ಬೆಂಗಳೂರು: ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕುಟುಂಬದ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ಸಂಬಂಧ ತನಿಖೆ ನಡೆಸಲು ಅನುಮತಿ ಕೋರಿದ್ದಂತ ರಾಜ್ಯ ಸರ್ಕಾರದ ಮನವಿಯನ್ನು ರಾಜ್ಯಪಾಲರು ಪುರಸ್ಕರಿಸದೇ ತಿರಸ್ಕರಿಸಿದ್ದರು. ಇದೀಗ ಮರು ಮನವಿ ಮಾಡಲು ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.
ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಇಂದಿನ ಸಭೆಯಲ್ಲಿ ಮಾಜಿ ಸಿಎಂ ಯಡಿಯೂರಪ್ಪ ವಿರುದ್ಧ ತನಿಖೆಗೆ ರಾಜ್ಯಪಾಲರನ್ನ ಕೋರಲು ಸರ್ಕಾರ ನಿರ್ಧರಿಸಿದೆ.
ಬಿಎಸ್ ವೈ ಕುಟುಂಬದ ಮೇಲೆ ಭ್ರಷ್ಟಾಚಾರದ ಆರೋಪ ಮಾಡಲಾಗಿದ್ದ ದೂರು ಸಂಬಂಧ ಪ್ರಾಸಿಕ್ಯೂಷನ್ ಗೆ ಅನುಮತಿಗೆ ನಿರ್ಧರಿಸಲಾಗಿದೆ. 2020ರ ನವೆಂಬರ್ ನಲ್ಲಿ ಟಿ ಜೆ ಅಬ್ರಹಾಂ ಎಸಿಬಿಗೆ ದೂರು ನೀಡಿದ್ರು. ಕ್ರಮಕ್ಕೆ ರಾಜ್ಯಪಾಲರನ್ನ ಕೋರಿದ್ರು. ಅದರೆ ಗವರ್ನರ್ ಅದಕ್ಕೆ ಅನುಮತಿ ಕೊಟ್ಟಿರಲಿಲ್ಲ. ಈಗ ಸರ್ಕಾರ ಇದರ ತನಿಖೆಗೆ ಒಪ್ಪಿಗೆ ನೀಡುವಂತೆ ಗವರ್ನರ್ ಗೆ ಮರು ಮನವಿ ಮಾಡಲು ನಿರ್ಧಾರ ಕೈಗೊಳ್ಳಲಾಗಿದೆ.
‘ಸೂಪರ್‌ಸ್ಟಾರ್ ಅಲ್ಲು ಅರ್ಜುನ್’ ಅಭಿಮಾನಿಗಳ ಗಮನಕ್ಕೆ: ಇಲ್ಲಿದೆ ಭೇಟಿಯಾಗಲು ಸುವರ್ಣಾವಕಾಶ
BREAKING: ಸಾಗರ ಬಳಿಯ ನಿರ್ಮಾಣ ಹಂತದ ಬಸವನಹೊಳೆ ಸೇತುವೆ ಕುಸಿತ: ತಪ್ಪಿದ ಭಾರೀ ಅನಾಹುತ