ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸೌಧದ ಮುಂದೆ ಈಗಾಗಲೇ ಹಲವು ಪ್ರತಿಮೆಗಳನ್ನು ಸ್ಥಾಪನೆ ಮಾಡಲಾಗಿದೆ. ಈಗ ಭುವನೇಶ್ವರಿ ಪ್ರತಿಮೆಯನ್ನು ಸ್ಥಾಪನೆ ಮಾಡೋದಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ.

ಈ ಕುರಿತಂತೆ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಸಂಪುಟದ ನಿರ್ಧಾರಗಳನ್ನು ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದರು. 23 ಕೋಟಿ ರೂ ವೆಚ್ಚದಲ್ಲಿ ವಿಧಾನಸೌಧದ ಆವರಣದಲ್ಲಿ ಭುವನೇಶ್ವರಿ ಪ್ರತಿಮೆ ಸ್ಥಾಪನೆಗೆ ನಿರ್ಧಾರ ಕೈಗೊಳ್ಳಲಾಗಿದೆ. ಕೆಂಗಲ್ ಹನುಮಂತಯ್ಯ ಪ್ರತಿಮೆ ರಸ್ತೆಯ ಪಕ್ಕದಲ್ಲೇ ಭುವನೇಶ್ವರಿ ಪ್ರತಿಮೆ ಸ್ಥಾಪನೆ ಆಗಲಿದೆ ಎಂದರು.

ಭುವನೇಶ್ವರಿ ಪ್ರತಿಮೆ ಸ್ಥಾಪನೆಗಾಗೆ ಕಲ್ಲು, ಲೋಹದಲ್ಲಿ ನಿರ್ಮಾಣಕ್ಕಾಗಿ ಹಣ ಬೇಕಾಗುತ್ತದೆ. ಈ ಹಿಂದೆ ಏರ್ಪೋರ್ಟ್ ನಲ್ಲಿ ಕೆಂಪೇಗೌಡ ಪ್ರತಿಮೆ ನಿರ್ಮಾಣಕ್ಕೆ 40 ರಿಂದ 60 ಕೋಟಿ ಖರ್ಚಾಗಿತ್ತು ಎಂದು ತಿಳಿಸಿದರು.

ಬೆಂಗಳೂರಲ್ಲಿ ಸಂಚಾರ ಸಮಸ್ಯೆ ತಡೆಗಟ್ಟೋ ನಿಟ್ಟಿನಲ್ಲಿ ಪರ್ಯಾಯ ವ್ಯವಸ್ಥೆ ಅಂತ ಇರೋದು ಮೆಟ್ರೋ ಮಾರ್ಗ ಮಾತ್ರವೇ ಆಗಿದೆ. ಭವಿಷ್ಯದಲ್ಲಿ ಅವಶ್ಯಕತೆ ಗಮನದಲ್ಲಿ ಇಟ್ಟುಕೊಂಡು 3ನೇ ಹಂತದ ಮೆಟ್ರೋ ಕಾಮಗಾರಿಗೆ ಒಪ್ಪಿಗೆ ನೀಡಲಾಗಿದೆ. ಎರಡು ಮಾರ್ಗಗಳಲ್ಲಿ ಮೆಟ್ರೋ ಕಾಮಗಾರಿ ಆರಂಭಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಲಾಗಿದೆ ಎಂದರು.

ಬೆಂಗಳೂರಲ್ಲಿ ‘ಜುವೆಲ್ಲರೀ ಶಾಪ್ ‘ ಮೇಲೆ ಗುಂಡಿನ ದಾಳಿ : ಪೊಲೀಸ್ ಆಯುಕ್ತ ಬಿ. ದಯಾನಂದ ಹೇಳಿದ್ದೇನು?

‘ಕಾನೂನು ಮಾಡುವ ಹಕ್ಕು ಸಂಸತ್ತಿಗಿದೆ’: CAA ಕುರಿತ ಕೇರಳ, ತಮಿಳುನಾಡು, ಬಂಗಾಳ ಸರ್ಕಾರಗಳಿಗೆ ‘ಅಮಿತ್ ಶಾ’ ಉತ್ತರ

Share.
Exit mobile version