ಬೆಂಗಳೂರು : ರಾಜ್ಯಸಭೆಯ ಚುನಾವಣೆಯಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಶಾಸಕ ಎಸ್ ಟಿ ಸೋಮಶೇಖರ್ ಅಡ್ಡ ಮತದಾನದ ಮೂಲಕ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಕ್ಕೆ ಇಂದು ಸಂಜೆ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ಅಲ್ಲದೆ ಯಲ್ಲಾಪುರ ಕ್ಷೇತ್ರದ ಬಿಜೆಪಿಯ ಶಾಸಕ ಶಿವರಾಮ್ ಹೆಬ್ಬಾರ್ ಅವರು ಕೂಡ ಇಂದು ಸಂಜೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ಇಂದು ಸಂಜೆ ಎಸ್ ಟಿ ಸೋಮಶೇಖರ್ ಹಾಗೂ ಶಿವರಾಮ್ ಹೆಬ್ಬಾರ್ ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.ರಾಜ್ಯಸಭೆಯ ಚುನಾವಣೆಯಲ್ಲಿ ಕಾಂಗ್ರೆಸ್ ಪರ ಅಡ್ಡ ಮತದಾನ ಮಾಡಿರುವ ಹಿನ್ನೆಲೆಯಲ್ಲಿ ಈ ಶಾಸಕರು ರಾಜೀನಾಮೆ ನೀಡುವ ಸಾಧ್ಯತೆ ಇದೆ ಎಂದು ಬಲ್ಲಮೂಲಗಳಿಂದ ತಿಳಿದು ಬಂದಿದೆ.
ಮುಂದುವರಿದ ಟೆಕ್ ಕಂಪನಿಗಳ ಉದ್ಯೋಗ ಕಡಿತ: 1500 ಉದ್ಯೋಗಿಗಳನ್ನು ವಜಾಗೊಳಿಸಿದ ‘Expedia’
ಅಲ್ಲದೆ ಇದೇ ವೇಳೆ ವಿರೋಧ ಪಕ್ಷದ ಮುಖ್ಯ ಸಚೇತಕ ದಡ್ಡನಗೌಡ ಪಾಟೀಲ್ ಎಸ್ ಟಿ ಸೋಮಶೇಖರ್ ಗೆ ವಿಪ್ ನೋಟಿಸ್ ನೀಡುವ ವೇಳೆ ಅವರಿಗೆ ಸಿಗದೇ ಎಸ್ಟಿ ಸೋಮಶೇಖರ್ ಮತ ಹಾಕಿ ತೆರಳಿದ್ದಾರೆ. ಅಲ್ಲದೆ ಶಿವರಾಮ್ ಹೆಬ್ಬಾರ್ ಅವರ ಕೋಣೆಯ ಬಾಗಿಲಿಗೂ ದೊಡ್ಡನಗೌಡ ಪಾಟೀಲ್ ವಿಪ್ ನೋಟಿಸ್ ಅಂಟಿಸಿದ್ದಾರೆ ಎಂದು ತಿಳಿದುಬಂದಿದೆ. ಇಂದು ಸಂಜೆಯ ವೇಳೆಗೆ ಈ ಇಬ್ಬರು ಶಾಸಕರ ವಿರುದ್ಧ ಬಿಜೆಪಿ ಯಾವ ರೀತಿ ಕ್ರಮ ತೆಗೆದುಕೊಳ್ಳುತ್ತದೆ ಎಂದು ಕಾದು ನೋಡಬೇಕಾಗಿದೆ.
‘ಅಪ್ರಾಪ್ತೆ’ ಜೊತೆ ದೈಹಿಕ ಸಂಪರ್ಕ : ಯುವಕನ ಮೇಲಿನ ಪ್ರಕರಣವನ್ನು ರದ್ದುಗೊಳಿಸಿ ‘ಹೈಕೋರ್ಟ್’ ಆದೇಶ