ಬೆಂಗಳೂರು: ಈಗಾಗಲೇ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಿಗೆ ರಾಜ್ಯ ಸರ್ಕಾರವು ಇದೇ ಮೊದಲ ಬಾರಿಜೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಆದೇಶಿಸಿತ್ತು. ಈ ಬೆನ್ನಲ್ಲೇ ಗಡಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ ಸೋಮಶೇಖರ್ ( Minister Dr C Somashekhar ) ಅವರಿಗೂ ರಾಜ್ಯ ಸಚಿವರ ಸ್ಥಾನ ನೀಡಿ ಆದೇಶಿಸಿದೆ.
BREAKING NEWS: ನಾಳೆ ದೊಡ್ಡಬಳ್ಳಾಪುರದಲ್ಲಿ ನಡೆಯಬೇಕಿದ್ದ ಜನೋತ್ಸವ ಕಾರ್ಯಕ್ರಮ ಮುಂದೂಡಿಕೆ – ಸಿಎಂ ಬೊಮ್ಮಾಯಿ
ಈ ಸಂಬಂಧ ರಾಜ್ಯ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಗಡಿ ಪ್ರದೇಶಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ ಸೋಮಶೇಖರ್ ಅವರಿಗೆ, ತಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯ ಸಚಿವರ ಸ್ಥಾನಮಾನ ನೀಡಿ ಆದೇಶಿಸಿದ್ದಾರೆ.