime News: ಅಪರಾಧ ಕೃತ್ಯದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿದ್ದ ಈತ ಸಿಕ್ಕಿದ್ದೇಗೆ ಗೊತ್ತಾ.?
ದೇವೇಗೌಡರನ್ನು ಪ್ರಧಾನಿ ಕುರ್ಚಿಯಿಂದ ಕೆಳಗಿಳಿಸಿದ್ದು ಕಾಂಗ್ರೆಸ್ : ಸಚಿವ ಡಾ.ಕೆ ಸುಧಾಕರ್