ಬೆಂಗಳೂರು : ಲೋಕಸಭಾ ಚುನಾವಣೆಗೆ ಬಿಜೆಪಿ ಈಗಾಗಲೇ ಮೊದಲ ಪಟ್ಟಿ ಬಿಡುಗಡೆ ಮಾಡಿದ್ದೂ, ಆದರೆ ರಾಜ್ಯದ ಅಭ್ಯರ್ಥಿಗಳ ಹೆಸರನ್ನು ಇನ್ನೂ ಘೋಷಿಸಿಲ್ಲ. ಹೀಗಾಗಿ ನಿನ್ನೆ ಬಿಜೆಪಿ ಕಚೇರಿಯಲ್ಲಿ ನಡೆದ ಕೋರ್ ಕಮಿಟಿ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳ ಶಾರ್ಟ್ ಲಿಸ್ಟ್‌ಗೆ ಒಪ್ಪಿಗೆ ಸಿಕ್ಕಿದೆ. ರಾಜ್ಯ ಬಿಜೆಪಿಯಿಂದ 15ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಸಂಭಾವ್ಯರ ಹೆಸರುಗಳು ಫೈನಲ್ ಆಗಿದೆ.
ಬೆಂಗಳೂರಿನ ‘ರಾಮೇಶ್ವರಂ ಕೆಫೆ’ ಬ್ರೂಕ್‌ಫೀಲ್ಡ್ ಔಟ್‌ಲೆಟ್ ಮಾ. 8 ರಂದು ಪುನರಾರಂಭ
ಗೊಂದಲ ಇರುವ ಕ್ಷೇತ್ರಗಳ ಆಕಾಂಕ್ಷಿಗಳ ಬಗ್ಗೆಯೂ ಕೋರ್ ಕಮಿಟಿಯಲ್ಲಿ ಚರ್ಚೆ ನಡೆಸಲಾಗಿದೆ. ಅಭ್ಯರ್ಥಿ ಆಯ್ಕೆ ಕ್ಲಿಷ್ಟಕರ ಇರುವ 10+ ಕ್ಷೇತ್ರಗಳ ಬಗ್ಗೆಯೂ ಚರ್ಚೆ ನಡೆದಿದೆ. ಗೊಂದಲ ಇರುವ ಕ್ಷೇತ್ರಗಳ ಸಂಭಾವ್ಯರ ಪಟ್ಟಿಯನ್ನೂ ಹೈಕಮಾಂಡ್‌ಗೆ ಕಳಿಸಲು ಸಭೆಯಲ್ಲಿ ತೀರ್ಮಾನ ಕೈಗೊಂಡಿದೆ. ಈ ಕ್ಷೇತ್ರಗಳಿಗೆ ಪ್ರತಿ ಕ್ಷೇತ್ರಕ್ಕೂ ಕನಿಷ್ಠ 3 ಹೆಸರುಗಳಿರುವ ಪಟ್ಟಿಯನ್ನು ಕಳಿಸಲು ನಿರ್ಧಾರ ಮಾಡಲಾಗಿದೆ.
ಇಂದಿನಿಂದ ಎರಡು ದಿನ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ‘ಜೆ.ಪಿ.ನಡ್ಡಾ’ ರಾಜ್ಯ ಪ್ರವಾಸ: ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ
ಗೊಂದಲ ಇಲ್ಲದ, ಗೆಲ್ಲುವ ಗ್ಯಾರಂಟಿ ಇರುವ, ಸರ್ವ ಸಮ್ಮತ ಸಂಭಾವ್ಯರ 15+ ಹೆಸರುಗಳಿಗೆ ಕೋರ್ ಕಮಿಟಿ ಸಹಮತ ಸೂಚಿಸಿದೆ. ಒಂದೆರಡು ದಿನಗಳಲ್ಲಿ ಹೈಕಮಾಂಡ್‌ಗೆ 15+ ಶಾರ್ಟ್ ಲಿಸ್ಟ್ ಹೆಸರುಗಳ ರವಾನೆ ಆಗಲಿದೆ. ಬಿಜೆಪಿ ಹೈಕಮಾಂಡ್ ರಿಲೀಸ್ ಮಾಡುವ ಎರಡನೇ ಪಟ್ಟಿಯಲ್ಲಿ ಕರ್ನಾಟಕ ಕ್ಷೇತ್ರಗಳಿಗೂ ಅಭ್ಯರ್ಥಿ ಘೋಷಣೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದಿನ ಕೋರ್ ಕಮಿಟಿ ಸಭೆಯಲ್ಲಿ ರಾಜ್ಯ ನಾಯಕರು ಸಂಭಾವ್ಯರ ರಾಜ್ಯ ಪಟ್ಟಿ ಫೈನಲ್ ಮಾಡಿದ್ದಾರೆ.
ಬೆಂಗಳೂರು : ನೇರಳೆ ಮಾರ್ಗದಲ್ಲಿ ರೈಲುಗಳ ‘ಸುಗಮ’ ಸಂಚಾರಕ್ಕೆ ‘ವೈಟ್ ಫೀಲ್ಡ್’ ಬಳಿ ಮೆಟ್ರೋ ವಿಸ್ತರಣೆ
ಹಾಲಿ ಸಂಸದರ ಹೆಸರು ಒಳಗೊಂಡಂತೆ 3 ರಿಂದ 5 ಸಂಭಾವ್ಯ ಅಭ್ಯರ್ಥಿಗಳ ಹೆಸರುಗಳು ಇದೆ ಎನ್ನಲಾಗಿದೆ. ಮೈತ್ರಿ ಸೀಟು ಹಂಚಿಕೆ ಬಗ್ಗೆಯೂ ಇಂದಿನ ಸಭೆಯಲ್ಲಿ ಚರ್ಚಿಸಲಾಯಿತು. ಜೆಡಿಎಸ್‌ಗೆ ಎಷ್ಟು ಮತ್ತು ಯಾವ ಕ್ಷೇತ್ರ ಬಿಟ್ಟು ಕೊಡಬೇಕೆಂಬ ಬಗ್ಗೆ ಹೈಕಮಾಂಡ್ ನಿರ್ಧಾರಕ್ಕೆ ರಾಜ್ಯ ನಾಯಕರು ಬಿಟ್ಟಿದ್ದಾರೆ. ಬಿಜೆಪಿ ಅಭ್ಯರ್ಥಿಗಳನ್ನು ಫೈನಲ್ ಮಾಡಿದ ನಂತರ ಮೈತ್ರಿ ಸೀಟು ಹಂಚಿಕೆ ಬಗ್ಗೆ ಬಿಜೆಪಿ ಹೈಕಮಾಂಡ್ ತೀರ್ಮಾನಿಸಲಿದೆ.
ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ರಾಜ್ಯಾಧ್ಯಕ್ಷರಾದ ಶ್ರೀ @BYVijayendra ಅವರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಸಭೆ ನಡೆಯಿತು.
ಸಭೆಯಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ @BSYBJP, ಶ್ರೀ @BSBommai, ಶ್ರೀ @DVSadanandGowda, ಲೋಕಸಭಾ ಚುನಾವಣಾ ರಾಜ್ಯ ಉಸ್ತುವಾರಿಗಳಾದ ಶ್ರೀ @AgrawalRMD, ಮಾಜಿ ಉಪ… pic.twitter.com/EpL3rABATQ
— BJP Karnataka (@BJP4Karnataka) March 3, 2024