ಬೆಂಗಳೂರು: ಕನ್ನಡ ಚಿತ್ರರಂಗದಲ್ಲಿ ತನ್ನದೇ ಆದಂತ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದಂತ ರಾಜ್ಯ, ರಾಷ್ಟ್ರ ಪ್ರಶಸ್ತಿ ವಿಜೇತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಕೋಡಳ್ಳಿ ಶಿವರಾಮ್ ಇನ್ನಿಲ್ಲವಾಗಿದ್ದಾರೆ.
ಈ ಬಗ್ಗೆ ಕುಟುಂಬಸ್ಥರಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ಕಳೆದ ರಾತ್ರಿ ರಾಷ್ಟ್ರಪ್ರಶಸ್ತಿ, ರಾಜ್ಯಪ್ರಶಸ್ತಿ ವಿಜೇತ ಕನ್ನಡದ ಚಲನಚಿತ್ರ ನಿರ್ದೇಶಕ, ನಿರ್ಮಾಪಕ ಕೋಡಳ್ಳಿ ಶಿವರಾಮ್ ಅವರು ವಿಧಿವಶರಾಗಿದ್ದಾರೆ ಎಂಬುದಾಗಿ ತಿಳಿಸಿದ್ದಾರೆ.
ಅಂದಹಾಗೇ ಕೋಡಳ್ಳಿ ಶಿವರಾಮ್ ಅವರು ಕನ್ನಡದ ಚಲನಚಿತ್ರಗಳಾದಂತ ಗ್ರಹಣ, ಬೆಳ್ಳಿ ಬೆಳಕು ಸೇರಿದಂತೆ ಇತರೆ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸಿದ್ದರು. ಇಂತಹ ಸ್ಯಾಂಡಲ್ ವುಡ್ ನಿರ್ದೇಶಕ, ನಿರ್ಮಾಪಕ ನಿಧನರಾಗುವ ಮೂಲಕ ಇನ್ನಿಲ್ಲವಾಗಿದ್ದಾರೆ.
ಕಳೆದ ರಾತ್ರಿ ನಿಧನರಾದಂತ ಸ್ಯಾಂಡಲ್ ವುಡ್ ನಿರ್ದೇಶಕ, ನಿರ್ಮಾಪಕ ಕೋಡಳ್ಳಿ ಶಿವರಾಮ್ ಅವರ ಅಂತ್ಯಕ್ರಿಯೆಯನ್ನು ಇಂದು ಕುಟುಂಬಸ್ಥರು ನೆರೆವೇರಿಸಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.