ಗದಗ: ಜಿಲ್ಲೆಯ ಲಕ್ಕುಂಡಿಯಲ್ಲಿರುವಂತ 13 ದೇವಸ್ಥಾನ, ಮೂರು ಬಾವಿಗಳನ್ನು ಸಂರಕ್ಷಿತ ಸ್ಮಾರಕಗಳಾಗಿ ಪುರಾತತ್ವ ಇಲಾಖೆಯು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.
ಇಂದು ಲಕ್ಕುಂಡಿ ಅಭಿವೃದ್ಧಿ ಪ್ರಾಧಿಕಾರ, ಉತ್ಖನನ ಪ್ರಗತಿ ಬಗ್ಗೆ ಸಚಿವ ಹೆಚ್.ಕೆ ಪಾಟೀಲ್ ಅವರು ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು. ಈ ಸಭೆಯಲ್ಲಿ ಪ್ರಜ್ವಲ್ ರಿತ್ತಿಗೆ ಸಿಕ್ಕ ನಿಧಿ ಬಗ್ಗೆಯೂ ವಿಶೇಷವಾಗಿ ಚರ್ಚೆ ನಡೆಸಲಾಯಿತು. ಆ ಕುಟುಂಬಕ್ಕೆ ಏನೆಲ್ಲಾ ಸಹಾಯ ಮಾಡಬೇಕೆಂದು ಚರ್ಚೆ ನಡೆಸಲಾಗಿದೆ.
ಲಕ್ಕುಂಡಿಯಲ್ಲಿನ ಬಯಲು ವಸ್ತು ಸಂಗ್ರಹಾಲಯ ಅಭಿವೃದ್ಧಿಗೆ 165 ಲಕ್ಷ ಬಿಡುಗಡೆ ಮಾಡಲಾಗಿದೆ. ಮೂರು ಎಕರೆ ಭೂಮಿ ಪಡೆದುಕೊಳ್ಳಲು ನಿರ್ಧಾರ ಮಾಡಲಾಗಿದೆ ಎಂಬುದಾಗಿ ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದರು.
13 ದೇವಸ್ಥಾನ, 3 ಬಾವಿ ಸಂರಕ್ಷಿತ ಸ್ಮಾರಕಗಳಾಗಿ ರಾಜ್ಯ ಪುರಾತತ್ವ ಇಲಾಖೆ ಘೋಷಿಸಿದೆ. ಇದೇ ಮೊದಲ ಬಾರಿಗೆ ರಾಜ್ಯ ಪುರಾತತ್ವ ಇಲಾಖೆಯಿಂದ ಮೊದಲ ಬಾರಿಗೆ ಘೋಷಣೆ ಮಾಡಿದೆ. ಈಗ ಲಕ್ಕುಂಡಿಯ 8 ದೇವಾಲಯಗಳು ಸಂರಕ್ಷಿತ ದೇಗುಲ ಎಂಬುದಾಗಿ ಘೋಷಿಸಲು ಮನವಿ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಪುರಾತತ್ವ ಇಲಾಖೆಯ ಆಯುಕ್ತರಿಗೆ ಸೂಚಿಸಲಾಗಿದೆ ಎಂದರು.
ಫೆಬ್ರವರಿ ಅಂತ್ಯದಲ್ಲಿ ಈ ಪ್ರಕ್ರಿಯೆ ಪೂರ್ಣವಾಗಲಿದೆ. ತಿಂಗಳೊಳಗೆ ಪ್ರಸ್ತಾವನೆ ಕಳುಹಿಸಲು ಸೂಚನೆ ನೀಡಲಾಗಿದೆ. 6 ದೇವಸ್ಥಾನಗಳ ಅಭಿವೃದ್ಧಿಗೆ 10 ಕೋಟಿ ಬಿಡುಗಡೆ ಮಾಡಲಾಗಿದೆ. ಲಕ್ಕುಂಡಿಯಲ್ಲಿ ಹುದುಗಿರುವ ದೇಗುಲಗಳಲ್ಲಿ ಉತ್ಖನನಕ್ಕೂ ಕ್ರಮವಹಿಸಲಾಗುತ್ತಿದೆ. ಮಾರ್ಚ್ ನೊಳಗಾಗಿ ದೇವಸ್ಥಾನಗಳಲ್ಲಿ ಉತ್ಖನನ ಮಾಡಲಾಗುತ್ತದೆ ಎಂದರು.








