ಹಾವೇರಿ: ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿಯವರು ಇಂದು ಚುನಾನಣಾ ಪ್ರಚಾರದ ನಡುವೆಯೇ ದೇವಸ್ಥಾನ ಹಾಗೂ ಮಠಗಳಿಗೆ ಭೇಟಿ ನೀಡಿ ಆಶೀರ್ವಾದ ಪಡೆದುಕೊಂಡರು.
ವಾಲ್ಮೀಕಿ ಗುರುಪೀಠದಲ್ಲಿ ಮಾತನಾಡಿದ ಅವರು, ವಾಲ್ಮೀಕಿ ಸ್ವಾಮೀಜಿಗಳ ಹೋರಾಟದ ಫಲವಾಗಿ ಎಸ್ಟಿ ಮೀಸಲಾತಿ ಹೆಚ್ಚಳವಾಗಿದೆ ಎಂದು ಹೇಳಿದರು.
ಬೆಳಿಗ್ಗೆ ಟೆಂಪಲ್ ರನ್ ಆರಂಭಿಸಿದ ಅವರು ಹುಬ್ಬಳ್ಳಿಯ ಶ್ರೀ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ನಂತರ ಹುಬ್ಬಳ್ಳಿಯ ಗಬ್ಬೂರು ಕ್ರಾಸ್ ಬಳಿ ಇರುವ ಪಾರ್ಶ್ವ ಪದ್ಮಾಲಯ ದೇವಾಲಯಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು.
ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ತಡಸ್ ಕ್ರಾಸ್ ಬಳಿ ಇರುವ ಗಾಯತ್ರಿ ತಪೋ ಭೂಮಿಗೆ ಭೇಟಿ ನೀಡಿದರು. ಅಲ್ಲಿಂದ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ರಾಜನಹಳ್ಳಿಯ ಶ್ರೀ ವಾಲ್ಮೀಕಿ ಗುರು ಪೀಠಕ್ಕೆ ಭೇಟಿ ನೀಡಿ, ಪೀಠದ ಜಗದ್ಗುರುಗಳಾದ ಶ್ರೀ ಪ್ರಸನ್ನಾನಂದ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ನನ್ನ ಮತ್ತು ಗುರುಗಳ ಜೊತೆ ಯೋಗಾ ಯೋಗದ ಸಂಬಂಧ ಇದೆ. ನನಗೆ ಶ್ರೀ ಮಠದೊಂದಿಗೆ ಅವಿನಾಭಾವ ಸಂಬಂಧ ಇದೆ. ಗುರುಗಳಿಗೆ ನನ್ನ ಮೇಲೆ ಬಹಳಷ್ಟು ನಂಬಿಕೆ ಇದೆ, ಗುರುಗಳ ಹೋರಾಟದ ಫಲದಿಂದ ವಾಲ್ಮೀಕಿ ಸಮಾಜದ ಮೀಸಲಾತಿ ಹೆಚ್ಚಳವಾಗಿದ್ದು ಸಮಾಜಕ್ಕೆ ನ್ಯಾಯ ಸಿಕ್ಕಿದೆ. ಮೀಸಲಾತಿ ವಿಚಾರ ವಿಧಾನಸಭೆಯಲ್ಲಿ ಮಂಡನೆ ಆಗಿದ್ದು, ಇದರಿಂದ ಸಮಾಜಕ್ಕೆ ಬಹಳಷ್ಟು ಕೊಡುಗೆ ಸಿಕ್ಕಿದೆ. ಯಾರೂ ಮೀಸಲಾತಿ ವಿಚಾರ ಸ್ಟೇ ತರಬಾರದು ಎಂದು ರಾಜ್ಯಪಾಲರಿಂದ ಸುಗ್ರೀವಾಜ್ಞೆ ಹೊರಡಿಸಿದೆ. ನನಗೆ ಇಂದು ಬಹಳಷ್ಟು ಸಮಾಧಾನ ವಾಗಿದ್ದು, ಸಮಾಜದ ಪ್ರೀತಿ ಅಭಿಮಾನ ವಿಶ್ವಾಸ ಸಿಕ್ಕಿದ್ದು ನನ್ನ ಪುಣ್ಯ ಎಂದು ಹೇಳಿದರು.
ಈ ಸಂಧರ್ಭದಲ್ಲಿ ಶಾಸಕರಾದ ಬಿ.ಪಿ.ಹರೀಶ, ಮಾಜಿ ಶಾಸಕರಾದ ಅರುಣಕುಮಾರ ಪೂಜಾರ ಸೇರಿದಂತೆ ವಾಲ್ಮೀಕಿ ಸಮಾಜದ ಹಲವಾರು ಪ್ರಮುಖರು ಉಪಸ್ಥಿತರಿದ್ದರು.
ನಂತರ ಬೊಮ್ಮಾಯಿಯವರು ಹಾವೇರಿ ಜಿಲ್ಲೆಯ ರಾಣೆಬೆನ್ನೂರ ತಾಲೂಕಿನ ನರಸೀಪುರ, ಚೌಡಯ್ಯದಾನಪುರದ ನಿಜಶರಣ ಶ್ರೀ ಅಂಬಿಗರ ಚೌಡಯ್ಯನ ಗುರು ಪೀಠಕ್ಕೆ ಭೇಟಿ ನೀಡಿ, ಪೀಠದ ಜಗದ್ಗುರುಗಳಾದ ಶ್ರೀ ಶಾಂತಭೀಷ್ಮ ಚೌಡಯ್ಯ ಮಹಾಸ್ವಾಮಿಗಳ ಆಶೀರ್ವಾದ ಪಡೆದುಕೊಂಡರು.
ರಾಜ್ಯ ಸರ್ಕಾರ ತನ್ನ ಖಜಾನೆಯಿಂದ ಬರ ಪರಿಹಾರ ನೀಡಿ ಗಂಡಸ್ತನ ತೋರಿಸಲಿ- ಬೊಮ್ಮಾಯಿ