ಬೆಂಗಳೂರು: ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಬೆಂಗಳೂರು ವಿಭಜಿಸುವಂತ ವಿಧೇಯಕಕ್ಕೆ ಅನುಮೋದನೆ ನೀಡಲಾಗಿದೆ. ಈ ಮೂಲಕ ಗ್ರೇಟರ್ ಬೆಂಗಳೂರು ರಚನೆಗೆ ಸಿಎಂ ಸಿದ್ಧರಾಮಯ್ಯ ನೇತೃತ್ವದ ರಾಜ್ಯ ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಬೆಂಗಳೂರನ್ನು ವಿಭಜಿಸುವಂತ ವಿಧೇಯಕಕ್ಕೆ ಅನುಮೋದನೆ ನೀಡಲಾಯಿತು.
ಗ್ರೇಟರ್ ಬೆಂಗಳೂರು ಅಥಾರಿಟಿ ಸಲಹೆಗೆ ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಸಿಎಂ ಸಿದ್ಧರಾಮಯ್ಯ ಅವರು ಗ್ರೇಟರ್ ಬೆಂಗಳೂರು ಅಥಾರಿಟಿಯ ಅಧ್ಯಕ್ಷರಾಗಲಿದ್ದಾರೆ.
ಇಂತಹ ವಿಧೇಯಕವನ್ನು ರಾಜ್ಯಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ನಂತ್ರ, ವಿಧಾನಸಭೆಯಲ್ಲಿ ಕೂಡ ರಾಜ್ಯ ಕಾಂಗ್ರೆಸ್ ಸರ್ಕಾರ ಮಂಡಿಸಲಿದೆ. ವಿಧಾನಮಂಡಲದ ಉಭಯ ಸದನಗಳಲ್ಲಿ ಬೆಂಗಳೂರು ವಿಭಜಿಸುವಂತ ವಿಧೇಯಕಕ್ಕೆ ಅಂಗೀಕಾರ ದೊರೆಯುತ್ತಾ ಅಂತ ಕಾದು ನೋಡಬೇಕಿದೆ.
BIG NEWS: ಶೀಘ್ರವೇ ‘ಮಾಲ್’ ಸೇರಿದಂತೆ ಇತರೆಡೆ ಪ್ರವೇಶಕ್ಕೆ ‘ವಸ್ತ್ರ ಸಂಹಿತೆ’ ಜಾರಿ: ಡಿಸಿಎಂ ಡಿ.ಕೆ ಶಿವಕುಮಾರ್