Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ಸಚಿವ ನಾಗೇಂದ್ರ’ ವಜಾಕ್ಕೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ‘ಪಿ.ರಾಜೀವ್’ ಒತ್ತಾಯ
KARNATAKA

‘ಸಚಿವ ನಾಗೇಂದ್ರ’ ವಜಾಕ್ಕೆ ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ‘ಪಿ.ರಾಜೀವ್’ ಒತ್ತಾಯ

By ವಸಂತ ಬಿ ಈಶ್ವರಗೆರೆ

ಬೆಂಗಳೂರು: ರಾಜ್ಯದ ಸಚಿವ ನಾಗೇಂದ್ರ ಅವರನ್ನು ತಕ್ಷಣ ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಮುಖ್ಯಮಂತ್ರಿಗಳನ್ನು ಆಗ್ರಹಿಸಿದರು.

ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಈ ಸರಕಾರ ಸಂಪೂರ್ಣವಾಗಿ ಭ್ರಷ್ಟಾಚಾರದಲ್ಲಿ ಮುಳುಗಿ ರಾಜ್ಯ ಮತ್ತು ರಾಜ್ಯದ ಜನತೆಯನ್ನು ಬಲಿ ಪಡೆಯುತ್ತಿದೆ. ಕರ್ನಾಟಕ ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಯಾಗಿದ್ದ ಚಂದ್ರಶೇಖರ್ ಅವರು ಈ ಸರಕಾರದ ಭ್ರಷ್ಟಾಚಾರದ ಬಲಿಪಶುವಾಗಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವಿವರಿಸಿದರು.

ತಮ್ಮ ಡೆತ್ ನೋಟ್‍ನಲ್ಲಿ ನಿಗಮದ ಎಂ.ಡಿ. ಪದ್ಮನಾಭ, ಇನ್ನೊಬ್ಬ ಅಧಿಕಾರಿ ಹೆಸರನ್ನು ಬರೆದಿದ್ದು, ಈ ಇಲಾಖೆಯ ಸಚಿವರ ಮೌಖಿಕ ಆದೇಶದ ಪ್ರಕಾರ ಇಷ್ಟೆಲ್ಲ ಮಾಡಬೇಕಾಗಿದೆ ಎಂದು ತಿಳಿಸಿದ್ದಾರೆ. ತಮಗೆ ಬೆದರಿಕೆ ಒಡ್ಡಿ ಹಣವನ್ನು ಅಕ್ರಮವಾಗಿ ವರ್ಗಾವಣೆ ಮಾಡಿಕೊಂಡಿದ್ದಾರೆ. ಪರಿಶಿಷ್ಟ ಪಂಗಡದ ಬಡವರಿಗೆ ಸೇರಬೇಕಿದ್ದ 187 ಕೋಟಿ ರೂಪಾಯಿಗಳನ್ನು ಮಾನ್ಯ ಸಚಿವರು, ನಿಗಮದ ಎಂ.ಡಿ. ಮತ್ತು ಅಧಿಕಾರಿಗಳು ಸೇರಿ ನಕಲಿ ಖಾತೆ ತೆರೆದು ವರ್ಗಾವಣೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾಗಿ ಹೇಳಿದ ಅವರು, ಭ್ರಷ್ಟಾಚಾರಕ್ಕೆ ಇದಕ್ಕಿಂತ ದೊಡ್ಡ ಕನ್ನಡಿ ಬೇರೆ ಬೇಕಿಲ್ಲ ಎಂದು ತಿಳಿಸಿದರು.

ಹಿಂದೆ ಈಶ್ವರಪ್ಪನವರ ಮೇಲೆ ಇದೇರೀತಿಯ ಆರೋಪ ಬಂದಿತ್ತು. ಅಲ್ಲಿ ಮೃತನ ಕೈಬರಹ ಇರಲಿಲ್ಲ. ಇಲ್ಲಿ ನೇಣಿಗೆ ಶರಣಾದ ಚಂದ್ರಶೇಖರ್ ತನ್ನ ಹಸ್ತಾಕ್ಷರದಲ್ಲಿ ಇಲಾಖೆಯ ಸಚಿವರನ್ನು ಉಲ್ಲೇಖಿಸಿದ್ದಾರೆ. ಸಿದ್ದರಾಮಯ್ಯನವರು ಇಷ್ಟರೊಳಗೆ ನಾಗೇಂದ್ರರನ್ನು ಸಂಪುಟದಿಂದ ವಜಾ ಮಾಡಬೇಕಿತ್ತು. ಅವತ್ತು ಕೇವಲ 9 ಕೋಟಿ ರೂ. ಆರೋಪಕ್ಕೆ ಸಂಬಂಧಿಸಿ ಈಶ್ವರಪ್ಪನವರ ರಾಜೀನಾಮೆಗೆ ಗಂಟಲು ಕಿರುಚಿಕೊಂಡ ಸಿದ್ದರಾಮಯ್ಯನವರು ಈಗೇನು ಹೇಳುತ್ತಾರೆ ಎಂದು ಪ್ರಶ್ನಿಸಿದರು.

ಆತ್ಮಹತ್ಯೆಗೆ ದುಷ್ಪ್ರೇರಣೆ ಕೊಟ್ಟ ಸಂಬಂಧ ಸಚಿವರ ಹೆಸರನ್ನು ಎಫ್‍ಐಆರ್ ಅಡಿಯಲ್ಲಿ ಸೇರಿಸಬೇಕು; ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು ಎಂದು ಒತ್ತಾಯಿಸಿದರು. ಕೂಡಲೇ ಮೃತರ ಕುಟುಂಬಕ್ಕೆ ರಕ್ಷಣೆ ಕೊಡಬೇಕು. ಭ್ರಷ್ಟಾಚಾರದಿಂದ ಒಂದು ಬಲಿ ಪಡೆದುದಾಗಿ ಕುಟುಂಬದ ಮುಂದೆ ಇಡೀ ಸಚಿವ ಸಂಪುಟ ಕ್ಷಮೆ ಯಾಚಿಸಬೇಕು ಎಂದು ತಿಳಿಸಿದರು.

ಸಿದ್ದರಾಮಯ್ಯ ಅವರ ನಿಜವಾದ ಮುಖವಾಡ ಬಯಲಾಗಿದೆ. ಈ ಸರಕಾರ ಭ್ರಷ್ಟಾಚಾರದ ಕೂಪದಲ್ಲಿ ಮುಳುಗಿಹೋಗಿದೆ ಎಂದು ಅವರು ಆರೋಪಿಸಿದರು. ಬಿಜೆಪಿ ಇದನ್ನು ತೀಕ್ಷ್ಣವಾಗಿ ಪರಿಗಣಿಸಲಿದೆ. ಸಚಿವರು ರಾಜೀನಾಮೆ ಕೊಡುವವರೆಗೆ ಹೋರಾಟ ಮಾಡಲಿದ್ದೇವೆ. ಈ ಸರಕಾರದ ಭ್ರಷ್ಟಾಚಾರಕ್ಕೆ ಚಂದ್ರಶೇಖರ್ ಅವರು ಮೊದಲ ಬಲಿ ಎಂದು ತಿಳಿಸಿದರು.

ಪ್ರಜ್ವಲ್ ರೇವಣ್ಣ ಪ್ರಕರಣ ಕುರಿತ ಪ್ರಶ್ನೆಗೆ ಉತ್ತರಿಸಿದ ಅವರು, ಕಾನೂನು ತನ್ನದೇ ಆದ ಕ್ರಮವನ್ನು ತೆಗೆದುಕೊಳ್ಳಬೇಕು. ಕಾನೂನಿನ ಮುಂದೆ ಯಾವುದೇ ಪಕ್ಷಪಾತ ಇಲ್ಲ ಎಂದು ಹೇಳಿದರು.

BREAKING : ಮಹಿಳೆ ಕಿಡ್ನಾಪ್ ಕೇಸ್ : ನಿರೀಕ್ಷಣಾ ಜಾಮೀನು ಕೋರಿ ಭವಾನಿ ರೇವಣ್ಣ ಅರ್ಜಿ ಸಲ್ಲಿಕೆ

BIG NEWS: ‘ಮದ್ಯಪ್ರಿಯ’ರಿಗೆ ಜೂನ್ ಮೊದಲ ವಾರ ನಿರಾಸೆ ಕಟ್ಟಿಟ್ಟ ಬುತ್ತಿ: ಬೆಂಗಳೂರಲ್ಲಿ ಒಂದು ಹನಿ ‘ಎಣ್ಣೆ ಸಿಗಲ್ಲ’ | Liquor Sale

Share. Facebook Twitter LinkedIn WhatsApp Email

Related Posts

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

1 Min Read

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

2 Mins Read

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

2 Mins Read
Recent News

ಮೇಕೆದಾಟು ಅಣೆಕಟ್ಟು ಯೋಜನೆ ವಿರೋಧಿಸಿ ಪ್ರಧಾನಿ ಮೋದಿಗೆ ಪತ್ರ ಬರೆದ ತಮಿಳುನಾಡು ಸಿಎಂ ವಿಜಯ್

​’ಭಾರತದ ಆಂತರಿಕ ವಿಚಾರದಲ್ಲಿ ಹಸ್ತಕ್ಷೇಪ ಬೇಡ’: ಚೀನಾ-ಪಾಕಿಸ್ತಾನದ ಜಂಟಿ ಹೇಳಿಕೆಗೆ ಭಾರತದ ತೀಕ್ಷ್ಣ ತಿರುಗೇಟು

ಏರ್ ಇಂಡಿಯಾ AI 171 ಅಪಘಾತ ತನಿಖೆ: ಮಧ್ಯಂತರ ವರದಿಯಿಲ್ಲ, ಜೂನ್ 12ರ ನಂತರವೇ ಅಂತಿಮ ತೀರ್ಪು!

​ಧೂಮಪಾನದಷ್ಟೇ ಅಪಾಯಕಾರಿ ಮಕ್ಕಳ ಮೇಲೆ ಸಾಮಾಜಿಕ ಜಾಲತಾಣಗಳ ಪ್ರಭಾವ: ಬ್ರಿಟಿಷ್ ವೈದ್ಯರ ಎಚ್ಚರಿಕೆ

State News
KARNATAKA

ಕಾರ್ಮಿಕರ ಕನಿಷ್ಠ ವೇತನ ಶೇ.60 ರಷ್ಟು ಹೆಚ್ಚಳ: ಸಿಎಂ ಸಿದ್ದರಾಮಯ್ಯ ಮಹತ್ವದ ಘೋಷಣೆ

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ರಾಷ್ಟ್ರ ನಿರ್ಮಾಣದಲ್ಲಿ ಹಗಲಿರುಳು ಶ್ರಮಿಸುತ್ತಿರುವ ಕಾರ್ಮಿಕ ವರ್ಗದ ಕಲ್ಯಾಣಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಘೋಷಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಕಾರ್ಮಿಕರ…

ಸರ್ಕಾರಿ, ಗೋಮಾಳ ಒತ್ತುವರಿ ತೆರವುಗೊಳಿಸದಿದ್ದರೆ ಅಧಿಕಾರಿಗಳ ತಲೆದಂಡ: ಮದ್ದೂರು ಶಾಸಕ ಕೆ.ಎಂ.ಉದಯ್ ಎಚ್ಚರಿಕೆ

ಶಿಂಷಾ ನದಿಗೆ ಅಡ್ಡಲಾಗಿ 4.50 ಕೋಟಿ ರೂ ವೆಚ್ಚದಲ್ಲಿ ಚೆಕ್ ಡ್ಯಾಂ ನಿರ್ಮಾಣ: ಮದ್ದೂರು ಶಾಸಕ ಕೆ.ಎಂ.ಉದಯ್ ಚಾಲನೆ

ಹೆಂಡತಿ ಮುಂದೆ ‘ಶ್ರೀಮಂತಿಕೆ’ ಬಿಲ್ಡಪ್ ಕೊಡಲು ಸರಗಳ್ಳನಾದ ಪತಿರಾಯ: ಮಂಡ್ಯದಲ್ಲಿ ₹70 ಲಕ್ಷದ ಚಿನ್ನದೊಂದಿಗೆ ನಾಲ್ವರು ಅಂದರ್!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.